ಮೈಸೂರು: ಮಹಾತ್ಮ ಗಾಂಧಿ ಚಾಲನೆ ನೀಡಿದ್ದ ಖಾದಿ - ಗ್ರಾಮೋದ್ಯೋಗ ಕೇಂದ್ರಕ್ಕೆ ರಾಹುಲ್ ಗಾಂಧಿ, ಸಿದ್ದರಾಮಯ್ಯ ಭೇಟಿ
ಮೈಸೂರು: ಮಹಾತ್ಮ ಗಾಂಧಿ ಅವರು ಚಾಲನೆ ನೀಡಿದ್ದ ಖಾದಿ ಮತ್ತು ಗ್ರಾಮೋದ್ಯೋಗ ಕೇಂದ್ರಕ್ಕೆ ರಾಹುಲ್ ಗಾಂಧಿ ಮತ್ತು ಮಾಜಿ ಸಿಎಂ ಸಿದ್ದರಾಮಯ್ಯ ಅವರು ಭೇಟಿ ನೀಡಿದರು.
ಮೈಸೂರು ಜಿಲ್ಲೆಯ ನಂಜನಗೂಡು ತಾಲೂಕಿನ ಬದನವಾಳು ಗ್ರಾಮದಲ್ಲಿ ಮಹಾತ್ಮ ಗಾಂಧಿಯವರು 1927ರಲ್ಲಿ ಚಾಲನೆ ನೀಡಿದ್ದ ಖಾದಿ ಮತ್ತು ಗ್ರಾಮೋದ್ಯೋಗ ಕೇಂದ್ರಕ್ಕೆ ರಾಹುಲ್ ಗಾಂಧಿಯವರೊಂದಿಗೆ ಸಿದ್ದರಾಮಯ್ಯ ಅವರು ಭೇಟಿ ನೀಡಿ ಅಲ್ಲಿಯ ನೇಯ್ಗೆಕಾರರೊಂದಿಗೆ ಮಾತುಕತೆ ನಡೆಸಿದರು. ಈ ಸಂದರ್ಭ ಡಿಕೆ ಶಿವಕುಮಾರ್ ಹಾಗು ಇತರರು ಉಪಸ್ಥಿತರಿದ್ದರು.