ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ ತಾತ್ಕಾಲಿಕ ವೇಳಾಪಟ್ಟಿ ಪ್ರಕಟ
ಸಾಂದರ್ಭಿಕ ಚಿತ್ರ
ಬೆಂಗಳೂರು, ಅ.21: ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ ತಾತ್ಕಾಲಿಕ ವೇಳಾಪಟ್ಟಿಯನ್ನು ಪದವಿ ಪೂರ್ವ ಪರೀಕ್ಷಾ ಮಂಡಳಿ ಪ್ರಕಟಿಸಿದೆ.
ಈ ಬಗ್ಗೆ ಟ್ವೀಟ್ ಮೂಲಕ ಮಾಹಿತಿ ನೀಡಿರುವ ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಬಿ.ಸಿ. ನಾಗೇಶ್ , '' 2023 ಸಾಲಿನ ದ್ವಿತೀಯ ಪಿಯು ಪರೀಕ್ಷೆಯ ವಾರ್ಷಿಕ ಪರೀಕ್ಷೆಯ ತಾತ್ಕಾಲಿಕ ವೇಳಾಟ್ಟಿಯನ್ನು ದಿನಾಂಕ 10-3-2023ರಿಂದ 29-3-2023ರ ವರೆಗೆ ನಡೆಸಲು ಪಿಯು ಬೋರ್ಡ್ ತೀರ್ಮಾನಿಸಿದ್ದು, ಇಂದು(ಅಕ್ಟೋಬರ್ 21) ತಾತ್ಕಾಲಿಕ ವೇಳಾಪಟ್ಟಿಯನ್ನು ಪ್ರಕಟಿಸಿದೆ'' ಎಂದು ತಿಳಿಸಿದ್ದಾರೆ.
►10-03-2023 ಕನ್ನಡ, ಅರೇಬಿಕ್
►11-03-2023 ಗಣಿತ ಶಾಸ್ತ್ರ, ಶಿಕ್ಷಣ ಶಾಸ್ತ್ರ
►13-03-2023 ಅರ್ಥಶಾಸ್ತ್ರ
►14-03-2023 ಕರ್ನಾಟಕ ಸಂಗೀತ, ಹಿಂದೂಸ್ತಾನಿ ಸಂಗೀತ, ಮನಶಾಸ್ತ್ರ, ರಸಾಯನಶಾಸ್ತ್ರ, ಮೂಲಗಣಿತ
►15-03-2023 ತಮಿಳು, ತೆಲುಗು, ಮಲಯಾಳಂ, ಮರಾಠಿ, ಉರ್ದು, ಸಂಸ್ಕೃತ, ಫ್ರೆಂಚ್
►16-03-2023 ತರ್ಕಶಾಸ್ತ್ರ, ವ್ಯವಹಾರ ಅಧ್ಯಯನ
►17-03-2023 ಮಾಹಿತಿ ತಂತ್ರಜ್ಞಾನ, ರೀಟೈಲ್, ಆಟೋಮೊಬೈಲ್, ಹೆಲ್ತ್ ಕೇರ್, ಬ್ಯೂಟಿ ಅಂಡ್ ವೆಲ್ ನೆಸ್
►18-03-2023 ಭೂಗೋಳಶಾಸ್ತ್ರ, ಜೀವಶಾಸ್ತ್ರ
►20-03-2023 ಇತಿಹಾಸ, ಭೌತಶಾಸ್ತ್ರ
► 21-03-2023 ಹಿಂದಿ
► 23-03-2023 ಇಂಗ್ಲೀಷ್
► 25-03-2023 ರಾಜ್ಯಶಾಸ್ತ್ರ, ಸಂಖ್ಯಾಶಾಸ್ತ್ರ
► 27-03-2023 ಐಚ್ಛಿಕ ಕನ್ನಡ, ಲೆಕ್ಕಶಾಸ್ತ್ರ, ಭೂಗರ್ಭಶಾಸ್ತ್ರ, ಗೃಹ ವಿಜ್ಞಾನ
► 29-03-2023 ಸಮಾಜ ಶಾಸ್ತ್ರ, ವಿದ್ಯುನ್ಮಾನಶಾಸ್ತ್ರ, ಗಣಕ ವಿಜ್ಞಾನ
-----------------------------------------------------------------------------
2023ರ ಮಾರ್ಚ್ನಲ್ಲಿ ನಡೆಯಲಿರುವ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ ತಾತ್ಕಾಲಿಕ ವೇಳಾಪಟ್ಟಿಯನ್ನು ಪ್ರಕಟಿಸಲಾಗಿದೆ.@BSBommai pic.twitter.com/pVBpV83P8s
— B.C Nagesh (@BCNagesh_bjp) October 21, 2022