Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ‘ಕೇಂದ್ರದಿಂದ ಬಂದಿರುವ ಪರಿಹಾರ ಎಷ್ಟು?’:...

‘ಕೇಂದ್ರದಿಂದ ಬಂದಿರುವ ಪರಿಹಾರ ಎಷ್ಟು?’: ಪ್ರಧಾನಿ ಮೋದಿಗೆ 15 ಪ್ರಶ್ನೆಗಳನ್ನು ಕೇಳಿದ ರಾಮಲಿಂಗಾರೆಡ್ಡಿ

9 Nov 2022 8:36 PM IST
share
‘ಕೇಂದ್ರದಿಂದ ಬಂದಿರುವ ಪರಿಹಾರ ಎಷ್ಟು?’: ಪ್ರಧಾನಿ ಮೋದಿಗೆ 15 ಪ್ರಶ್ನೆಗಳನ್ನು ಕೇಳಿದ ರಾಮಲಿಂಗಾರೆಡ್ಡಿ

ಬೆಂಗಳೂರು, ನ.9: ಡಬಲ್ ಇಂಜಿನ್ ಸರಕಾರ ಕರ್ನಾಟಕದಲ್ಲಿ ಏನು ಸಾಧನೆ ಮಾಡಿದೆ ಎಂದು ಉತ್ತರಿಸುವ ಧಮ್ಮು, ತಾಕತ್ತು 56 ಇಂಚಿನ ಎದೆಯ, ಮಾತಿನ ಮಲ್ಲ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಇದೆ ಎಂದು ಭಾವಿಸಿ 15 ಪ್ರಶ್ನೆಗಳನ್ನು ಕೇಳ ಬಯಸುತ್ತಿದ್ದೇನೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ರಾಮಲಿಂಗಾರೆಡ್ಡಿ ತಿಳಿಸಿದರು.

ಬುಧವಾರ ನಗರದ ಕ್ವೀನ್ಸ್ ರಸ್ತೆಯಲ್ಲಿರುವ ಕೆಪಿಸಿಸಿ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಐದು ವರ್ಷಗಳಲ್ಲಿ ರಾಜ್ಯದಲ್ಲಿ ನೆರೆಯಿಂದಾಗಿ 2.62ಲಕ್ಷ ಮನೆಗಳು, 1.5 ಲಕ್ಷ ಕಿ.ಮೀ ರಸ್ತೆಗಳು, 30 ಸಾವಿರ ಸೇತುವೆಗಳು, 54.32 ಲಕ್ಷ ಹೆಕ್ಟೇರ್ ಕೃಷಿ ಹಾಗೂ ತೋಟಗಾರಿಕಾ ಬೆಳೆ ನಾಶವಾಗಿದೆ. ಒಟ್ಟು 93,648 ಕೋಟಿ ರೂ.ಗಳಷ್ಟು ನಷ್ಟವಾಗಿದ್ದು, ರಾಜ್ಯಕ್ಕೆ ಕೇಂದ್ರದಿಂದ ಬಂದಿರುವ ಪರಿಹಾರ ಎಷ್ಟು? ಎಂದು ಪ್ರಶ್ನಿಸಿದರು.

ಸ್ಮಾರ್ಟ್ ಸಿಟಿ, ಜಲ್ ಜೀವನ ಮಿಷನ್, 2 ಕೋಟಿ ಉದ್ಯೋಗ, ರೈತರ ಆದಾಯ ಡಬಲ್ (2022 ಒಳಗೆ), ಎಲ್ಲರಿಗೂ ಸ್ವಂತ ಸೂರು (2022 ಒಳಗೆ) ಯಾವ ಒಂದು ಯೋಜನೆ ಸಂಪೂರ್ಣವಾಗಿದೆ ಹೇಳಿ? ಕೇಂದ್ರ ಸರಕಾರಕ್ಕೆ ಅತಿಹೆಚ್ಚು ಜಿಎಸ್ಟಿ ಕಟ್ಟುತ್ತಿರುವ ರಾಜ್ಯಗಳಲ್ಲಿ ಕರ್ನಾಟಕ 2ನೇ ರಾಜ್ಯ. ಜಿಎಸ್ಟಿ ಹಣದಲ್ಲಿ ರಾಜ್ಯಗಳಿಗೆ ಹಂಚಿಕೆ ಆಗುವ ಅನುದಾನದ ಪಟ್ಟಿಯಲ್ಲಿ ರಾಜ್ಯಕ್ಕೆ ಎಷ್ಟನೇ ಸ್ಥಾನ ಇದೆ ಎಂದು ಅವರು ಪ್ರಶ್ನಿಸಿದರು.

