ಪವರ್ ಟಿವಿ ವ್ಯವಸ್ಥಾಪಕ ನಿರ್ದೇಶಕ ಸೇರಿ ಹಲವರ ವಿರುದ್ಧ FIR ದಾಖಲಿಸಲು ಸೂಚಿಸಿದ ನ್ಯಾಯಾಲಯ

ಬೆಂಗಳೂರು, ಸೆ.3:ವೇತನ ನೀಡದೆ ವಂಚನೆ ಸೇರಿದಂತೆ ಇನ್ನಿತರೆ ಆರೋಪಗಳ ಸಂಬಂಧ ಪವರ್ ಸುದ್ದಿ ವಾಹಿನಿಯ ವ್ಯವಸ್ಥಾಪಕ ನಿರ್ದೇಶಕ ರಾಕೇಶ್ ಶೆಟ್ಟಿ ಸೇರಿ ಹಲವರ ವಿರುದ್ಧ ಎಫ್‍ಐಆರ್ ದಾಖಲಿಸಲು ನ್ಯಾಯಾಲಯ ಸೂಚಿಸಿದೆ ಎಂದು ವರದಿಯಾಗಿದೆ.
ದೂರುದಾರ ಶಶಿಧರ್ ಎಂಬುವರ ಅರ್ಜಿ ವಿಚಾರಣೆ ನಡೆಸಿದ ನಗರದ 3ನೆ ಎಸಿಎಂಎಂ ವಿಶೇಷ ನ್ಯಾಯಾಲಯ ಇಲ್ಲಿನ ಯಶವಂತಪುರ ಠಾಣಾಧಿಕಾರಿಗೆ ಎಫ್‍ಐಆರ್ ದಾಖಲಿಸಲು ಸೂಚಿಸಿದೆ ಎಂದು ತಿಳಿದುಬಂದಿದೆ.
ಪವರ್ ಸುದ್ದಿ ವಾಹಿನಿ ಸಂಸ್ಥೆ, ವ್ಯವಸ್ಥಾಕ ನಿರ್ದೇಶಕ ರಾಕೇಶ್ ಶೆಟ್ಟಿ, ಹಾಗೂ ಮಧು ವಿರುದ್ಧ ವಂಚನೆ, ಬೆದರಿಕೆ ಆರೋಪದಡಿ ಎಫ್‍ಐಆರ್ ದಾಖಲಿಸಲು ಹೇಳಲಾಗಿದೆ ಎಂದು ಮೂಲಗಳು ತಿಳಿಸಿವೆ.
Next Story





