Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಧರ್ಮದ ಆಧಾರದ ಮೇಲೆ ಬಸ್ ನಿಲ್ದಾಣ...

ಧರ್ಮದ ಆಧಾರದ ಮೇಲೆ ಬಸ್ ನಿಲ್ದಾಣ ನಿರ್ಮಿಸಿಲ್ಲ, ಗುತ್ತಿಗೆದಾರ ಮುಸ್ಲಿಮ್ ಅಲ್ಲ: ಶಾಸಕ ಎಸ್.ಎ. ರಾಮದಾಸ್

ಪ್ರತಾಪ್‌ ಸಿಂಹ ಹೇಳಿಕೆಗೆ ಸ್ಪಷ್ಟನೆ ನೀಡಿದ BJP ಶಾಸಕ

16 Nov 2022 9:37 AM IST
share
ಧರ್ಮದ ಆಧಾರದ ಮೇಲೆ ಬಸ್ ನಿಲ್ದಾಣ ನಿರ್ಮಿಸಿಲ್ಲ, ಗುತ್ತಿಗೆದಾರ ಮುಸ್ಲಿಮ್ ಅಲ್ಲ: ಶಾಸಕ ಎಸ್.ಎ. ರಾಮದಾಸ್
ಪ್ರತಾಪ್‌ ಸಿಂಹ ಹೇಳಿಕೆಗೆ ಸ್ಪಷ್ಟನೆ ನೀಡಿದ BJP ಶಾಸಕ

ಮೈಸೂರು, ನ. 15: 'ಬಸ್ ನಿಲ್ದಾಣ ಗುಂಬಜ್ ರೀತಿ ಇದೆ. ಅದನ್ನು ಒಡೆಯುತ್ತೇನೆ' ಎಂಬ ವಿವಾದಕ್ಕೆ ಕಾರಣವಾಗಿದ್ದ ಸಂಸದ ಪ್ರತಾಪ್‌ ಸಿಂಹ ಹೇಳಿಕೆಗೆ ಇದೀಗ ಕೃಷ್ಣರಾಜ ವಿಧಾನ ಸಭೆ ಕ್ಷೇತ್ರದ  ಶಾಸಕ ಎಸ್.ಎ.ರಾಮದಾಸ್ ಸ್ಪಷ್ಟನೆ ನೀಡಿದ್ದಾರೆ.

ಈ ಕುರಿತು ಪತ್ರಿಕಾ ಪ್ರಕಟನೆ ಹೊರಡಿಸಿರುವ ಅವರು, ''ಕೆ.ಆರ್.ಕ್ಷೇತ್ರದಲ್ಲಿ ಬಸ್ ನಿಲ್ದಾಣಗಳನ್ನು ಅರಮನೆ ವಿನ್ಯಾಸದ ಮಾದರಿಯಲ್ಲಿ ನಿರ್ಮಿಸಲಾಗುತ್ತಿದೆಯೇ ಹೊರತು, ಯಾವುದೇ ಧರ್ಮದ ಆಧಾರದ ಮೇಲೆ ಅಲ್ಲ'' ಎಂದು ಸ್ಪಷ್ಟಪಡಿಸಿದ್ದಾರೆ.

