ಮಡಿಕೇರಿ: ರಸ್ತೆ ಬದಿಗೆ ಉರುಳಿದ ಕೆಎಸ್ಸಾರ್ಟಿಸಿ ಬಸ್
ಮಡಿಕೇರಿ, ಸೆ. 4: ಮೈಸೂರಿಗೆ ತೆರಳುತ್ತಿದ ಕೆಎಸ್ಸಾರ್ಟಿಸಿ ಬಸ್ ಒಂದು ಇಲ್ಲಿನ ಬೋಯಿಕೇರಿ ಬಳಿಯ ರಸ್ತೆ ಬದಿ ಉರುಳಿ, 21 ಪ್ರಯಾಣಿಕರು ಗಾಯಗೊಂಡಿದ್ದಾರೆ.
ಮಡಿಕೇರಿಯಿಂದ ಮೈಸೂರಿಗೆ ತೆರಳುತ್ತಿದ್ದ ಬಸ್ ಗೆ ಬೋಯಿಕೇರಿ ತಿರುವಿನಲ್ಲಿ ಮಡಿಕೇರಿ ಕಡೆ ಬರುತ್ತಿದ್ದ ಬೈಕ್ ಅಡ್ಡ ಬಂದ ಪರಿಣಾಮ ಬಸ್ ನ ಚಕ್ರಕ್ಕೆ ಬೈಕ್ ಸಿಲುಕಿ ಮಗುಚಿ ಬಿದ್ದಿದೆ ಎಂದು ಹೇಳಲಾಗಿದೆ.
ಅದೃಷ್ಟವಶಾತ್ ಬೈಕ್ ಸವಾರ ಸಣ್ಣ ಪುಟ್ಟಗಾಯಗಳಿಂದ ಪಾರಾಗಿದ್ದಾನೆ ಎಂದು ತಿಳಿದು ಬಂದಿದೆ.
ಮಡಿಕೇರಿ ಗ್ರಾಮಂತರ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
Next Story