Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಬೆಂಗಳೂರು- ಮೈಸೂರು ಹೆದ್ದಾರಿಯ...

ಬೆಂಗಳೂರು- ಮೈಸೂರು ಹೆದ್ದಾರಿಯ ಪ್ಲ್ಯಾನಿಂಗ್ ಮಾಡಿದವರಿಗೆ ಪ್ರಶಸ್ತಿ ಕೊಡಿಸಬೇಕು: ಡಿಕೆಶಿ ಆಕ್ರೋಶ

ವಾರ್ತಾಭಾರತಿವಾರ್ತಾಭಾರತಿ30 Aug 2022 3:30 PM IST
share
ಬೆಂಗಳೂರು- ಮೈಸೂರು ಹೆದ್ದಾರಿಯ ಪ್ಲ್ಯಾನಿಂಗ್ ಮಾಡಿದವರಿಗೆ ಪ್ರಶಸ್ತಿ ಕೊಡಿಸಬೇಕು: ಡಿಕೆಶಿ ಆಕ್ರೋಶ

ಬೆಂಗಳೂರು: 'ಬೆಂಗಳೂರು- ಮೈಸೂರು ಹೆದ್ದಾರಿ  ಪ್ಲ್ಯಾನ್ ಮಾಡಿರುವ ಇಂಜಿನಿಯರ್ ಗಳಿಗೆ ಮುಖ್ಯಮಂತ್ರಿಗಳು ಪದ್ಮಭೂಷಣ ಅಥವಾ ಬೇರೆ ಪ್ರಶಸ್ತಿ ಕೊಡಿಸಬೇಕು' ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ (D. K. Shivakumar) ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಈ ಕುರಿತು  ನಗರದಲ್ಲಿ ಮಂಗಳವಾರ ಮಾಧ್ಯಮಗಳೊಂದಿಗೆ  ಪ್ರತಿಕ್ರಿಯಿಸಿದ ಡಿ.ಕೆ. ಶಿವಕುಮಾರ್, 'ರಾಷ್ಟ್ರೀಯ ಹೆದ್ದಾರಿ ಮಾಡುವಾಗ ಎತ್ತರ ಪ್ರದೇಶದಲ್ಲಿ ನೀರು ಯಾವ ರೀತಿ ಹೋಗಬೇಕು ಎಂಬುದರ ಬಗ್ಗೆ ಸಾಮಾನ್ಯ ಪ್ರಜ್ಞೆ ಇಟ್ಟುಕೊಂಡು ಯೋಜನೆ ರೂಪಿಸಬೇಕು. ಆದರೆ ಈ ರಸ್ತೆಯ ಟೋಲ್ ಜಾಗ ಈಗ ಕೆರೆಯಾಗಿದೆ. ಮುಖ್ಯಮಂತ್ರಿಗಳು ಕೂಡಲೇ ಈ ವಿಚಾರದಲ್ಲಿ ಕ್ರಮಕೈಗೊಳ್ಳಬೇಕು' ಎಂದು ಆಗ್ರಹಿಸಿದರು.

'ರಸ್ತೆ ನಿರ್ಮಾಣ ಎಂದರೆ ಜಲ್ಲಿ, ಟಾರು ಅಥವಾ ಕಾಂಕ್ರೀಟ್ ಹಾಕಿ ಹಣ ಪಡೆಯುವುದಲ್ಲ. ಮಳೆ ಬಂದಾಗ ನೀರು ಹೇಗೆ ಹೋಗಬೇಕು, ಎಲ್ಲಿ ಕಾಲುವೆ ತೆಗೆಯಬೇಕು ಎಂದು ಯೋಜನೆ ರೂಪಿಸುವುದು ಸರ್ಕಾರ ಹಾಗೂ ಇಂಜಿನಿಯರ್ ಗಳ ಕರ್ತವ್ಯ' ಎಂದರು.

'ರಾಷ್ಟ್ರೀಯ ಹೆದ್ದಾರಿ ಸ್ಥಿತಿ ಹೀಗಾದರೆ ಹಳ್ಳಿ ರಸ್ತೆಗಳ ಪರಿಸ್ಥಿತಿ ಏನಾಗಬೇಕು. ಒಬ್ಬಿಬ್ಬರ ಪ್ರಾಣ ಹಾನಿಯಾಗಿರುವ ಮಾಹಿತಿ ಬಂದಿದ್ದು, ರಾಮನಗರ, ಚನ್ನಪಟ್ಟಣ, ಕನಕಪುರದ ಕೆಲವು ಭಾಗಗಳಿಗೆ ಹೋಗಿ ಪರಿಸ್ಥಿತಿ ಪರಿಶೀಲಿಸುತ್ತೇನೆ. ಅವರಿಗೆ ಧೈರ್ಯ ತುಂಬುತ್ತೇನೆ. ಸರ್ಕಾರದ ಮೇಲೆ ಒತ್ತಡ ಹಾಕುತ್ತೇನೆ' ಎಂದು ತಿಳೀಸಿದರು. 

