Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಶಾಸಕ ಎಂ.ಪಿ.ಕುಮಾರಸ್ವಾಮಿ ಮೇಲಿನ ಹಲ್ಲೆ...

ಶಾಸಕ ಎಂ.ಪಿ.ಕುಮಾರಸ್ವಾಮಿ ಮೇಲಿನ ಹಲ್ಲೆ ಬಿಜೆಪಿಯ 'ಬಿ' ಟೀಮ್‍ನ ಕೃತ್ಯ: ಕೆಪಿಸಿಸಿ ವಕ್ತಾರ ಎಚ್.ಎಚ್. ದೇವರಾಜ್ ಆರೋಪ

22 Nov 2022 5:28 PM IST
share
ಶಾಸಕ ಎಂ.ಪಿ.ಕುಮಾರಸ್ವಾಮಿ ಮೇಲಿನ ಹಲ್ಲೆ ಬಿಜೆಪಿಯ ಬಿ ಟೀಮ್‍ನ ಕೃತ್ಯ: ಕೆಪಿಸಿಸಿ ವಕ್ತಾರ ಎಚ್.ಎಚ್. ದೇವರಾಜ್ ಆರೋಪ

ಚಿಕ್ಕಮಗಳೂರು, ನ.22: ಕಾಡಾನೆ ದಾಳಿಯಿಂದ ರವಿವಾರ ಮೃತಪಟ್ಟ ಘಟನಾ ಸ್ಥಳಕ್ಕೆ ಮೂಡಿಗೆರೆ ಕ್ಷೇತ್ರದ ಶಾಸಕ ಎಂ.ಪಿ.ಕುಮಾರಸ್ವಾಮಿ ಅವರು ಭೇಟಿ ನೀಡಿದ್ದ ಸಂದರ್ಭದಲ್ಲಿ ಉದ್ರಿಕ್ತ ಜನರು ನಡೆಸಿದ್ದರೆನ್ನಲಾದ ದಾಂಧಲೆಯ ಹಿಂದೆ ಮೂಡಿಗೆರೆಯಲ್ಲಿ ಶಾಸಕರ ವಿರುದ್ಧ ಕಾರ್ಯನಿರ್ವಹಿಸುತ್ತಿರುವ ಬಿಜೆಪಿಯ ಬಿ ಟೀಮ್‍ನ ಕೃತ್ಯವಾಗಿದೆ ಎಂದು ಕೆಪಿಸಿಸಿ ವಕ್ತಾರ ಎಚ್.ಎಚ್.ದೇವರಾಜ್ ಆರೋಪಿಸಿದ್ದಾರೆ.

ಮಂಗಳವಾರ ನಗರದಲ್ಲಿ ಕಾಂಗ್ರೆಸ್, ಸಿಪಿಐ, ಜೆಡಿಎಸ್ ಪಕ್ಷಗಳ ವತಿಯಿಂದ ಕರೆಯಲಾಗಿದ್ದ ಜಂಟಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ''ಮೂಡಿಗೆರೆ ತಾಲೂಕಿನ ಕುಂದೂರು ಹುಲ್ಲೇಮನೆ ಗ್ರಾಮದಲ್ಲಿ ರವಿವಾರ ಬೆಳಗ್ಗೆ ಕಾಡಾನೆ ದಾಳಿಯಿಂದ ಶೋಭಾ ಎಂಬ ಮಹಿಳೆ ಮೃತಪಟ್ಟಿದ್ದು, ಈ ಘಟನಾ ಸ್ಥಳಕ್ಕೆ ಶಾಸಕ ಕುಮಾರಸ್ವಾಮಿ ಅವರು ಭೇಟಿ ನೀಡಿದ ಸಂದರ್ಭದಲ್ಲಿ ಉದ್ರಿಕ್ತರಾಗಿದ್ದ ಜನರ ಗುಂಪೊಂದು ಶಾಸಕರನ್ನು ಅಟ್ಟಾಡಿಸಿ ದಾಂಧಲೆ ನಡೆಸಿದ್ದಾರೆ. ಈ ವೇಳೆ ಶಾಸಕರ ಮೇಲೆ ಹಲ್ಲೆಯನ್ನೂ ಮಾಡಲಾಗಿದೆ ಎಂದು ಸ್ವತಃ ಶಾಸಕರೇ ಹೇಳಿಕೆ ನೀಡಿರುವುದು ದುರಾದೃಷ್ಟಕರ. ಸ್ಥಳದಲ್ಲಿದ್ದ ಗ್ರಾಮಸ್ಥರ ಪ್ರಕಾರ ಶಾಸಕರ ಮೇಲೆ ಸ್ಥಳೀಯ ಗ್ರಾಮಸ್ಥರು ಯಾರೂ ಹಲ್ಲೆ ಮಾಡಿಲ್ಲ. ಒಂದು ವೇಳೆ ಹಲ್ಲೆ ನಡೆದಿದ್ದರೆ ಅದು ಮೂಡಿಗೆರೆ ಕ್ಷೇತ್ರದಲ್ಲಿ ಶಾಸಕ ಕುಮಾರಸ್ವಾಮಿ ವಿರುದ್ಧ ಕಾರ್ಯನಿರ್ವಹಿಸುತ್ತಿರುವ ಬಿಜೆಪಿಯ ಬಿ ಟೀಮ್‍ನ ಕೃತ್ಯವಾಗಿದೆ'' ಎಂದು ಅವರು ಆರೋಪಿಸಿದರು.

