ಮೈಸೂರು | ತರಗತಿ ನಡೆಯುತ್ತಿದ್ದಾಗಲೇ ಕುಸಿದ ಮಹಾರಾಣಿ ಮಹಿಳಾ ಕಾಲೇಜಿನ ಗೋಡೆ
ವೀಡಿಯೋ ವೈರಲ್
ಮೈಸೂರು, ಅ.21: ಮೈಸೂರು ವಿಶ್ವವಿದ್ಯಾನಿಲಯದ ಪ್ರತಿಷ್ಠಿತ ಮಹಾರಾಣಿ ಮಹಿಳಾ ಕಾಲೇಜಿನ ಗೋಡೆಯ ಶುಕ್ರವಾರ ಬೆಳಗ್ಗೆ ತರಗತಿ ನಡೆಯುತ್ತಿದ್ದ ವೇಳೆಯೇ ಕುಸಿದಿದೆ.
ಮೈಸೂರು ಅರಸು ರಸ್ತೆ ಮುಂಭಾಗದಲ್ಲಿರುವ ಮಹರಾಣಿ ಮಹಿಳಾ ವಿಜ್ಞಾನ ಕಾಲೇಜಿನ ಗೋಡೆ ಶುಕ್ರವಾರ ಬೆಳಗ್ಗೆ 10 ಗಂಟೆ ಸುಮಾರಿಗೆ ಏಕಾಏಕಿ ಕುಸಿದು ಬಿದ್ದಿದೆ. ಈ ವೇಳೆ ಕಾಲೇಜಿನಲ್ಲಿ ವಿದ್ಯಾರ್ಥಿಗಳು ಪಾಠ ಕೇಳುತ್ತಿದ್ದು ಯಾರಿಗೂ ತೊಂದರೆ ಆಗಿಲ್ಲ ಎಂದು ತಿಳಿದುಬಂದಿದೆ.
ಗೋಡೆ ಕುಸಿಯುತ್ತಿದ್ದಂತೆ ಸಾರ್ವಜನಿಕರೊಬ್ಬರು ವೀಡಿಯೊ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹರಿಯಬಿಟ್ಟಿದ್ದಾರೆ.
Next Story