ಅಕ್ಟೋಬರ್ ನಲ್ಲಿ KPCC ನೂತನ ಅಧ್ಯಕ್ಷರ ಆಯ್ಕೆಗೆ ಚುನಾವಣೆ: ಡಿ.ಕೆ.ಶಿವಕುಮಾರ್
ರಾಯಚೂರು: 'ಅಕ್ಟೋಬರ್ 16ರಂದು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ (ಕೆಪಿಸಿಸಿ) ಅಧ್ಯಕ್ಷರ ಚುನಾವಣೆಯ ಮತದಾನ ನಡೆಯಲಿದೆ' ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ.
ರಾಯಚೂರು ಜಿಲ್ಲಾ ಕಾಂಗ್ರೆಸ್ ಸಮಿತಿಯ ಕಚೇರಿಯಲ್ಲಿ ಇಂದು (ಸೋಮವಾರ) ಆಯೋಜಿಸಿದ್ದ 'ಭಾರತ್ ಜೋಡೋ ಯಾತ್ರೆ' ಇದರ ಪೂರ್ವಭಾವಿ ಸಿದ್ಧತೆ ಸಭೆಯಲ್ಲಿ ಭಾಗವಹಿಸಿದ ಅವರು, ಈ ಕುರಿತು ಮಾಹಿತಿ ನೀಡಿದರು.
'ಅಕ್ಟೋಬರ್ 16ರಂದು ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಬೆಂಗಳೂರಿನ ಡಾ.ಬಿ.ಆರ್. ಅಂಬೇಡ್ಕರ್ ಭವನದಲ್ಲಿ ಮತದಾನ ಪ್ರಕ್ರಿಯೆ ಮಧ್ಯಾಹ್ನ 3 ಗಂಟೆಗೆ ನಡೆಸಲಾಗುತ್ತಿದೆ' ಎಂದು ತಿಳಿಸಿದರು.
'ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಮತ್ತೆ ಸ್ಪರ್ಧಿಸುವ ಬಗ್ಗೆ ಇನ್ನೂ ನಿರ್ಧರಿಸಿಲ್ಲ. ಪಕ್ಷದ ಮುಖಂಡರ ಅಭಿಪ್ರಾಯದ ಮೇರೆಗೆ ನಿರ್ಧರಿಸುತ್ತೇನೆ. ಅದೇ ರೀತಿ ಎಐಸಿಸಿ(AICC) ಅಧ್ಯಕ್ಷೀಯ ಚುನಾವಣೆಯಲ್ಲಿ ರಾಹುಲ್ ಗಾಂಧಿ ಸ್ಪರ್ಧೆ ಬಗ್ಗೆ ನನಗೆ ಗೊತ್ತಿಲ್ಲ' ಎಂದು ಹೇಳಿದರು.
Next Story