ಸಬ್ ಅರ್ಬನ್ ರೈಲಿಗೆ 40 ತಿಂಗಳು ಗಡವು ನೀಡಿದ್ದೀರಿ. ಈ ಯೋಜನೆಗೆ ಕೇಂದ್ರ ಬಿಡುಗಡೆ ಮಾಡಬೇಕಾಗಿದ್ದ ಹಣ ಎಷ್ಟು? ಈವರೆಗೂ ಎಷ್ಟು ಬಿಡುಗಡೆ ಮಾಡಿದ್ದೀರಿ? ನೀವು ಬಂದಾಗ ಬೆಂಗಳೂರು ನಗರಕ್ಕೆ ಸಿಂಗಾರ ಮಾಡಲು ಸರಕಾರ 23 ಕೋಟಿ ವೆಚ್ಚದಲ್ಲಿ ರಸ್ತೆ ಹಾಕಿತು. ನೀವು ರಾಜ್ಯ ಬಿಡುತ್ತಿದ್ದಂತೆ ರಸ್ತೆಯ ಡಾಂಬರು ಕಿತ್ತು ಬಂದವು. ಈ ಮಹಾನ್ ಸಾಧನೆ ಬಗ್ಗೆ ನಿಮ್ಮ ಅಭಿಪ್ರಾಯ ಏನು? ಎಂದು ರಾಮಲಿಂಗಾರೆಡ್ಡಿ ಪ್ರಶ್ನಿಸಿದರು.

ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣ 40 ಪರ್ಸೆಂಟ್ ಕಮಿಷನ್ ಕುರಿತ ದೂರು, ರೂಪ್ಸಾ ಸಂಸ್ಥೆ ನೀಡಿರುವ ದೂರು, ಬೆಳಗಾವಿ ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ, ಹುಬ್ಬಳ್ಳಿ ಗುತ್ತಿಗೆದಾರ ಬಸವರಾಜ್ ಅವರ ದಯಾಮರಣ ಅರ್ಜಿ ಬಗ್ಗೆ ಬಾಯಿಗೆ ಬೀಗ ಜಡಿದು ಕೊಂಡಿರುವುದು ಏಕೆ? ಎಂದು ಅವರು ಪ್ರಶ್ನಿಸಿದರು.

ಪಿಎಸ್ಸೈ, ಶಿಕ್ಷಕರು, ಆರೋಗ್ಯ ಇಲಾಖೆ ಸೇರಿದಂತೆ ಎಲ್ಲ ಇಲಾಖೆಗಳ ನೇಮಕಾತಿಯಲ್ಲಿ ಅಕ್ರಮ ತಾಂಡವವಾಡುತ್ತಿದೆ. ಆದರೂ ಸಿಬಿಐ, ಈ.ಡಿ, ಆದಾಯ ತೆರಿಗೆ ಇಲಾಖೆಗಳಿಂದ ತನಿಖೆ ಯಾಕಿಲ್ಲ? ಮುಖ್ಯಮಂತ್ರಿ ಕುರ್ಚಿಯನ್ನು 2500 ಕೋಟಿಗೆ, ಮಂತ್ರಿಸ್ಥಾನವನ್ನು 100 ಕೋಟಿಗೆ ಮಾರಾಟ ಮಾಡಲಾಗಿದೆ ಎಂದು ನಿಮ್ಮದೇ ಶಾಸಕರು ಹೇಳಿದ್ದಾರೆ. ಈ ಅಮೋಘ ಸಾಧನೆ ಬಗ್ಗೆ ಏನು ಹೇಳುತ್ತೀರಿ? ಎಂದು ಅವರು ಪ್ರಶ್ನಿಸಿದರು.

