Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಆಧಾರರಹಿತ ಆರೋಪ ಮಾಡಿದವರ ವಿರುದ್ಧ...

ಆಧಾರರಹಿತ ಆರೋಪ ಮಾಡಿದವರ ವಿರುದ್ಧ ಮಾನನಷ್ಟ ಮೊಕದ್ದಮೆ: ಸಚಿವ ಬಿ.ಸಿ.ನಾಗೇಶ್

ಶಿಕ್ಷಣ ಇಲಾಖೆಯಲ್ಲಿ ಕಮಿಷನ್ ವಿಚಾರ

ವಾರ್ತಾಭಾರತಿವಾರ್ತಾಭಾರತಿ29 Aug 2022 8:43 PM IST
share
ಆಧಾರರಹಿತ ಆರೋಪ ಮಾಡಿದವರ ವಿರುದ್ಧ ಮಾನನಷ್ಟ ಮೊಕದ್ದಮೆ: ಸಚಿವ ಬಿ.ಸಿ.ನಾಗೇಶ್

ಬೆಂಗಳೂರು, ಆ.29: ವೈಯಕ್ತಿಕವಾಗಿ ಹಾಗೂ ಶಿಕ್ಷಣ ಇಲಾಖೆಯ ವಿರುದ್ಧ ಆರೋಪ ಮಾಡಿರುವ ವ್ಯಕ್ತಿಯಿಂದ ದಾಖಲೆಗಳನ್ನು ಪಡೆದು, ವಿಚಾರಣೆ ನಡೆಸಿ ಕ್ರಮ ಕೈಗೊಳ್ಳಲು ಸಾರ್ವಜನಿಕ ಶಿಕ್ಷಣ ಇಲಾಖೆಯ ಆಯುಕ್ತರಿಗೆ ನಿರ್ದೇಶನ ನೀಡಲಾಗಿದೆ. ಹಾಗೆಯೇ ಆಧಾರರಹಿತ ಸುಳ್ಳು ಆರೋಪಗಳನ್ನು ಮಾಡಿರುವವವರ ವಿರುದ್ಧ ನ್ಯಾಯಾಲಯದಲ್ಲಿ ಮಾನನಷ್ಟ ಮೊಕದ್ದಮೆ ಹೂಡುತ್ತೇನೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತೆ ಸಚಿವ ಬಿ.ಸಿ. ನಾಗೇಶ್ (B. C. Nagesh) ತಿಳಿಸಿದ್ದಾರೆ.

ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ದುರುದ್ದೇಶ ಹಾಗೂ ವೈಯಕ್ತಿಕ ತೇಜೋವಧೆ ಮಾಡುವ ಉದ್ದೇಶದಿಂದ ಆಧಾರರಹಿತ ಆರೋಪಗಳನ್ನು ನನ್ನ ವಿರುದ್ಧ ಮಾಡಲಾಗಿದೆ. ಶಿಕ್ಷಣ ಇಲಾಖೆಯಲ್ಲಿ ಭ್ರಷ್ಟಾಚಾರ ನಡೆಯುತ್ತಿದೆ ಎಂದು ಆರೋಪ ಮಾಡಲಾಗಿದೆ. ಆದರೆ, ಈ ಕುರಿತು ನಮ್ಮ ಕಚೇರಿಗೆ ಯಾವುದೇ ದೂರುಗಳನ್ನು ನೀಡಿಲ್ಲ. ಆಯುಕ್ತರ ಕಚೇರಿಗೂ ಯಾವುದೇ ದೂರು ನೀಡಿಲ್ಲ. ಸಾಕ್ಷ್ಯಾಧಾರಗಳ ಸಮೇತ ದೂರು ನೀಡಿದರೆ ಈ ಬಗ್ಗೆ ಸಂಬಂಧಿಸಿದವರ ವಿರುದ್ಧ ಸೂಕ್ತ ವಿಚಾರಣೆ ನಡೆಸಿ ಕ್ರಮ ಕೈಗೊಳ್ಳಲಾಗುತ್ತದೆ. ನಮ್ಮ ಕಚೇರಿಗೆ ದೂರು ನೀಡಲಾಗದಿದ್ದರೆ ತನಿಖಾ ಸಂಸ್ಥೆಗಳು, ನ್ಯಾಯಾಲಯಗಳಿಗೂ ದೂರು ನೀಡಬಹುದು. ಸಾಕ್ಷ್ಯಾಧಾರ ಸಹಿತ ದೂರು ನೀಡುವುದನ್ನು ಮುಕ್ತವಾಗಿ ಸ್ವಾಗತಿಸುತ್ತೇನೆ. ಆದರೆ, ಆಧಾರರಹಿತ ಆರೋಪ ಮಾಡುವುದು ಬೇಜವಾಬ್ದಾರಿತನದ ಪರಮಾವಧಿ’ ಎಂದರು.

