ಚಾಮರಾಜನಗರ: ಡೆತ್ ನೋಟ್ ಬರೆದಿಟ್ಟು ಉಪನ್ಯಾಸಕಿ ಆತ್ಮಹತ್ಯೆ
(ಚಂದನಾ - ಆತ್ಮಹತ್ಯೆ ಮಾಡಿಕೊಂಡ ಉಪನ್ಯಾಸಕಿ)
ಚಾಮರಾಜನಗರ, ಆ.9: ಕಾಲೇಜು ಉಪನ್ಯಾಸಕಿಯೊಬ್ಬರು ಹಾಸ್ಟೆಲ್ನಲ್ಲಿ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಚಾಮರಾಜನಗರದಲ್ಲಿ ಸಂಭವಿಸಿದೆ.
ಚಂದನಾ(26) ಆತ್ಮಹತ್ಯೆ ಮಾಡಿಕೊಂಡ ದುರ್ದೈವಿಯಾಗಿದ್ದು ಚಾಮರಾಜನಗರ ಜಿಲ್ಲೆಯ ಯಳಂದೂರು ತಾಲೂಕಿನ ಅಂಬಳೆ ಗ್ರಾಮದ ಚಂದನಾ, ಚಾಮರಾಜನಗರದ ಜೆ.ಎಸ್.ಎಸ್ ಕಾಲೇಜಿನಲ್ಲಿ ಉಪನ್ಯಾಸಕಿಯಾಗಿ ಕಾರ್ಯ ನಿರ್ವಹಿಸುತ್ತಿದ್ದರು ಎನ್ನಲಾಗಿದೆ.
ಮಂಗಳವಾರ ಜೆ.ಎಸ್.ಎಸ್ ಹಾಕಾಲೇಜಿನ ಹಾಸ್ಟೆಲ್ನಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ತಿಳಿದು ಬಂದಿದೆ.
ಡೆತ್ನೋಟ್ ಒಂದು ಪತ್ತೆಯಾಗಿದ್ದು, ‘ನನ್ನ ಸಾವಿಗೆ ನಾನೇ ಕಾರಣ’ ಎಂದು ಬರೆಯಲಾಗಿದೆ. ಚಾಮರಾಜನಗರ ಪಟ್ಟಣ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
Next Story