''ವಿನ್ಯಾಸವನ್ನು ತಪ್ಪಾಗಿ ಅರ್ಥೈಸಿಕೊಂಡು ಮಸೀದಿಯಂತೆ ನಿರ್ಮಿಸಲಾಗುತ್ತಿದೆ ಹಾಗೂ ಗುತ್ತಿಗೆದಾರ ಮುಸ್ಲಿಮ್ ಎಂದೆಲ್ಲಾ ಸಾಮಾಜಿಕ ಜಾಲತಾಣದಲ್ಲಿ ಹಬ್ಬಿಸುವ ಹುನ್ನಾರ ಗಮನಕ್ಕೆ ಬಂದ ಕೂಡಲೇ ಸೂಕ್ತ ಕ್ರಮಕ್ಕಾಗಿ ನಗರ ಪೊಲೀಸ್ ಆಯುಕ್ತರಿಗೆ ಪತ್ರ ಬರೆದು ದೂರು ನೀಡಿದ್ದೇನೆ.  ನಗರದಲ್ಲಿ ಈಗಾಗಲೇ ಹಲವೆಡೆ ಇದೇ ಮಾದರಿಯ ತಂಗುದಾಣಗಳಿವೆ. ಅದೇ ಮಾದರಿಯನ್ನು ನಾವೂ ಅನುಸರಿಸಿದ್ದೇವೆ. ಸಂಸದ ಪ್ರತಾಪ ಸಿಂಹ ಹೇಳಿಕೆ ನಂತರ ರಾತ್ರೋರಾತ್ರಿ ಕಳಶ ಅಳವಡಿಸಿಲ್ಲ. ಕಳೆದ ವಾರವೇ ಹಾಕಲಾಗಿದೆ. ಮಹದೇವ್ ಎಂಬ ಗುತ್ತಿಗೆದಾರ ಇದನ್ನು ನಿರ್ಮಿಸುತ್ತಿದ್ದಾರೆ. ಎಲ್‌ಇಡಿ ಪರದೆ ಅಳವಡಿಸಿ ಕೇಂದ್ರ ಹಾಗೂ ರಾಜ್ಯ ಸರ್ಕಾರದ ಯೋಜನೆಗಳನ್ನೂ ತಿಳಿಸಲಾಗುವುದು. ಕಾಮಗಾರಿ ಪ್ರಗತಿಯಲ್ಲಿದೆ'' ಎಂದಿದ್ದಾರೆ.

''ವಿನ್ಯಾಸವನ್ನು ಪರಿಶೀಲಿಸಿ ವರದಿ ಸಲ್ಲಿಸಲು ತಜ್ಞರ ಸಮಿತಿ ರಚಿಸುವಂತೆ ಸರ್ಕಾರಕ್ಕೆ ಬರೆಯಲಾಗಿದೆ. ವಿವಾದವಾಗಲಿದೆ ಎನ್ನುವುದು ಅಥವಾ ತಪ್ಪಿದೆ ಎಂಬುದನ್ನು ಸಮಿತಿಯು ಹೇಳಿದರೆ ಬದಲಾಯಿಸಲು ನಮ್ಮ ಅಭ್ಯಂತರವೇನಿಲ್ಲ'' ಎಂದು ಸ್ಪಷ್ಟಪಡಿಸಿದ್ದಾರೆ.

''ಕೃಷ್ಣರಾಜ ಕ್ಷೇತ್ರದ ವ್ಯಾಪ್ತಿಗೆ ಬರುವ ನಗರ ಪ್ರದೇಶಗಳಲ್ಲಿ, ಅಭಿವೃದ್ಧಿ ಕಾರ್ಯ ನಿರಂತರ ನಡೆಯುತ್ತವೆ. ಈ ನಿಟ್ಟಿನಲ್ಲಿ ಹಲವಾರು ಸ್ಥಳಗಳಲ್ಲಿ ಬಸ್ ತಂಗುದಾಣದ ಅವಶ್ಯಕತೆಯಿದೆ. ಆದ್ದರಿಂದ ಶಾಸಕರ ನಿಧಿಯಿಂದ ವಿವಿಧ ವಿನ್ಯಾಸಗಳಲ್ಲಿ ಬಸ್ ತಂಗುದಾಣಗಳನ್ನು ನಿರ್ಮಿಸಿಲು ನಿರ್ಧರಿಸಲಾಗಿದೆ'' ಎಂದು ಪ್ರಕಟನೆಯಲ್ಲಿ ತಿಳಿಸಿದ್ದಾರೆ.

ಇದನ್ನೂ ಓದಿ... ನಮ್ಮ ಜಿಲ್ಲೆಯವರೊಬ್ಬರು ಸಿಎಂ ಆಗಲಿ...: ಕೋಲಾರದಿಂದ ಸಿದ್ದರಾಮಯ್ಯ ಸ್ಪರ್ಧೆ ವಿಚಾರಕ್ಕೆ BJP ಶಾಸಕನ ಪ್ರತಿಕ್ರಿಯೆ

share
Next Story
X