'ಲಂಚ ಮಂಚದ ಸರ್ಕಾರ' ಎಂದಿದ್ದಕ್ಕೆ ಬಿಜೆಪಿಯವರಿಗೆ ಉರಿ: ಪ್ರಿಯಾಂಕ್ ಖರ್ಗೆ
ಬೆಂಗಳೂರು: ''ರಾಜ್ಯ ಸರ್ಕಾರ ಹುದ್ದೆಗಳನ್ನು ಮಾರಾಟ ಮಾಡಲು ನಿಂತಿದೆ. ಯುವತಿಯರಿಗೆ ಉದ್ಯೋಗ ಬೇಕಾದರೆ ಮಂಚ ಹತ್ತಬೇಕು ಯುವಕರಿಗೆ ಉದ್ಯೋಗ ಬೇಕಾದರೆ ಲಂಚ ಕೊಡಬೇಕು ಎನ್ನುವಂತಾಗಿದ್ದು ಇದೊಂದು ಲಂಚದ ಮಂಚದ ಸರ್ಕಾರವಾಗಿದೆ'' ಎಂಬ ಚಿತ್ತಾಪುರ ಶಾಸಕ ಪ್ರಿಯಾಂಕ್ ಖರ್ಗೆ ಅವರ ಹೇಳಿಕೆಗೆ ಬಿಜೆಪಿ ನಾಯಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ಪ್ರಿಯಾಂಕ್, ''ನಾನು 'ಲಂಚ ಮಂಚದ ಸರ್ಕಾರ' ಎಂದಿದ್ದಕ್ಕೆ ಬಿಜೆಪಿಯವರಿಗೆ ಉರಿ ಬಿದ್ದಿದೆ. ಸತ್ಯ ಆ ಮಟ್ಟಿಗೆ ಕಹಿಯಾಗಿರುತ್ತದೆ ಎಂದು ಹೇಳಿದ್ದಾರೆ.
''ಬಿಜೆಪಿಯಲ್ಲಿ ಲಂಚ, ಮಂಚದ ಪುರಾಣವಿರದಿದ್ದರೆ ಒಬ್ಬ ಕೇಂದ್ರ ಸಚಿವರು, ಇನ್ನೊಬ್ಬ ರಾಜ್ಯ ಸಚಿವರು ರಾಜೀನಾಮೆ ನೀಡಿದ್ದೇಕೆ? ಬಿಜೆಪಿ ಸಂಸದರು, ಮಂತ್ರಿಗಳು,ಶಾಸಕರು ಕೋರ್ಟಿನಲ್ಲಿ ಸಾಲು ಸಾಲು ತಡೆಯಾಜ್ಞೆ ತಂದಿದ್ದೇಕೆ?'' ಎಂದು ಪ್ರಶ್ನಿಸಿದ್ದಾರೆ.
ಕಲಬುರಗಿ ನಗರದ ಕಾಂಗ್ರೆಸ್ ಕಚೇರಿಯಲ್ಲಿ ಇಂದು (ಶುಕ್ರವಾರ) ಸುದ್ದಿಗೋಷ್ಠಿ ನಡೆಸಿರುವ ಪ್ರಿಯಾಂಕ್ ಖರ್ಗೆ, KPTCL ನೇಮಕಾತಿ ಪರೀಕ್ಷೆಯಲ್ಲೂ ಅಕ್ರಮ ನಡೆದಿರುವ ಬಗ್ಗೆ ಆರೋಪಿಸಿ ರಾಜ್ಯ ಸರಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದರು.
ಇದನ್ನೂ ಓದಿ... ಉದ್ಯೋಗ ಬೇಕಾದರೆ ಯುವಕರು ಲಂಚ ಕೊಡಬೇಕು, ಯುವತಿಯರು...: ಪ್ರಿಯಾಂಕ್ ಖರ್ಗೆ
ನಾನು 'ಲಂಚ ಮಂಚದ ಸರ್ಕಾರ' ಎಂದಿದ್ದಕ್ಕೆ ಬಿಜೆಪಿಯವರಿಗೆ ಉರಿ ಬಿದ್ದಿದೆ! ಸತ್ಯ ಆ ಮಟ್ಟಿಗೆ ಕಹಿಯಾಗಿರುತ್ತದೆ!
— Priyank Kharge / ಪ್ರಿಯಾಂಕ್ ಖರ್ಗೆ (@PriyankKharge) August 12, 2022
ಬಿಜೆಪಿಯಲ್ಲಿ ಲಂಚ, ಮಂಚದ ಪುರಾಣವಿರದಿದ್ದರೆ ಒಬ್ಬ ಕೇಂದ್ರ ಸಚಿವರು, ಇನ್ನೊಬ್ಬ ರಾಜ್ಯ ಸಚಿವರು ರಾಜೀನಾಮೆ ನೀಡಿದ್ದೇಕೆ?
ಬಿಜೆಪಿ ಸಂಸದರು, ಮಂತ್ರಿಗಳು,ಶಾಸಕರು ಕೋರ್ಟಿನಲ್ಲಿ ಸಾಲು ಸಾಲು ತಡೆಯಾಜ್ಞೆ ತಂದಿದ್ದೇಕೆ?