ಶಿವಮೊಗ್ಗ: ಪತ್ನಿಯನ್ನು ಹತ್ಯೆಗೈದ ಪತಿಗೆ ಜೀವಾವಧಿ ಶಿಕ್ಷೆ ವಿಧಿಸಿದ ಕೋರ್ಟ್
ಸಾಂದರ್ಭಿಕ ಚಿತ್ರ
ಶಿವಮೊಗ್ಗ: ಮಕ್ಕಳಾಗಲಿಲ್ಲ ಎಂಬ ಕಾರಣಕ್ಕೆ ಪತ್ನಿಯ ಕತ್ತು ಹಿಸುಕಿ ಕೊಲೆ ಮಾಡಿದ್ದ ಪತಿಗೆ ಶಿವಮೊಗ್ಗದ 3ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು ಶನಿವಾರ ಜೀವಾವಧಿ ಶಿಕ್ಷೆ ಮತ್ತು 40 ಸಾವಿರ ರೂ. ದಂಡ ವಿಧಿಸಿದೆ.
ಶಿರಾಳಕೊಪ್ಪ ಸಮೀಪದ ಬಿಳಕಿ ಗ್ರಾಮದ ಮಹೇಶಕುಮಾರ್ (31) ಜೀವಾವಧಿ ಶಿಕ್ಷೆಗೆ ಒಳಗಾದ ವ್ಯಕ್ತಿ. ಈತ 2020ರ ಏ.13ರಂದು ರಾತ್ರಿ ಪತ್ನಿ ಮಂಗಳಾ ಅಲಿಯಾಸ್ ಚೈತ್ರಾ (28)ಳನ್ನು ಕತ್ತು ಹಿಸುಕಿ ಹತ್ಯೆ ಮಾಡಿದ್ದ.
ಶನಿವಾರ ಈ ಬಗ್ಗೆ ವಿಚಾರಣೆ ನಡೆಸಿದ ನ್ಯಾಯಾಧೀಶ ಕೆ.ಎಸ್.ಮಾನು ಅವರು ಆರೋಪ ಸಾಬೀತಾದ ಹಿನ್ನಲೆಯಲ್ಲಿ ಮಹೇಶಕುಮಾರ್ಗೆ ಜೀವಾವಧಿ ಶಿಕ್ಷೆ ಮತ್ತು 40 ಸಾವಿರ ರೂ. ದಂಡ ವಿಧಿಸಿದ್ದಾರೆ. ದಂಡ ಪಾವತಿಸಲು ವಿಫಲನಾದರೆ ಹೆಚ್ಚುವರಿಯಾಗಿ ನಾಲ್ಕು ವರ್ಷ ಸಾದಾ ಕಾರಾಗೃಹ ಶಿಕ್ಷೆ ನೀಡಿ ಆದೇಶಿಸಿದ್ದಾರೆ.ಸರ್ಕಾರದ ಪರವಾಗಿ ಸರ್ಕಾರಿ ಅಭಿಯೋಜಕ ಶಾಂತರಾಜ್ ಅವರು ವಾದ ಮಂಡಿಸಿದ್ದರು.
Next Story