Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಹಿಂದೂ ಪದದ ಬಗ್ಗೆ ಹೇಳಿಕೆ ಹಿಂಪಡೆದ...

ಹಿಂದೂ ಪದದ ಬಗ್ಗೆ ಹೇಳಿಕೆ ಹಿಂಪಡೆದ ಸತೀಶ್ ಜಾರಕಿಹೊಳಿ

ಅವಾಂತರ ಸೃಷ್ಟಿಸಿದವರ ವಿರುದ್ಧ ತನಿಖೆಗೆ ಆಗ್ರಹಿಸಿ ಸಿಎಂ ಬೊಮ್ಮಾಯಿಗೆ ಪತ್ರ

9 Nov 2022 6:48 PM IST
share
ಹಿಂದೂ ಪದದ ಬಗ್ಗೆ ಹೇಳಿಕೆ ಹಿಂಪಡೆದ ಸತೀಶ್ ಜಾರಕಿಹೊಳಿ
ಅವಾಂತರ ಸೃಷ್ಟಿಸಿದವರ ವಿರುದ್ಧ ತನಿಖೆಗೆ ಆಗ್ರಹಿಸಿ ಸಿಎಂ ಬೊಮ್ಮಾಯಿಗೆ ಪತ್ರ

ಬೆಂಗಳೂರು: ಹಿಂದೂ ಪದದ ಬಗ್ಗೆ ನೀಡಿದ್ದ ತನ್ನ ಹೇಳಿಕೆಯನ್ನು ಕಾಂಗ್ರೆಸ್ ನಾಯಕ, ಮಾಜಿ ಸಚಿವ, ಕೆಪಿಸಿಸಿ ಕಾರ್ಯಾಧ್ಯಕ್ಷ ಹಾಗೂ ಹಾಲಿ ಶಾಸಕ ಸತೀಶ್ ಜಾರಕಿಹೊಳಿ ಹಿಂಪಡೆದಿದ್ದಾರೆ.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಬುಧವಾರ ಪತ್ರ ಬರೆದ ಸತೀಶ್ ಜಾರಕಿಹೊಳಿ, '' ನ. 06ರಂದು ಪ್ಪಾಣಿಯಲ್ಲಿ ಜರುಗಿದ ಮಾನವ ಬಂಧುತ್ವ ವೇದಿಕೆ ಕರ್ನಾಟಕ ಇದರ ಕಾರ್ಯಕ್ರಮದಲ್ಲಿ ಹಿಂದೂ ಪದದ ಕುರಿತು ನಾನು ನೀಡಿದ ಹೇಳಿಕೆಯನ್ನು ತಿರುಚಿ ಅಪಪ್ರಚಾರ ಮಾಡಲಾಗುತ್ತಿದೆ. ಇದರಿಂದ ಸಾರ್ವಜನಿಕರಲ್ಲಿ ಗೊಂದಲ ಸೃಷ್ಟಿ ಆಗಬಾರದು ಎಂದು ಹೇಳಿಕೆ ಹಿಂಪಡೆದಿದ್ದೇನೆ. ನನ್ನ ಹೇಳಿಕೆಯಿಂದ ಯಾರಿಗಾದರೂ ನೋವಾಗಿದ್ದರೆ ವಿಷಾದಿಸುತ್ತೇನೆ'' ಎಂದು ಪತ್ರದಲ್ಲಿ ತಿಳಿಸಿದ್ದಾರೆ.

''ಕೆಲವು ಪಟ್ಟಭದ್ರ ಹಿತಾಸಕ್ತಿಗಳು ನನ್ನನ್ನು ಹಿಂದೂ ವಿರೋಧಿ ಎಂದು ಬಿಂಬಿಸಲು ಹೊರಟಿವೆ. ನನ್ನ ತೇಜೋವಧೆ ಮಾಡುವ ವ್ಯವಸ್ಥಿತಿ ಪಿತೂರಿ ನಡೆದಿದೆ. ಈ ಎಲ್ಲ ಅಂಶಗಳ ಕುರಿತು ಪರಿಶೀಲಿಸಬೇಕು. ನೈಜ ಸ್ಥಿತಿ ವಿವರಿಸದೇ, ಅವಾಂತರ ಸೃಷ್ಟಿಸಿದವರ ವಿರುದ್ಧ ತನಿಖೆಗಾಗಿ ಸಮಿತಿ ರಚಿಸಬೇಕು'' ಎಂದೂ ಆಗ್ರಹಸಿದ್ದಾರೆ. 

''ಹಿಂದೂ ಶಬ್ಧ ಪರ್ಷಿಯನ್ ಭಾಷೆಯಿಂದ ಬಂದಿದೆ. ಇದು ಭಾರತಕ್ಕೆ ಹೇಗೆ ಬಂತು? ಹಲವಾರು ಲೇಖನಗಳಲ್ಲಿ ಹಿಂದೂ ಪದದ ಬಗ್ಗೆ ಕೆಟ್ಟ ಅರ್ಥಗಳಿವೆ ಎಂಬುದಾಗಿ ಬರೆದಿದ್ದಾರೆ ಎಂದು ನಾನು ಹೇಳಿಕೆ ನೀಡಿದ್ದೇನೆ. ಈ ಬಗ್ಗೆ ಸಾರ್ವಜನಿಕ ವಲಯದಲ್ಲಿ ಚರ್ಚೆ ಆಗಬೇಕಾದುದು ಅವಶ್ಯ ಎಂದು ಹೇಳಿದ್ದೇನೆ. ವಿಕಿಪೀಡಿಯಾ, ಪುಸ್ತಕಗಳು, ಶಬ್ದಕೋಶಗಳು ಹಾಗೂ ಇತಿಹಾಸಕಾರರ ಬರಹದ ಉಲ್ಲೇಖದ ಮೇಲೆ ಈ ನನ್ನ ಭಾಷಣ ಆಧರಿತವಾಗಿದೆ'' ಎಂದು ವಿವರಿಸಿದ್ದಾರೆ.

share
Next Story
X