'ಈ ಸಮಯದಲ್ಲಿ ಆಡಳಿತ ವ್ಯವಸ್ಥೆ ಚುರುಕಾಗಿ ಕೆಲಸ ಮಾಡಬೇಕು. ಒಂದು ವಾರ ಅಥವಾ 10 ದಿನಗಳಲ್ಲಿ ಪರಿಹಾರ ನೀಡುತ್ತೇನೆ ಎಂದು ಹೇಳುವುದಲ್ಲ. ತಕ್ಷಣ ಸ್ಥಳದಲ್ಲೇ ಚೆಕ್ ಮೂಲಕ ಪರಿಹಾರ ನೀಡಲು ಸಮಸ್ಯೆ ಏನು? ಹಾನಿಗೆ ಒಳಗಾದವರನ್ನು ಬೇರೆ ಕಡೆಗೆ ಸ್ಥಳಾಂತರಿಸಬೇಕು. ರೈತನ ಮಗನಾಗಿ, ರೈತನಾಗಿ, ಇಂಧನ ಸಚಿವನಾಗಿ, ಜಲಸಂಪನ್ಮೂಲ ಸಚಿವನಾಗಿ ಮಳೆಯ ಅವಶ್ಯಕತೆ ಎಷ್ಟಿದೆ ಎಂಬುದು ನನಗೆ ಅರಿವಿದೆ. ಹೀಗಾಗಿ ಮಳೆ ಬರಬಾರದು ಎಂದು ಹೇಳುವುದಿಲ್ಲ. ಇಷ್ಟು ಮಳೆ ಬಂದು ಪ್ರವಾಹದ ಸ್ಥಿತಿ ನಿರ್ಮಾಣವಾದ ನಂತರ ಎಲ್ಲಾ ನೀರು ಸಮುದ್ರ ಸೇರುತ್ತಿದೆ. ಈ ನೀರನ್ನು ತಡೆಹಿಡಿದು ಜನರಿಗೆ ಅನುಕೂಲ ಮಾಡಿಕೊಡಬೇಕು ಎಂದು ಮೇಕೆದಾಟು ಯೋಜನೆ ಆಗ್ರಹಿಸಿ ಪಾದಯಾತ್ರೆ ಮಾಡಿದೆವು ಎಂದು ತಿಳಿಸಿದರು.

ರೈತರ ಪಂಪ್ ಸೆಟ್ ಗಾಗಿ ನಮ್ಮ ಸರ್ಕಾರ 12 ರಿಂದ 15 ಸಾವಿರ ಕೋಟಿ ನೀಡಿತ್ತು. ಇನ್ನು ನಮ್ಮ ಸರ್ಕಾರ ವಿದ್ಯುತ್ ಕಂಪನಿಗಳಿಂದ ಕರೆಂಟ್ ಖರೀದಿ ಮಾಡಿ ಅದನ್ನು ಕಡಿಮೆ ಬೆಲೆಗೆ ರೈತರಿಗೆ ನೀಡುತ್ತದೆ. ಅಣೆಕಟ್ಟುಗಳು ತುಂಬಿದಾಗ ಕಡಿಮೆ ದರದಲ್ಲಿ ಹೆಚ್ಚಿನ ಪ್ರಮಾಣದ ವಿದ್ಯುತ್ ಉತ್ಪಾದನೆ ಮಾಡಬಹುದು. ಒಂದು ದಿನ ಮಳೆ ಹೆಚ್ಚಾಗಿ ಸುರಿದರೆ ರೈತ ಪಂಪ್ ಸೆಟ್ ಆನ್ ಮಾಡದೆ, ಜನ ಎಸಿ ಬಳಸದೆ ಇದ್ದರೆ ಹಾಗೂ ಇತರ ಮಾರ್ಗಗಳಿಂದ ಸರ್ಕಾರದ ಬೊಕ್ಕಸಕ್ಕೆ 1 ಸಾವಿರ ಕೋಟಿ ರು. ಉಳಿಯುತ್ತದೆ. ಹೀಗಾಗಿ ಮಳೆಯಿಂದ ಈ ಎಲ್ಲಾ ಲಾಭದಾಯಕ ಅಂಶಗಳು ಇವೆ ಎಂದರು.

' ನೋವಿನ ಸಂಗತಿ ಎಂದರೆ ಅತಿಯಾದ ಮಳೆಗೆ ಆಸ್ತಿಪಾಸ್ತಿಗಳು ನಷ್ಟವಾಗುತ್ತಿದೆ. ಹೀಗಾಗಿ ಸರ್ಕಾರ ಸಂತ್ರಸ್ತರ ನೆರವಿಗೆ ನಿಲ್ಲಬೇಕು. ತಗ್ಗು ಪ್ರದೇಶದಲ್ಲಿ ಇರುವ ಜನರಿಗೆ ರಕ್ಷಣೆ ನೀಡಬೇಕು' ಎಂದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X