Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಸ್ವಾತಂತ್ರ್ಯದ ಜಾಹೀರಾತು: ನೆಹರೂ ಹೆಸರು...

ಸ್ವಾತಂತ್ರ್ಯದ ಜಾಹೀರಾತು: ನೆಹರೂ ಹೆಸರು ಕೈಬಿಟ್ಟು ಸಾವರ್ಕರ್ ಫೋಟೋ ಹಾಕಿದ ರಾಜ್ಯ ಸರಕಾರ

►ಮೊದಲ ಸಾಲಿನಲ್ಲಿ ಸಾವರ್ಕರ್ ಎರಡನೇ ಸಾಲಿನಲ್ಲಿ ಅಂಬೇಡ್ಕರ್‌! ►ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕ ಆಕ್ರೋಶ

ವಾರ್ತಾಭಾರತಿವಾರ್ತಾಭಾರತಿ14 Aug 2022 12:23 PM IST
share
ಸ್ವಾತಂತ್ರ್ಯದ ಜಾಹೀರಾತು: ನೆಹರೂ ಹೆಸರು ಕೈಬಿಟ್ಟು ಸಾವರ್ಕರ್ ಫೋಟೋ ಹಾಕಿದ ರಾಜ್ಯ ಸರಕಾರ

ಬೆಂಗಳೂರು: ಕರ್ನಾಟಕ(Karnataka) ಸರಕಾರ ಸ್ವಾತಂತ್ರ್ಯದ ಅಮೃತ ಮಹೋತ್ಸವ(Azadi Ka Amrit Mahotsav) ಅಂಗವಾಗಿ ಇಂದು ಕನ್ನಡದ ದಿನಪತ್ರಿಕೆಗಳಿಗೆ ನೀಡಿರುವ ಜಾಹೀರಾತಿನಲ್ಲಿ ಸಾವರ್ಕರ್(Savarkar) ಪೋಟೋ ಸೇರಿಸಿ ದೇಶದ ಪ್ರಥಮ ಪ್ರಧಾನಿ ಜವಾಹರಲಾಲ್ ನೆಹರೂ(Jawaharlal Nehru) ಅವರನ್ನು ಕೈಬಿಟ್ಟಿರುವುದಕ್ಕೆ ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ. 

ಸರಕಾರ ದಿನಪತ್ರಿಕೆಗಳಿಗೆ ನೀಡಿರುವ ಜಾಹೀರಾತಿನಲ್ಲಿ ಮಹಾತ್ಮ ಗಾಂಧೀಜಿ, ಸುಭಾಷ್ ಚಂದ್ರಬೋಸ್‌, ಸರ್ದಾರ್‌ ವಲ್ಲಭಭಾಯಿ ಪಟೇಲ್‌, ಲಾಲ್‌ ಬಹದ್ದೂರ್‌ ಶಾಸ್ತ್ರಿ, ಮೌಲಾನ ಅಬ್ದುಲ್‌ ಕಲಾಂ ಆಝಾದ್‌,ಡಾ.ಬಿ.ಆರ್‌.ಅಂಬೇಡ್ಕರ್‌ ಸಹಿತ ಇತರ ನಾಯಕರ ಫೋಟೋಗಳ ಜೊತೆಗೆ ಬ್ರಿಟಿಷ್ ಸರಕಾರದೊಂದಿಗೆ ಕ್ಷಮೆ ಕೇಳಿದ ಸಾವರ್ಕರ್‌ ಫೋಟೋವನ್ನು ‘ಕ್ರಾಂತಿಕಾರಿ’ ಎಂಬ ಬಿರುದಿನೊಂದಿಗೆ ಪ್ರಕಟಿಸಿರುವುದು ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. 

ಅಲ್ಲದೇ ಸಂವಿಧಾನ ಶಿಲ್ಪಿ ಡಾ.ಬಿ.ಆರ್‌.ಅಂಬೇಡ್ಕರ್‌ ಅವರನ್ನು ಎರಡನೇ ಸಾಲಿನಲ್ಲಿಟ್ಟು ಸಾವರ್ಕರ್ ರನ್ನು ಮೊದಲ ಸಾಲಿನಲ್ಲಿ ಇಟ್ಟಿರುವುದಕ್ಕೂ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ.

