ಸಚಿವ ಉಮೇಶ್ ಕತ್ತಿ ನಿಧನ: ಗುರುವಾರ ನಡೆಯಬೇಕಿದ್ದ ಬಿಜೆಪಿ ಜನೋತ್ಸವ ಮುಂದೂಡಿಕೆ
ಬೆಂಗಳೂರು: ಸಚಿವ ಉಮೇಶ್ ಕತ್ತಿ ಅವರ ಅಕಾಲಿಕ ನಿಧನದ ಕಾರಣ, ದೊಡ್ಡಬಳ್ಳಾಪುರದಲ್ಲಿ ಸೆಪ್ಟೆಂಬರ್ 8ರಂದು ನಡೆಸಲುದ್ದೇಶಿಸಿದ್ದ ‘ಜನೋತ್ಸವ’ವನ್ನು ಸೆಪ್ಟೆಂಬರ್ 11ಕ್ಕೆ ಮುಂದೂಡಲಾಗಿದೆ ಎಂದು ಬಿಜೆಪಿ ಉಪಾಧ್ಯಕ್ಷ ನಿರ್ಮಲ್ ಕುಮಾರ್ ಸುರಾಣಾ ಅವರು ತಿಳಿಸಿದ್ದಾರೆ.
ರಾಜ್ಯ ಬಿಜೆಪಿ ಸರ್ಕಾರದ ಮೂರು ವರ್ಷ ಹಾಗೂ ಬಸವರಾಜ ಬೊಮ್ಮಾಯಿ ಅವರು ಮುಖ್ಯಮಂತ್ರಿಯಾಗಿ ಒಂದು ವರ್ಷ ಪೂರ್ಣಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಬಿಜೆಪಿ ಜನೋತ್ಸವ ಸಮಾವೇಶವನ್ನು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರದಲ್ಲಿ ಗುರುವಾರ ಆಯೋಜಿಸಲಾಗಿತ್ತು.
ಈ ಹಿಂದೆಯೂ ಜನೋತ್ಸವ ಸಮಾವೇಶ ನಿಗದಿಯಾಗಿ ಪ್ರವೀಣ್ ನೆಟ್ಟಾರು ಹತ್ಯೆ ಹಿನ್ನೆಲೆ ರದ್ದಾಗಿತ್ತು.
ಬಿಜೆಪಿ ಜನೋತ್ಸವ ಕಾರ್ಯಕ್ರಮದ ಸಿದ್ಧತೆ
Next Story