ಸಿದ್ದರಾಮಯ್ಯ ಕಿರಿಯ ಸಹೋದರ ರಾಮೇಗೌಡ ನಿಧನ
(ರಾಮೇಗೌಡ)
ಮೈಸೂರು, ಆ.26: ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ (Siddaramaiah) ಅವರ ಕಿರಿಯ ಸಹೋದರ ರಾಮೇಗೌಡ (64) ನಿಧನರಾದರು.
ಕಳೆದ ಕೆಲ ದಿನಗಳಿಂದ ಅನಾರೋಗ್ಯಕ್ಕೀಡಾಗಿದ್ದ ಅವರು ಶುಕ್ರವಾರ ರಾತ್ರಿ ಅವರ ಸ್ವಗ್ರಾಮ ಮೈಸೂರು ತಾಲೂಕು ಸಿದ್ದರಾಮನ ಹುಂಡಿಯ ಅವರ ಸ್ವಗೃಹದಲ್ಲಿ ನಿಧನರಾಗಿದ್ದಾರೆ.
ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರ ಕೊನೆಯ ಸಹೋದರ ಎಂದು ತಿಳಿದು ಬಂದಿದೆ.
ಮೃತ ರಾಮೇಗೌಡರ ಅಂತ್ಯಕ್ರಿಯೆ ಶನಿವಾರ ಅವರ ಸ್ವಗ್ರಾಮ ಸಿದ್ದರಾಮನ ಹುಂಡಿಯ ಅವರ ಜಮೀನಿನಲ್ಲಿ ನಡೆಯಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.
ಮೃತರು ಪತ್ನಿ ರುಕ್ಮಿಣಮ್ಮ, ಇಬ್ಬರು ಪುತ್ರರು, ಓರ್ವ ಪುತ್ರಿ ಸೇರಿದಂತೆ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ.
ಶಾಸಕಾಂಗ ಪಕ್ಷದ ನಾಯಕರಾದ ಶ್ರೀ @Siddaramaiah ಅವರ ಕಿರಿಯ ಸಹೋದರ ಶ್ರೀ ರಾಮೇಗೌಡ ಅವರು ಅನಾರೋಗ್ಯದಿಂದ ನಿಧನರಾದ ವಿಷಯ ತಿಳಿದು ಮನಸ್ಸಿಗೆ ದುಃಖವಾಯಿತು. ಅವರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಪ್ರಾರ್ಥಿಸುತ್ತೇನೆ. ಕುಟುಂಬದವರ ನೋವಿನಲ್ಲಿ ನಾನೂ ಕೂಡ ಭಾಗಿ. pic.twitter.com/sMgQ5DYVpM
— DK Shivakumar (@DKShivakumar) August 27, 2022
Next Story