ಸರಕಾರದ ಈ ಜಾಹೀರಾತಿಗೆ ರಾಜ್ಯದ ಹಿರಿಯ ಲೇಖಕರ ಸಹಿತ ಅನೇಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

"ಸ್ವಾತಂತ್ರ್ಯೋತ್ಸವ ಸಂದರ್ಭದಲ್ಲಿ ರಾಜ್ಯ ಸರ್ಕಾರ ಮಾಧ್ಯಗಳಿಗೆ ನೀಡಿದ ಜಾಹಿರಾತಿನಲ್ಲಿ ದೇಶದ ಮೊದಲ ಪ್ರಧಾನಿ ಜವಾಹರಲಾಲ್ ನೆಹರೂ ಅವರ ಪಟ ಇಲ್ಲ.ಅಂದಿನ ಹೋರಾಟದಲ್ಲಿ ಹತ್ತು ವರ್ಷಕ್ಕಿಂತ ಹೆಚ್ಚು ಕಾಲ ಸೆರೆಮನೆ ವಾಸ ಅನುಭವಿಸಿದ ಅಪಾರ ತ್ಯಾಗ ಮಾಡಿದ ನೆಹರೂ ಅವರನ್ನು ಕಡೆಗಣಿಸುವಷ್ಟು ಸಣ್ಣ ತನ ಒಳ್ಳೆಯದಲ್ಲ. ಬ್ರಿಟಿಷ್ ಸರಕಾರಕ್ಕೆ ಕ್ಷಮಾಪಣೆ ಕೇಳಿ ಜೈಲಿನಿಂದ ಹೊರಗೆ ಬಂದವರ ಪಟ ಹಾಕುವ ಸಿ.ಎಂ.ಬಸವರಾಜ ಬೊಮ್ಮಾಯಿಯವರೇ ನಿಮ್ಮ ಅಧಿಕಾರಾವಧಿಯಲ್ಲಿ ಇಂಥ ಅಪಚಾರ ನಡೆಯಬಾರದಿತ್ತು" ಎಂದು ಹಿರಿಯ ಲೇಖಕ ಸನತ್ ಕುಮಾರ್ ಬೆಳಗಲಿ ಅವರು ಪೋಸ್ಟ್ ಮಾಡಿದ್ದಾರೆ. 

"ಕ್ಷಮೆ ಕೇಳಿ ಅಂಡಮಾನ್ ಜೈಲಿನಿಂದ ಹೊರಬಂದು ಸ್ವಾತಂತ್ರ್ಯ ಹೋರಾಟದಿಂದ ವಿಮುಖನಾದ ಸಾವರ್ಕರ್ ಪಟ ಇದೆ. ಅದೇ ಅಂಡಮಾನ್ ಜೈಲಿನಲ್ಲಿ ಒಂದು ದಿನವೂ ವಿಚಲಿತರಾಗದೆ, ಬ್ರಿಟಿಷ್ ಪ್ರಭುತ್ವಕ್ಕೆ ತಲೆಬಾಗದೆ ಕರಿನೀರು ಶಿಕ್ಷೆಯನ್ನು ಅನುಭವಿಸಿದ, ಅಲ್ಲಿಯೇ ಅಮರರಾದ ಪ್ರಮುಖ ಕ್ರಾಂತಿಕಾರಿಗಳ ಉಲ್ಲೇಖ ಇಲ್ಲ. ಬ್ರಿಟಿಷ್ ಗಲ್ಲುಗಂಭದಲ್ಲಿ ಕೊರಳೊಡ್ಡಿ ಹುತಾತ್ಮರಾದ ರಾಮ್ ಪ್ರಸಾದ್ ಭಿಸ್ಮಿಲ್, ಅಶ್ಫಖುಲ್ಲಾ ಖಾನ್ ಎಂಬ ಅಮರ ಕ್ರಾಂತಿಕಾರಿ ಜೋಡಿಗೂ ಇವರ "ಸರಕಾರಿ" ಜಾಹೀರಾತಿನಲ್ಲಿ ಜಾಗ ಇಲ್ಲ. ಇಂತಹ ಬಿಜೆಪಿ ಪಕ್ಷವನ್ನು "ದೇಶಭಕ್ತರ ಪಕ್ಷ" ಎಂದು ನಾವು ನಂಬ ಬೇಕು." ಎಂದು ಡಿವೈಎಫ್ ಐ ರಾಜ್ಯಾಧ್ಯಕ್ಷ ಮುನೀರ್ ಕಾಟಿಪಳ್ಳ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸರಕಾರದ ಜಾಹೀರಾತಿನಲ್ಲಿ ರೇಖಾಚಿತ್ರದಲ್ಲಿಯೂ ರಾಷ್ಟ್ರನಾಯಕರ ಫೋಟೋಗಳನ್ನು ಬಳಸಲಾಗಿದ್ದು, ಅಲ್ಲಿ ನೆಹರೂ ಅವರ ಚಿತ್ರವನ್ನು ನೀಡಲಾಗಿದೆ. ರೇಖಾಚಿತ್ರದಲ್ಲಿಯೂ ಸಾವರ್ಕರ್‌ ಚಿತ್ರವನ್ನು ನೆಹರೂ ಅವರಿಗಿಂತ ಮೇಲೆ ಇಡಲಾಗಿದೆ.

