ಕಿರುಕುಳ, ಬೆದರಿಕೆ ಆರೋಪ: ಮುರುಘಾ ಮಠದ ಆಡಳಿತಾಧಿಕಾರಿ ಬಸವರಾಜನ್ ದಂಪತಿಗೆ ಜಾಮೀನು
ಚಿತ್ರದುರ್ಗ, ಸೆ.1: ಮಾಜಿ ಶಾಸಕ ಎಸ್.ಕೆ.ಬಸವರಾಜನ್ ಹಾಗೂ ಅವರ ಪತ್ನಿ ಸೌಭಾಗ್ಯ ವಿರುದ್ಧ ದಾಖಲಾಗಿದ್ದ ಕಿರುಕುಳ, ಬೆದರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಚಿತ್ರದುರ್ಗದ 1ನೇ ಹೆಚ್ಚುವರಿ ನ್ಯಾಯಾಲಯದಿಂದ ಜಾಮೀನು ಮಂಜೂರು ಮಾಡಲಾಗಿದೆ.
ಮಾಜಿ ಶಾಸಕ ಬಸವರಾಜನ್ ಅವರು ಮುರುಘಾ ಮಠದ ಆಡಳಿತಾಧಿಕಾರಿಯಾಗಿದ್ದು, ಅವರ ಹಾಗೂ ಅವರ ಪತ್ನಿ ವಿರುದ್ಧ ಕಿರುಕುಳ ಹಾಗೂ ಬೆದರಿಕೆ ಆರೋಪ ಮಾಡಿ ಹಾಸ್ಟೆಲ್ ನ ಮಹಿಳಾ ವಾರ್ಡನ್ ಚಿತ್ರದುರ್ಗದ ಗ್ರಾಮಾಂತರ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಈ ಸಂಬಂಧ ಪ್ರಕರಣ ದಾಖಲಾಗಿತ್ತು.
ಎಸ್.ಕೆ. ಬಸವರಾಜನ್ ಮತ್ತು ಅವರ ಪತ್ನಿ ಚಿತ್ರದುರ್ಗದ 1ನೇ ಹೆಚ್ಚುವರಿ ನ್ಯಾಯಾಲಯದಲ್ಲಿ ನಿರೀಕ್ಷಿಣಾ ಜಾಮೀನಿಗಾಗಿ ಅರ್ಜಿ ಸಲ್ಲಿಸಿದ್ದರು.
ಗುರುವಾರ ವಿಚಾರಣೆ ನಡೆಸಿದ ನ್ಯಾಯಾಧೀಶರು ಜಾಮೀನು ಮಂಜೂರು ಮಾಡಿ ಆದೇಶಿಸಿದರು.
Next Story