ತುಮಕೂರು | ಮದ್ಯ ಸೇವಿಸಿ ಪಾಠ ಮಾಡುತ್ತಿದ್ದ ಆರೋಪ: ಶಿಕ್ಷಕಿಯರಿಬ್ಬರು ಅಮಾನತು
ತುಮಕೂರು: ಮದ್ಯ ಸೇವಿಸಿ ಮಕ್ಕಳಿಗೆ ಪಾಠ ಮಾಡುತ್ತಿದ್ದ ಆರೋಪದಲ್ಲಿ ತಾಲೂಕಿನ ಗಳಿಗೇನಹಳ್ಳಿ ಕ್ಲಸ್ಟರ್ ವ್ಯಾಪ್ತಿಯ ಚಿಕ್ಕಸಾರಂಗಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕಿ ಗಂಗಲಕ್ಷ್ಮಮ್ಮ ಅವರನ್ನು ಅಮಾನತು ಮಾಡಲಾಗಿದೆ.
ಜತೆಗೆ ಇದೇ ಶಾಲೆಯ ನಾಗರತ್ನಮ್ಮ ಅವರನ್ನೂ ಅಮಾನತುಗೊಳಿಸಲಾಗಿದೆ ಎಂದು ತಿಳಿದು ಬಂದಿದೆ.
ಈ ಸಂಬಂಧ ಪೋಷಕರಿಂದ ದೂರು ಬಂದ ಹಿನ್ನೆಲೆಯಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿ ಹನುಮಾನಾಯ್ಕ್ ಶಾಲೆಗೆ ಭೇಟಿ ನೀಡಿ ಪರಿಶೀಲಿಸಿದ್ದಾರೆ. ಈ ವೇಳೆ ಶಿಕ್ಷಕಿ ಗಂಗಲಕ್ಷ್ಮಮ್ಮ ಅವರ ಟೇಬಲ್ ಒಳಗಡೆ ಮದ್ಯದ ಬಾಟಲಿ ಪತ್ತೆಯಾಗಿದೆ.
ಘಟನೆಯನ್ನು ಸೂಕ್ಷ್ಮವಾಗಿ ಅರಿತ ಶಿಕ್ಷಣ ಇಲಾಖೆ ಶಿಕ್ಷಕಿ ಗಂಗಲಕ್ಷ್ಮಮ್ಮಳನ್ನು ಇಲಾಖಾ ವಿಚಾರಣೆಗೆ ಒಳಪಡಿಸಿದೆ.
Next Story