ನೆಹರೂ ಹೆಸರನ್ನು ಜಾಹೀರಾತಿನಿಂದ ಕೈ ಬಿಟ್ಟಿರುವುದು ಅಕ್ಷಮ್ಯ: ಡಿಕೆಶಿ ಆಕ್ರೋಶ

"ಸಾರ್ವಜನಿಕರ ಹಣದಲ್ಲಿ ದ್ವೇಷ ತೀರಿಸಿಕೊಳ್ಳುವ ಚಾಳಿಯನ್ನು BJP ಮುಂದುವರಿಸಿದೆ. ಸ್ವಾತಂತ್ರ್ಯ ಚಳುವಳಿಯಲ್ಲಿ ಪಾಲ್ಗೊಂಡಿದ್ದಕ್ಕಾಗಿ ಪಂ. ಜವಾಹರ್‌ಲಾಲ್‌ ನೆಹರೂ ಅವರನ್ನು ಬ್ರಿಟಿಷರು 9 ಬಾರಿ ಬಂಧಿಸಿ 3259 ದಿನ ಜೈಲಿನಲ್ಲಿರಿಸಿದ್ದರು. ರಾಜಕೀಯ ದುರುದ್ದೇಶದಿಂದ ನೆಹರೂ ಅವರ ಹೆಸರನ್ನು ಜಾಹೀರಾತಿನಿಂದ ಕೈ ಬಿಟ್ಟಿರುವುದು ಅಕ್ಷಮ್ಯ" ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಟ್ವೀಟ್ ಮಾಡಿದ್ದಾರೆ.

ಸಾರ್ವಜನಿಕರ ಹಣದಲ್ಲಿ ದ್ವೇಷ ತೀರಿಸಿಕೊಳ್ಳುವ ಚಾಳಿಯನ್ನು BJP ಮುಂದುವರಿಸಿದೆ. ಸ್ವಾತಂತ್ರ್ಯ ಚಳುವಳಿಯಲ್ಲಿ ಪಾಲ್ಗೊಂಡಿದ್ದಕ್ಕಾಗಿ ಪಂ. ಜವಾಹರ್‌ಲಾಲ್‌ ನೆಹರೂ ಅವರನ್ನು ಬ್ರಿಟಿಷರು 9 ಬಾರಿ ಬಂಧಿಸಿ 3259 ದಿನ ಜೈಲಿನಲ್ಲಿರಿಸಿದ್ದರು. ರಾಜಕೀಯ ದುರುದ್ದೇಶದಿಂದ ನೆಹರೂ ಅವರ ಹೆಸರನ್ನು ಜಾಹೀರಾತಿನಿಂದ ಕೈ ಬಿಟ್ಟಿರುವುದು ಅಕ್ಷಮ್ಯ.
1/3

— DK Shivakumar (@DKShivakumar) August 14, 2022

ಸ್ವಾತಂತ್ರ್ಯ ಹೋರಾಟದಲ್ಲಿ ಭಾಗವಹಿಸಿದ್ದಕ್ಕಾಗಿ ಒಟ್ಟೂ 3259 ದಿನ (ಸುಮಾರು 9 ವರ್ಷ) ಜೈಲಿನಲ್ಲಿ ಕಳೆದು ಜವಾಹರಲಾಲ್ ನೆಹರೂರವರ ಹೆಸರು ಪಟ್ಟಿಯಲ್ಲಿ ಇಲ್ಲ‌.ಆದರೆ ಬ್ರಟಿಷರಿಗೆ ಕ್ಷಮಾಪಣೆ ಪತ್ರ ಬರೆದುಕೊಟ್ಟು,ನಂತರ ಕೊನೆಯವರೆಗೂ ಸ್ವಾತಂತ್ರ್ಯ ಹೋರಾಟದಲ್ಲಿ ಭಾಗವಹಿಸದ ಹೇಡಿ ಸಾವರ್ಕರ್ ಗೆ ಸ್ವಾತಂತ್ರ್ಯ ಹೋರಾಟಗಾರರ ಪಟ್ಟಿಯಲ್ಲಿ ಸ್ಥಾನವಿದೆ pic.twitter.com/gg84n7bfdD

— Nagesh Kariyappa (@Nagesh_nsui6) August 14, 2022
share
ವಾರ್ತಾಭಾರತಿ
ವಾರ್ತಾಭಾರತಿ
Next Story
X