Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. PFI ಮೇಲಿನ ದಾಳಿ ಬಗ್ಗೆ ಜನರ ಮುಂದೆ...

PFI ಮೇಲಿನ ದಾಳಿ ಬಗ್ಗೆ ಜನರ ಮುಂದೆ ಸತ್ಯಾಂಶ ಇಡಬೇಕು: ಎಚ್.ಡಿ.ಕುಮಾರಸ್ವಾಮಿ ಆಗ್ರಹ

ವಾರ್ತಾಭಾರತಿವಾರ್ತಾಭಾರತಿ27 Sept 2022 7:03 PM IST
share
PFI ಮೇಲಿನ ದಾಳಿ ಬಗ್ಗೆ ಜನರ ಮುಂದೆ ಸತ್ಯಾಂಶ ಇಡಬೇಕು: ಎಚ್.ಡಿ.ಕುಮಾರಸ್ವಾಮಿ ಆಗ್ರಹ

ಬೆಂಗಳೂರು, ಸೆ.27: ರಾಜ್ಯ ಪೊಲೀಸ್ ಇಲಾಖೆಯು ಪಿಎಫ್‍ಐ ಸಂಘಟನೆ ಮೇಲೆ ದಾಳಿ ನಡೆಸಿ ಸಂಘಟನೆಯ ಹಲವರನ್ನು ಬಂಧಿಸಿದೆ. ಇದರ ಬಗ್ಗೆ ರಾಜ್ಯ ಸರಕಾರವು ವಾಸ್ತವಾಂಶಗಳನ್ನು ರಾಜ್ಯದ ಜನತೆಯ ಮುಂದೆ ಇಡಬೇಕು ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಆಗ್ರಹಿಸಿದ್ದಾರೆ.

ಮಂಗಳವಾರ ನಗರದಲ್ಲಿರುವ ಪಕ್ಷದ ಕಚೇರಿ ಜೆಪಿ ಭವನದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ರಾಜ್ಯ ಸರಕಾರದ ಮೇಲೆ ಅನೇಕ ಆರೋಪಗಳಿದ್ದು, ಬಿಎಂಎಸ್ ಶಿಕ್ಷಣ ಟ್ರಸ್ಟ್‍ನಲ್ಲಿ ನಡೆದಿರುವ ಅಕ್ರಮ ಬಗ್ಗೆ ಸದನದಲ್ಲಿಯೇ ದಾಖಲೆಗಳ ಸಮೇತ ಮಾಹಿತಿ ನೀಡಿದ್ದೇನೆ. ಇದಲ್ಲದೆ, ಅನೇಕ ಹಗರಣ-ಅಕ್ರಮಗಳ ಬಗ್ಗೆ ಜನರು ಬೇಸರ ವ್ಯಕ್ತಪಡಿಸುತ್ತಿದ್ದಾರೆ ಎಂದರು.

ಒಂದು ವೇಳೆ ಪಿಎಫ್‍ಐ ಮೇಲೆ ನಡೆದಿರುವ ದಾಳಿ ಕುರಿತು ನೈಜ ಮಾಹಿತಿ ಕೊಡದಿದ್ದರೆ, ಆರೋಪ ಮತ್ತು ಹಗರಣಗಳ ಕುರಿತು ಜನರ ಗಮನ ಬೇರೆಡೆಗೆ ಸೆಳೆಯಲು ಈ ದಾಳಿ ನಡೆಸಲಾಗಿದೆ ಎಂದು ಭಾವಿಸಬೇಕಾಗುತ್ತದೆ ಎಂದು ಕುಮಾರಸ್ವಾಮಿ ತಿಳಿಸಿದರು.

ಎರಡು ದಿನಗಳಿಂದ ಕರ್ನಾಟಕವೂ ಸೇರಿ ರಾಷ್ಟ್ರಮಟ್ಟದಲ್ಲಿ ಪಿಎಫ್‍ಐ ಮೇಲೆ ಎನ್‍ಐಎನಿಂದ ದಾಳಿ ಆಗುತ್ತಿದೆ. ಆ ದಾಳಿ ಸಮಯದಲ್ಲಿ ಈ ಸಂಘಟನೆಯ ಪ್ರಮುಖ ವ್ಯಕ್ತಿಗಳ ಬಂಧನವೂ ಆಗಿತ್ತು. ಮತ್ತೆ ಕಳೆದ ರಾತ್ರಿ ರಾಜ್ಯದ ನಾನಾ ಭಾಗದಲ್ಲಿ ಮಧ್ಯರಾತ್ರಿ ಪೊಲೀಸರು ಕಾರ್ಯಾಚರಣೆ ನಡೆಸಿದ್ದಾರೆ. ಇದು ಸರಕಾರದ ಆದೇಶವೇ ಅಥವಾ ಪೊಲೀಸರ ಮಾಹಿತಿ ಆಧಾರದ ದಾಳಿಯ ಆಗಿದೆಯೇ ಎಂದು ಅವರು ಪ್ರಶ್ನಿಸಿದರು.

‘ಕಳೆದ ರಾತ್ರಿ ಏಕಾಏಕಿ ದಾಳಿ ಆಗಿರೋದು ಸಣ್ಣ ಪುಟ್ಟ ಕಾರ್ಯಕರ್ತರಿಗೆ ಆತಂಕ ಉಂಟು ಮಾಡಿದೆ ಎನ್ನುವುದು ನಿಜ. ಈ ದಾಳಿಯ ವೇಳೆ ಏನು ಸಿಕ್ಕಿದೆ. ಯಾವ ದಾಖಲೆ ಇದೆ  ಎಂಬುದನ್ನು ಜನರ ಮುಂದೆ ಇಡಬೇಕು. ದಾಳಿಯ ಬಗ್ಗೆ ಸತ್ಯ ಹೇಳದೇ ಹೋದರೆ ಕಾಂಗ್ರೆಸ್‍ನ ‘ಪೇ ಸಿಎಂ ಅಭಿಯಾನ’ ಡೈವರ್ಟ್ ಮಾಡುವುದಕ್ಕೆ ಸರಕಾರ ಹೀಗೆ ಮಾಡಿದೆ ಎಂಬ ಅನುಮಾನ ಜನರಿಗೆ ಬರುತ್ತದೆ’ ಎಂದು ಕುಮಾರಸ್ವಾಮಿ ಹೇಳಿದರು.

ಈ ಸಂದರ್ಭದಲ್ಲಿ ಜೆಡಿಎಸ್ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಝಫ್ರುಲ್ಲಾ ಖಾನ್, ಮಾಜಿ ಶಾಸಕರಾದ ಎಚ್.ಎಂ.ರಮೇಶ್ ಗೌಡ, ಶಾರದಾ ಪೂರ್ಯ ನಾಯಕ್, ತಿಮ್ಮರಾಯಪ್ಪ ಹಾಗೂ ಹಿರಿಯ ಮುಖಂಡ ಹರಿಹರದ ಶಿವಶಂಕರ್ ಮುಂತಾದವರು ಹಾಜರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X