ಬೆಂಗಳೂರು ನಗರ ನಿಮ್ಮ ಆಡಳಿತದಲ್ಲಿ ಸಿಂಕಿಂಗ್ ಸಿಟಿ, ಗಾರ್ಬೇಜ್ ಸಿಟಿ ಆಗಿದೆ. ಈ ಬಗ್ಗೆ ನಿಮ್ಮ ಅಭಿಪ್ರಾಯ ಏನು? ರಸ್ತೆ ಗುಂಡಿಗೆ 20ಕ್ಕೂ ಹೆಚ್ಚು ಮಂದಿ ಪ್ರಾಣ ಕಳೆದುಕೊಂಡಿದ್ದಾರೆ. ಸಾವಿರಾರು ಮಂದಿ ಗಾಯಗೊಂಡಿದ್ದಾರೆ. ಇದರ ಜವಾಬ್ದಾರಿಯನ್ನು ಡಬಲ್ ಇಂಜಿನ್ ಸರಕಾರ ಹೊರಬೇಕಲ್ಲವೆ? ಮೇಕೆದಾಟು ಯೋಜನೆ ಜಾರಿ ವಿಚಾರ ಎಲ್ಲಿಯವರೆಗೂ ಬಂತು? ಮಹಾದಾಯಿ ಯೋಜನೆ ಜಾರಿ ಯಾವಾಗ? ಎಂದು ಅವರು ಪ್ರಶ್ನಿಸಿದರು.

ಕೋವಿಡ್ ನಿಂದ ಸತ್ತವರಲ್ಲಿ ಎಷ್ಟು ಕುಟುಂಬಕ್ಕೆ ಪರಿಹಾರ ನೀಡಿದ್ದೀರಿ? ನಿಮ್ಮ ಸರಕಾರದ ಯಾವುದಾದರೂ ಐದು ಕೊಡುಗೆಗಳನ್ನು ಹೇಳಿ ಜನರಿಂದ ಚಪ್ಪಾಳೆ ಗಿಟ್ಟಿಸಿಕೊಳ್ಳಲು ಸಾಧ್ಯವೇ? ಕೆಂಪೇಗೌಡರು 52 ಸಮುದಾಯಗಳ ಪೇಟೆಗಳನ್ನು ನಿರ್ಮಿಸಿದ್ದರು. ನಿಮ್ಮ ಸರಕಾರ ಜಾತಿ, ಧರ್ಮಗಳ ಹೆಸರಲ್ಲಿ ದ್ವೇಷ ಬಿತ್ತಿ ಸಮಾಜ ಒಡೆಯುತ್ತಿರುವುದು ಎಷ್ಟರಮಟ್ಟಿಗೆ ಸರಿ? ಎಂದು ರಾಮಲಿಂಗಾರೆಡ್ಡಿ ತಿಳಿಸಿದರು.

‘ಸತೀಶ್ ಜಾರಕಿಹೊಳಿ ನಿಜವಾದ ಹಿಂದೂ ಧರ್ಮ ಪಾಲಿಸಿದರೆ, ಬಿಜೆಪಿ ಚುನಾವಣೆಗಾಗಿ ಹಿಂದೂ ಧರ್ಮ ಎಂದು ಮಾತನಾಡುತ್ತಾರೆ. ನಮ್ಮದು ಸನಾತನ ಧರ್ಮ. ನನಗೆ ಅದರ ಬಗ್ಗೆ ಹೆಮ್ಮೆ ಇದೆ. ಸತೀಶ್ ಜಾರಕಿಹೊಳಿ ಯಾವ ಅರ್ಥದಲ್ಲಿ ಹೇಳಿದ್ದಾರೆ ಗೊತ್ತಿಲ್ಲ. ಅವರು ಹಿಂದೂ ಧರ್ಮದ ಬಗ್ಗೆ ಮಾತನಾಡಿಲ್ಲ. ಕಾಂಗ್ರೆಸ್‍ನವರು ಕಟ್ಟಿದಷ್ಟು ದೇವಾಲಯಗಳು, ದೇವಾಲಯಗಳ ಅಭಿವೃದ್ಧಿ ಹಾಗೂ ಜೀರ್ಣೋದ್ದಾರ ಕಾರ್ಯಗಳಲ್ಲಿ ಬಿಜೆಪಿಯವರು ಶೇ.10ರಷ್ಟು ಮಾಡಿಲ್ಲ’

-ರಾಮಲಿಂಗಾರೆಡ್ಡಿ, ಕೆಪಿಸಿಸಿ ಕಾರ್ಯಾಧ್ಯಕ್ಷ

share
Next Story
X