ಶಾಸಕ ಎಂ.ಪಿ. ರೇಣುಕಾಚಾರ್ಯ ಆಪ್ತ ಸಹಾಯಕನ ಮೇಲೆ ದುಷ್ಕರ್ಮಿಗಳಿಂದ ಹಲ್ಲೆ; ಆರೋಪ
ಹೊನ್ನಾಳಿ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ರಾಜಕೀಯ ಕಾರ್ಯದರ್ಶಿ ಹಾಗೂ ಹೊನ್ನಾಳಿ ವಿಧಾನಸಭೆ ಕ್ಷೇತ್ರದ ಶಾಸಕ ಎಂ.ಪಿ. ರೇಣುಕಾಚಾರ್ಯ ಅವರ ಆಪ್ತ ಸಹಾಯಕನ ಮೇಲೆ ದುಷ್ಕರ್ಮಿಗಳು ಹಲ್ಲೆ ನಡೆಸಿರುವ ಘಟನೆ ಸೋಮವಾರ ರಾತ್ರಿ ವರದಿಯಾಗಿದೆ.
ರೇಣುಕಾಚಾರ್ಯ ಅವರ ಆಪ್ತ ಸಹಾಯಕ ಪ್ರಜ್ವಲ್ ಎಂಬುವರ ಮೇಲೆ ಸೋಮವಾರ ರಾತ್ರಿ 10-30 ರ ಸುಮಾರಿಗೆ ಹೊನ್ನಾಳಿ ಪಟ್ಟಣದಲ್ಲಿ ದುಷ್ಕರ್ಮಿಗಳು ಹಲ್ಲೆ ನಡೆಸಿದ್ದಾರೆಂದು ತಿಳಿದುಬಂದಿದೆ.
ಗಾಯಗೊಂಡಿರುವ ಪ್ರಜ್ವಲ್ ಅವರು ಹೊನ್ನಾಳಿ ತಾಲೂಕು ಆಸ್ಪತ್ರೆಗೆ ದಾಖಲಾಗಿದ್ದು, ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ. ಹಲ್ಲೆಗೆ ಪ್ರಮುಖ ಕಾರಣಗಳು ತಿಳಿದುಬಂದಿಲ್ಲ.
ಆಸ್ಪತ್ರೆಗೆ ಭೇಟಿ ನೀಡಿ ಶಾಸಕ ರೇಣುಕಾಚಾರ್ಯ ತನ್ನ ಆಪ್ತ ಸಹಾಯಕನ ಆರೋಗ್ಯ ವಿಚಾರಿಸಿದ್ದಾರೆ.
Next Story