ಲೈಂಗಿಕ ಕಿರುಕುಳದ ಆರೋಪ: ಮುರುಘಾ ಶ್ರೀ ಬಂಧನ
ಚಿತ್ರದುರ್ಗ : ಪ್ರೌಢಶಾಲೆ ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪಕ್ಕೆ ಸಂಬಂಧಿಸಿ ಮುರುಘಾ ಮಠದ ಡಾ.ಶಿವಮೂರ್ತಿ ಶರಣರನ್ನು ಪೊಲೀಸರು ಬಂಧಿಸಿದ್ದಾರೆ.
ಈ ಸಂಬಂಧ ಶ್ರೀಗಳ ವಿರುದ್ಧ ಪೊಕ್ಸೊ (POCSO) ಪ್ರಕರಣ ದಾಖಲಾಗಿತ್ತು.
ಚಿತ್ರದುರ್ಗ ಗ್ರಾಮಾಂತರ ಠಾಣೆಯ ಸಿಪಿಐ ಬಾಲಚಂದ್ರ ನಾಯ್ಕ್, ಮೊಳಕಾಲ್ಮೂರು ಠಾಣೆ ಸಿಪಿಐ ಸತೀಶ್ ಅವರು ಮಠದಲ್ಲಿ ಶ್ರೀಗಳನ್ನು ಬಂಧಿಸಿ ಠಾಣೆಗೆ ಕೆರೆದೊಯ್ದಿದ್ದಾರೆ ಎಂದು ತಿಳಿದು ಬಂದಿದೆ.
ಮೈಸೂರಿನ ನಝರಾಬಾದ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಸೆ.27ರಂದು ಮೈಸೂರಿನಿಂದ ಚಿತ್ರದುರ್ಗದ ಗ್ರಾಮೀಣ ಪೊಲೀಸ್ ಠಾಣೆಗೆ ಪ್ರಕರಣವನ್ನು ವರ್ಗಾಯಿಸಲಾಗಿತ್ತು. ಪೊಕ್ಸೊ ಜೊತೆಗೆ, ಎಸ್ಸಿ-ಎಸ್ಟಿ ದೌರ್ಜನ್ಯ ತಡೆ ಕಾಯ್ದೆಯಡಿ ಮತ್ತೊಂದು ಕೇಸ್ ಕೂಡ ದಾಖಲಾಗಿತ್ತು. ಆದರೆ, ಪ್ರಕರಣ ದಾಖಲಾಗಿ ಕೆಲ ದಿನಗಳಾದರೂ ಮುರುಘಾ ಶರಣರ ವಿರುದ್ಧ ಕ್ರಮಕೈಗೊಂಡಿಲ್ಲ ಎಂದು ಆರೋಪಿಸಿ ಮೂರ್ನಾಲ್ಕು ದಿನಗಳಿಂದ ವಿವಿಧ ಸಂಘಟನೆಗಳು ರಾಜ್ಯದ ಹಲವೆಡೆ ಪ್ರತಿಭಟನೆ ನಡೆಸುತ್ತಿದ್ದವು.
ಇದನ್ನೂ ಓದಿ: ಪೊಕ್ಸೊ ಪ್ರಕರಣ: ಮುರುಘಾ ಶ್ರೀ ನಿರೀಕ್ಷಣಾ ಜಾಮೀನು ಅರ್ಜಿ ವಿಚಾರಣೆ ನಾಳೆಗೆ ಮುಂದೂಡಿಕೆ