ಮಕ್ಕಳ ಕಳ್ಳರ ಬಗ್ಗೆ ವದಂತಿಗಳಿಗೆ ಯಾರೂ ಕಿವಿಗೊಡಬೇಡಿ: ಗೃಹ ಸಚಿವ ಆರಗ ಜ್ಞಾನೇಂದ್ರ
ಬೆಂಗಳೂರು: ರಾಜ್ಯದ ಕೆಲವು ಜೆಲ್ಲೆಗಳಲ್ಲಿ ಮಕ್ಕಳ ಕಳ್ಳರ ಬಗ್ಗೆ ಸುಳ್ಳು ವದಂತಿಗಳು ಜಿಲ್ಲೆಯಲ್ಲಿ ಹರಿದಾಡುತ್ತಿವೆ. ಇದರಿಂದ ಪೋಷಕರಲ್ಲಿ ಆತಂಕ ಸೃಷ್ಟಿಯಾಗಿದ್ದು, ಈ ಕುರಿತು ಗೃಹ ಸಚಿವ ಆರಗ ಜ್ಞಾನೇಂದ್ರ (Araga Jnanendra) ಅವರು ಪ್ರತಿಕ್ರಿಯಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 'ಮಕ್ಕಳ ಕಳ್ಳರ ವದಂತಿಗಳಿಗೆ ಯಾರೂ ಕಿವಿಗೊಡಬೇಡಿ. ಸುಳ್ಳು ಸುದ್ದಿ ಹಬ್ಬಸಿದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು' ಎಂದು ತಿಳಿಸಿದರು.
'ಯಾರೋ ಸುಳ್ಳು ಸುದ್ದಿ ಹಬ್ಬಿಸಿದರೆಂದು ಹಲ್ಲೆ ಮಾಡೋದು ಬೇಡ. ಮಕ್ಕಳ ಕಳ್ಳರೇ ಬಂದರೂ ಹೊಡೆದು ಹಿಂಸೆ ಕೊಡುವ ಅಧಿಕಾರ ಯಾರಿಗೂ ಇಲ್ಲ. ಏನೇ ಇದ್ದರೂ ಪೊಲೀಸರಿಗೆ ಮಾಹಿತಿ ನೀಡಿ. ಪೊಲೀಸರು ಕಾನೂನು ಪ್ರಕಾರ ಕ್ರಮ ಕೈಗೊಳ್ಳಲಿದ್ದಾರೆ' ಎಂದು ತಿಳಿಸಿದರು.
Next Story