ಇದನ್ನೂ ಓದಿ: ಶಿಕ್ಷಣ ಇಲಾಖೆಯ ಭ್ರಷ್ಟತೆಯನ್ನು ಮರೆಮಾಚುವ ಯತ್ನ: ಲೋಕೇಶ್ ತಾಳಿಕಟ್ಟೆ 

‘ಶಾಲೆಗಳ ಪ್ರಥಮ ಮಾನ್ಯತೆ ಮತ್ತು ಮಾನ್ಯತೆ ನವೀಕರಣ ಪ್ರಕ್ರಿಯೆಯನ್ನು ಪಾರದರ್ಶಕ ಹಾಗೂ ತ್ವರಿತಗೊಳಿಸಲು ಆನ್‍ಲೈನ್ ವ್ಯವಸ್ಥೆ ಕಲ್ಪಿಸಲಾಗಿದೆ. ಅರ್ಜಿ ಸಲ್ಲಿಸುವ ಶಾಲೆಗಳಿಗೆ ತ್ರಿಸದಸ್ಯ ಸಮಿತಿ ಭೇಟಿ ನೀಡಿದಾಗ ಶಾಲೆಯ ಪ್ರತಿನಿಧಿಗಳು ಸ್ಥಳದಲ್ಲಿದ್ದು, ಶಾಲೆಯಲ್ಲಿನ ಮೂಲಸೌಕರ್ಯಗಳ ವಿವರಗಳನ್ನು ನೀಡಬೇಕು. ಬೇರೆ ಯಾವುದೇ ಕಾರಣಗಳಿಗೆ ಶಿಕ್ಷಣ ಇಲಾಖೆಯ ಕಚೇರಿಗೆ ಭೇಟಿ ನೀಡುವ ಅಗತ್ಯತೆ ಇರುವುದಿಲ್ಲ. ಹೊಸ ಶಾಲೆಗಳ ಆರಂಭಕ್ಕೆ ಸಂಬಂಧಿಸಿದಂತೆ ಲೋಕೋಪಯೋಗಿ ಇಲಾಖೆ ಮತ್ತು ಅಗ್ನಿಶಾಮಕ ಇಲಾಖೆಯಿಂದ ಪ್ರಮಾಣಪತ್ರ ಪಡೆಯಲು ವಿಳಂಬವಾಗುತ್ತಿದೆ ಎಂದು ಶಿಕ್ಷಣ ಸಂಸ್ಥೆಗಳು ಮನವಿ ಸಲ್ಲಿಸಿದ್ದವು. ಹಿನ್ನೆಲೆಯಲ್ಲಿ ಈ ಸಾಲಿನಲ್ಲಿ ಹೊಸ ಶಾಲೆ ನೋಂದಣಿಗೆ ಆನ್‍ಲೈನ್ ಮೂಲಕ ಅರ್ಜಿ ಸಲ್ಲಿಸಲು ಒಟ್ಟು ಎಂಟು ಬಾರಿ ದಿನಾಂಕವನ್ನು ವಿಸ್ತರಣೆ ಮಾಡಲಾಗಿದೆ’ ಎಂದು ಸ್ಪಷ್ಟಪಡಿಸಿದರು.

