ಮುರುಘಾ ಶರಣರನ್ನು ತಕ್ಷಣ ಕೋರ್ಟ್ ಗೆ ಹಾಜರುಪಡಿಸುಂತೆ ಪೊಲೀಸರಿಗೆ ಸೂಚನೆ
ಚಿತ್ರದುರ್ಗ: ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಲ್ಲಿ ಬಂಧಿತರಾಗಿ ಬಳಿಕ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಡಾ. ಶಿವಮೂರ್ತಿ ಮುರುಘಾ ಶರಣರನ್ನು 2ನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯಕ್ಕೆ ಹಾಜರುಪಡಿಸುವಂತೆ ನ್ಯಾಯಾಧೀಶೆ ಬಿ.ಕೆ.ಕೋಮಲಾ ಸೂಚಿಸಿದರು.
ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಬಂಧಿತ ಡಾ. ಶಿವಮೂರ್ತಿ ಮುರುಘಾ ಶರಣರನ್ನು ತೀವ್ರ ನಿಗಾಘಟಕಕ್ಕೆ ಸ್ಥಳಾಂತರಿಸಲಾಗಿತ್ತು. ಹೆಚ್ಚಿನ ಚಿಕಿತ್ಸೆಗೆ ಬೆಂಗಳೂರಿನ ಜಯದೇವ ಹೃದ್ರೋಗ ಆಸ್ಪತ್ರೆಗೆ ಸ್ಥಳಾಂತರಿಸಲು ಅನುಮತಿ ಕೋರಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಾಧೀಶರು ಈ ಸೂಚನೆ ನೀಡಿದರು.
Next Story