ಮೈಸೂರಿನ ಸುತ್ತೂರು ಮಠಕ್ಕೆ ರಾಹುಲ್ ಗಾಂಧಿ ಭೇಟಿ
ಮೈಸೂರು, ಅ. 3: ಭಾರತ್ ಜೋಡೊ ಯಾತ್ರೆಯ ನೇತಾರ ರಾಹುಲ್ ಗಾಂಧಿ ಅವರು ಮೈಸೂರಿನ ಸುತ್ತೂರು ಮಠಕ್ಕೆ ಸೋಮವಾರ ತೆರಳಿ ಶ್ರೀ ಶಿವರಾತ್ರಿಶ್ವರ ದೇಶಿಕೇಂದ್ರ ಸ್ವಾಮೀಜಿ ಅವರ ಆಶೀರ್ವಾದ ಪಡೆದರು.
ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೆವಾಲ, ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್, ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಮತ್ತಿತರರು ಈ ಸಂದರ್ಭ ಉಪಸ್ಥಿತರಿದ್ದರು.