PSI ಹಗರಣ: ಮರು ಪರೀಕ್ಷೆಯ ದಿನಾಂಕ ಪ್ರಕಟಿಸದಂತೆ ಹೈಕೋರ್ಟ್ ಮಧ್ಯಂತರ ಆದೇಶ
ಬೆಂಗಳೂರು, ಸೆ.28: ಪೊಲೀಸ್ ಸಬ್ ಇನ್ಸ್ಪೆಕ್ಟರ್ಗಳ ನೇಮಕಾತಿ ಪರೀಕ್ಷೆಯಲ್ಲಿ ಅಕ್ರಮ ನಡೆದಿದೆ. ಈ ಹಿನ್ನೆಲೆಯಲ್ಲಿ ಮುಂದಿನ ಆದೇಶದವರೆಗೆ 545 ಪಿಎಸ್ ಐ ಮರುಪರೀಕ್ಷೆ ದಿನಾಂಕ ಪ್ರಕಟಿಸಬಾರದೆಂದು ಹೈಕೋರ್ಟ್ ಮಧ್ಯಂತರ ಆದೇಶ ಹೊರಡಿಸಿದೆ.
ಮರು ಪರೀಕ್ಷೆ ರದ್ದು ಕೋರಿ ಹಲವು ಜನರು ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಜಿ.ನರೇಂದ್ರ ಅವರಿದ್ದ ಏಕಸದಸ್ಯ ನ್ಯಾಯಪೀಠ, ಈ ಆದೇಶ ನೀಡಿದೆ.
ಅರ್ಜಿದಾರರ ಪರ ಹಿರಿಯ ವಕೀಲ ಡಿ.ಆರ್.ರವಿಶಂಕರ್ ವಾದ ಮಂಡಿಸಿ, ಸರಕಾರದ ಆದೇಶ ರದ್ದುಪಡಿಸಿ, ಕಳಂಕರಹಿತ ಮತ್ತು ಕಳಂಕಿತ ಅಭ್ಯರ್ಥಿಗಳನ್ನು ಪ್ರತ್ಯೇಕಿಸಿ ಹಿಂದಿನ ಅಧಿಸೂಚನೆ ಅನುಸಾರವೇ ನೇಮಕಾತಿ ಪ್ರಕ್ರಿಯೆ ಪೂರ್ಣಗೊಳಿಸಬೇಕು ಹಾಗೂ ನೇಮಕಾತಿ ಆದೇಶ ನೀಡಲು ಸರಕಾರಕ್ಕೆ ನಿರ್ದೇಶಿಸಬೇಕು ಎಂದು ಪೀಠಕ್ಕೆ ಕೋರಿದ್ದರು.
ಅರ್ಜಿದಾರರ ಪರವಾಗಿ ಹಿರಿಯ ವಕೀಲರಾದ ಪಿ.ಎಸ್.ರಾಜಗೋಪಾಲ್, ಎ.ಎಸ್.ಪೊನ್ನಣ್ಣ, ಸಂದೇಶ ಚೌಟಾಲ ಅವರು ವಾದ ಮಂಡನೆ ಮಾಡಿದ್ದರು.
Next Story