ಶಿವಮೊಗ್ಗ: ಪತ್ನಿಯನ್ನು ಹತ್ಯೆಗೈದು ಆತ್ಮಹತ್ಯೆಗೆ ಯತ್ನಿಸಿದ ಪತಿ
ಶಿವಮೊಗ್ಗ, ಸೆ.7: ವ್ಯಕ್ತಿಯೊಬ್ಬ ಪತ್ನಿಯನ್ನು ಹತ್ಯೆ ಮಾಡಿರುವ ಘಟನೆ ಶಿವಮೊಗ್ಗ ನಗರದ ಪ್ರಿಯಾಂಕ ಲೇಔಟ್ನಲ್ಲಿ ನಡೆದಿದೆ.
ಮಂಜುಳಾ (35) ಕೊಲೆಯಾದ ಮಹಿಳೆ ಎಂದು ತಿಳಿದು ಬಂದಿದೆ. ಮೆಸ್ಕಾಂನಲ್ಲಿ ಹಿರಿಯ ಸಹಾಯಕ ಅಧಿಕಾರಿ ಆಗಿ ಸೇವೆ ಸಲ್ಲಿಸುತ್ತಿದ್ದ ದಿನೇಶ್ (42) ಕೊಲೆಗೈದ ಆರೋಪಿ ಎಂದು ಗುರುತಿಸಲಾಗಿದೆ.
ಮಂಗಳವಾರ ತಡರಾತ್ರಿ ಪತ್ನಿಯ ಮೇಲೆ ಹಲ್ಲೆ ನಡೆಸಿದ ದಿನೇಶ್ ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರವಾಗಿ ಹತ್ಯೆಗೈದು, ಕೊನೆಗೆ ತಾನೂ ಆತ್ಮಹತ್ಯೆಗೆ ಯತ್ನಿದ್ದಾನೆ ಎನ್ನಲಾಗಿದೆ.
ವಿಷಯ ತಿಳಿದ ತಕ್ಷಣ ಗಂಭೀರ ಗಾಯಗೊಂಡಿದ್ದ ದಿನೇಶ್ನನ್ನು ಸ್ಥಳೀಯರು ಆಸ್ಪತ್ರೆಗೆ ದಾಖಲಿಸಿದ್ದಾರೆ. ಘಟನೆ ಸಂಬಂಧ ತುಂಗಾನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ: ಚಿಕ್ಕಮಗಳೂರು | ಭಾರೀ ಮಳೆಗೆ ಸ್ಮಶಾನ ಜಲಾವೃತ: ಅಂತ್ಯಸಂಸ್ಕಾರಕ್ಕೆ ಜಾಗವಿಲ್ಲದೆ 2 ದಿನ ಮನೆಯಲ್ಲೇ ಉಳಿದ ಮೃತದೇಹ!
Next Story