ನಕ್ಷತ್ರ ಆಮೆ ಮಾರಾಟ ಯತ್ನ: ಇಬ್ಬರು ಆರೋಪಿಗಳ ಬಂಧನ
ಮಡಿಕೇರಿ ಆ.27 : ಅಳಿವಿನಂಚಿನಲ್ಲಿರುವ ನಕ್ಷತ್ರ ಆಮೆಯನ್ನು ಅಕ್ರಮವಾಗಿ ಮಾರಾಟ ಮಾಡಲು ಯತ್ನಿಸುತ್ತಿದ್ದ ಇಬ್ಬರು ಆರೋಪಿಗಳನ್ನು ಮಡಿಕೇರಿ ಸಿ.ಐ.ಡಿ. ಪೊಲೀಸ್ ಅರಣ್ಯ ಸಂಚಾರಿ ದಳ ಬಂಧಿಸಿದೆ.
ಎಸ್.ಎ.ಜಗದೀಶ್ ಕುಮಾರ್ ಹಾಗೂ ಶೇಖ್ ಗೈಲೂಸ ಬಂಧಿತ ಆರೋಪಿಗಳಾಗಿದ್ದಾರೆ. ಹಾರಂಗಿ ಬೊಳ್ಳೂರು ಮಾದಾಪಟ್ಟಣ ರಸ್ತೆಯ ಜಂಕ್ಷನ್ ಬಳಿ ದಾಳಿ ನಡೆಸಿದ ಪೊಲೀಸರು ಆರೋಪಿಗಳ ಸಹಿತ ಒಂದು ನಕ್ಷತ್ರ ಆಮೆಯನ್ನು ವಶಕ್ಕೆ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ.
ಸಿ.ಐ.ಡಿ ಪೊಲೀಸ್ ಅರಣ್ಯ ಘಟಕದ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ ಕೆ.ವಿ.ಶರತ್ ಚಂದ್ರ ಅವರ ನಿರ್ದೇಶನದ ಮೇರೆಗೆ ಮಡಿಕೇರಿ ಸಿ.ಐ.ಡಿ ಪೊಲೀಸ್ ಅರಣ್ಯ ಘಟಕದ ಪೊಲೀಸ್ ಅಧೀಕ್ಷ ಕೆ.ಬಿ.ವಿಶ್ವನಾಥ್ ಅವರ ಮಾರ್ಗದರ್ಶನದಲ್ಲಿ ಮಡಿಕೇರಿ ಅರಣ್ಯ ಸಂಚಾರಿ ದಳದ ಪಿ.ಎಸ್.ಐ ಸಿ.ಯು.ಸವಿ, ಹೆಡ್ ಕಾನ್ಸ್ಟೇಬಲ್ ಗಳಾದ ಶೇಖರ್, ರಾಜೇಶ್, ರಾಘವೇಂದ್ರ, ಯೋಗೇಶ್, ಮೋಹನ, ಕಾನ್ಸ್ಟೇಬಲ್ಗಳಾದ ಸ್ವಾಮಿ ಹಾಗೂ ಮಂಜುನಾಥ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು.
Next Story