‘ಇಲಾಖೆಯಿಂದ ಅನುಮತಿ, ಮಾನ್ಯತೆಯನ್ನು ಪಡೆದುಕೊಳ್ಳದೇ ನಿಯಮಬಾಹಿರವಾಗಿ ಹೊಸದಾಗಿ ಆರಂಭಿಸಲಾಗಿರುವ ಶಾಲೆಗಳ ಕುರಿತು ಶಿಕ್ಷಣ ಇಲಾಖೆಯಿಂದ ಪರಿಶೀಲನೆ ನಡೆದಿದೆ. ನಿಯಮ ಪಾಲಿಸದ ಶಾಲೆಗಳಲ್ಲಿ ಕಲಿಯುವ ಮಕ್ಕಳಿಗೆ ಗ್ರಾಮೀಣ ವಿದ್ಯಾಭ್ಯಾಸ ಪ್ರಮಾಣಪತ್ರ, ಕನ್ನಡ ಮಾಧ್ಯಮ ಪ್ರಮಾಣಪತ್ರ, ವ್ಯಾಸಂಗ ಪ್ರಮಾಣಪತ್ರ ಸೇರಿದಂತೆ ಇನ್ನಿತರ ಪ್ರಮಾಣಪತ್ರಗಳನ್ನು ಪಡೆಯಲು ಭವಿಷ್ಯದಲ್ಲಿ ತೊಂದರೆಯಾಗಬಾರದು ಎಂಬ ಸದುದ್ದೇಶದಿಂದ ಈ ಪರಿಶೀಲನೆ ಪ್ರಕ್ರಿಯೆ ನಡೆಸಲಾಗುತ್ತಿದೆ. ಮಕ್ಕಳ ಭವಿಷ್ಯಕ್ಕಾಗಿ ಕೈಗೊಳ್ಳಲಾದ ಸರಕಾರ ಈ ಕ್ರಮವನ್ನು ಸಹಿಸದ ಕೆಲವು ಶಿಕ್ಷಣ ವಿರೋಧಿ ಶಕ್ತಿಗಳು ಈ ಸುಳ್ಳು ಆರೋಪ ಮಾಡುತ್ತಿರಬಹುದು. ಇದರಲ್ಲಿ ಬ್ಲಾಕ್‍ಮೇಲ್ ತಂತ್ರವೂ ಅಡಗಿರಬಹುದು.’ ಎಂದು ಅನುಮಾನ ವ್ಯಕ್ತಪಡಿಸಿದರು.


ಯಾವುದೇ ಖಾಸಗಿ ಶಾಲೆ ಮತ್ತು ಆ ಶಾಲೆಗಳಲ್ಲಿ ಕಲಿಯುತ್ತಿರುವ ಮಕ್ಕಳಿಗೆ ಯಾವುದೇ ರೀತಿಯಿಂದಲೂ ತೊಂದರೆಯಾಗದಂತೆ ಸರಕಾರ ಕ್ರಮ ವಹಿಸಲಿದೆ. ಆದರೆ, ಶಾಲೆಗಳು ಕರ್ನಾಟಕ ಶಿಕ್ಷಣ ಕಾಯ್ದೆ ಮತ್ತು ಸುಪ್ರೀಂಕೋರ್ಟ್ ನಿರ್ದೇಶನಗಳು, ಮಾರ್ಗಸೂಚಿ ಅನುಸಾರ ಸುರಕ್ಷತಾ ಕ್ರಮಗಳನ್ನು ಪಾಲಿಸಬೇಕು. ಸುಪ್ರೀಂಕೋರ್ಟ್ ಆದೇಶದ ಉಲ್ಲಂಘನೆಯಾಗದಂತೆ ಸಂಬಂಧಿಸಿದ ಇಲಾಖೆಗಳ ಚರ್ಚಿಸಿ ಶಾಲಾ ಕಟ್ಟಡ ಮತ್ತು ಅಗ್ನಿ ಸುರಕ್ಷತೆ ಪರಿಶೀಲನೆ ಪ್ರಕ್ರಿಯೆಯನ್ನು ಸರಳೀಕರಿಸಲಾಗಿದೆ. ಶಾಲಾ ಕಟ್ಟಡಗಳ ಸುರಕ್ಷತೆ ಕುರಿತು ಪರಿಶೀಲನೆಯನ್ನು ಈ ಹಿಂದೆ ಕಾರ್ಯನಿರ್ವಾಹಕ ಅಭಿಯಂತರರು ಮಾಡುತ್ತಿದ್ದರು. ಇದನ್ನು ಬದಲಾವಣೆ ಮಾಡಿ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರಿಗೆ ಅಧಿಕಾರ ವಿಕೇಂದ್ರೀಕರಿಸಲಾಗಿದೆ.

-ಬಿ.ಸಿ.ನಾಗೇಶ್, ಶಿಕ್ಷಣ ಸಚಿವ

share
ವಾರ್ತಾಭಾರತಿ
ವಾರ್ತಾಭಾರತಿ
Next Story
X