ನ.1ರಂದು ಬೆಳಗಾವಿಯಲ್ಲಿ ಎಂಇಎಸ್ನಿಂದ ಕರಾಳ ದಿನ ಆಚರಿಸಲು ನಿರ್ಧಾರ; ಮುಂಜಾಗ್ರತಾ ಕ್ರಮವಾಗಿ ಬಿಗಿಭದ್ರತೆ
ಬೆಳಗಾವಿ, ಅ.31: ಬೆಳಗಾವಿಯಲ್ಲಿ ಎಂಇಎಸ್ ಕಾರ್ಯಕರ್ತರು ನ.1ರಂದು ಕರಾಳ ದಿನ ಆಚರಿಸಲು ನಿರ್ಧರಿಸಿದ್ದು, ಈ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಮೂವರು ಡಿಸಿಪಿಗಳ ನೇತೃತ್ವದಲ್ಲಿ 3 ಸಾವಿರಕ್ಕೂ ಅಧಿಕ ಪೊಲೀಸರು, 300ಕ್ಕೂ ಹೆಚ್ಚು ಸಿಸಿ ಕ್ಯಾಮೆರಾ ಬಳಸಿ ಬಿಗಿ ಬಂದೋಬಸ್ತ್ ಕೈಗೊಳ್ಳಲಾಗಿದೆ.
ಬೆಳಗಾವಿ ಸೇರಿ ರಾಜ್ಯದ ಗಡಿ ಭಾಗಗಳಲ್ಲಿ ಎಂಇಎಸ್ ಸೇರಿ ಇನ್ನಿತರ ನಾಡ ವಿರೋಧಿ ಶಕ್ತಿಗಳು ಪುಂಡಾಟ ಮೆರೆಯಲು ಮುಂದಾಗಿವೆ. ಈ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಪೊಲೀಸ್ ಭದ್ರತೆಯನ್ನು ಬಿಗಿಗೊಳಿಸಲಾಗಿದೆ.
ನಗರದ ಪ್ರಮುಖ ರಸ್ತೆಗಳಲ್ಲಿ ಬೆಳಗಾವಿ ನಗರ ಕಮಿಷನರ್ ನೇತೃತ್ವದಲ್ಲಿ ಸೋಮವಾರ ಪೊಲೀಸ್ ವಾಹನಗಳ ಪಥ ಸಂಚಲನ ನಡೆಸಲಾಯಿತು. ನಗರದ ಸೂಕ್ಷ್ಮ ಅತಿಸೂಕ್ಷ್ಮ ಪ್ರದೇಶಗಳಲ್ಲಿ ಹೆಚ್ಚಿನ ಪೊಲೀಸರನ್ನು ನಿಯೋಜಿಸಿ ಬಿಗಿ ಭದ್ರತೆ ಕೈಗೊಳ್ಳಲಾಗಿದ್ದು ಪರಿಸ್ಥಿತಿಯ ಮೇಲೆ ಹದ್ದಿನ ಕಣ್ಣಿಡಲಾಗಿದೆ ಎಂದು ಡಾ.ಎಂ.ಬಿ.ಬೋರಲಿಂಗಯ್ಯ ತಿಳಿಸಿದರು.
Next Story