ಹನೂರು: ಹಳ್ಳಕ್ಕೆ ನುಗ್ಗಿದ ಕೆಎಸ್ಸಾರ್ಟಿಸಿ ಬಸ್, ಹಲವು ಮಂದಿ ಪ್ರಯಾಣಿಕರಿಗೆ ಗಾಯ
ಚಾಮರಾಜನಗರ, ಅ.26: ಜಿಲ್ಲೆಯ ಹನೂರು ತಾಲೂಕಿನ ಮಹದೇಶ್ವರ ಬೆಟ್ಟದಲ್ಲಿ ದೀಪಾವಳಿ ಜಾತ್ರೆ ಮುಗಿಸಿಕೊಂಡು ಪ್ರಯಾಣಿಕರನ್ನು ಕರೆದುಕೊಂಡು ಬರುತ್ತಿದ್ದ ಕೆಎಸ್ಸಾರ್ಟಿಸಿ ಬಸ್ ಒಂದು ತಾಳಬೆಟ್ಟದ ಬಳಿ ಚಾಲಕನ ನಿಯಂತ್ರಣ ತಪ್ಪಿ ಹಳ್ಳಕ್ಕೆ ನುಗ್ಗಿದ್ದು, ಹಲವು ಮಂದಿ ಪ್ರಯಾಣಿಕರು ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿರುವ ಬಗ್ಗೆ ವರದಿಯಾಗಿದೆ.
ಬಸ್ಸಿನಲ್ಲಿದ್ದ 22 ಮಂದಿ ಪ್ರಯಾಣಿಕರು ಗಾಯಗೊಂಡಿದ್ದಾರೆ ಎಂದು ತಿಳಿದು ಬಂದಿದೆ. ಇಬ್ಬರ ಸ್ಥಿತಿ ಗಂಭೀರವಾಗಿದ್ದು, ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಮೈಸೂರಿಗೆ ಕರೆದೊಯ್ಯಲಾಗಿದೆನ್ನಲಾಗಿದೆ.
ಇನ್ನು ಘಟನೆಯಿದ ಎಲ್ಲರೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಕೆಲವು ಜನರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಅವರೆಲ್ಲರನ್ನೂ ಕೊಳ್ಳೇಗಾಲ ಸರ್ಕಾರಿ ಉಪ ವಿಭಾಗ ಆಸ್ಪತ್ರೆಗೆ ದಾಖಲು ಮಾಡಲಾಗಿದೆ ಎಂದು ತಿಳಿದು ಬಂದಿದೆ.
Next Story