''ರವಿವಾರ ಕಾಡಾನೆ ದಾಳಿ ನಡೆದ ಗ್ರಾಮಕ್ಕೆ ಬಿಜೆಪಿ ಮುಖಂಡರು ಭೇಟಿ ನೀಡಿದ್ದರು. ಮೂಡಿಗೆರೆ ಕ್ಷೇತ್ರದಲ್ಲಿ ಬಿಜೆಪಿ ಟಿಕೆಟ್ ಆಕಾಂಕ್ಷಿಯಾಗಿರುವ ದೀಪಕ್ ದೊಡ್ಡಯ್ಯ ಅವರೂ ಇದ್ದರು. ಘಟನೆ ಸಂಬಂಧ ಸ್ವತಃ ಶಾಸಕ ಕುಮಾರಸ್ವಾಮಿ ಅವರು ದೀಪಕ್ ದೊಡ್ಡಯ್ಯ ಅವರ ಮೇಲೆ ಶಂಕೆ ವ್ಯಕ್ತಪಡಿಸಿರುವುದರಿಂದ ಶಾಸಕರನ್ನು ಅಟ್ಟಾಡಿಸಿದ ಘಟನೆಯಲ್ಲಿ ಬಿಜೆಪಿಯ ಬಿ ಟೀಮ್ ಕೆಲಸ ಮಾಡಿರುವುದು ಸ್ಪಷ್ಟ. ಘಟನೆ ಹಿಂದೆ ಕಾಣದ ಕೈಗಳು ಕೆಲಸ ಮಾಡಿದ್ದು, ಈ ಸಂಬಂಧ ಸಮಗ್ರ ತನಿಖೆ ನಡೆಸಿ ಆರೋಪಿಗಳ ವಿರುದ್ಧ ಕ್ರಮಕೈಗೊಳ್ಳಬೇಕು'' ಎಂದು ದೇವರಾಜ್ ಆಗ್ರಹಿಸಿದರು.

''ಘಟನಾ ಸ್ಥಳದಲ್ಲಿದ್ದ ಜನರು ಕಾಡಾನೆ ದಾಳಿಯಿಂದ ಮಹಿಳೆ ಮೃತಪಟ್ಟಿದ್ದರಿಂದ ಆಕ್ರೋಶಿತರಾಗಿದ್ದು ನಿಜ, ಅಧಿಕಾರಿಗಳನ್ನು ತರಾಟೆಗೆ ಪಡೆದದ್ದೂ ನಿಜ, ಆದರೆ ಯಾರ ಮೇಲೂ ಸ್ಥಳೀಯ ಗ್ರಾಮಸ್ಥರು ಹಲ್ಲೆ ಮಾಡಿಲ್ಲ. ಗ್ರಾಮಕ್ಕೆ ತಡವಾಗಿ ಬಂದ ಶಾಸಕರ ವಿರುದ್ಧವೂ ಜನರು ಆಕ್ರೋಶಗೊಂಡಿದ್ದರಾದರೂ ಸ್ಥಳೀಯರ್ಯಾರೂ ಹಲ್ಲೆ ಮಾಡಿಲ್ಲ ಎಂದು ಗ್ರಾಮಸ್ಥರೇ ತಿಳಿಸಿದ್ದಾರೆ. ಘಟನೆ ಸಂದರ್ಭ ಗ್ರಾಮಕ್ಕೆ ಬಂದಿದ್ದ ಹೊರಗಿನ ವ್ಯಕ್ತಿಗಳು ಈ ದಾಂಧಲೆ ನಡೆಸಿದ್ದಾರೆ. ಗ್ರಾಮಕ್ಕೆ ಹೊರಗಿನಿಂದ ಬಂದಿದ್ದವರು ಯಾರು? ಅವರೆಲ್ಲರೂ ಬಿಜೆಪಿ ಪಕ್ಷದ ಕಾರ್ಯಕರ್ತರಾ ಎಂಬುದನ್ನೂ ಪತ್ತೆ ಮಾಡಬೇಕು ಎಂದ ಅವರು, ಘಟನೆ ಸಂಬಂಧ ಪೊಲೀಸರು 8 ಮಂದಿಯನ್ನು ಬಂಧಿಸಿದ್ದು, ಬಂದನಕ್ಕೊಳಗಾದವರು ಅಮಾಯಕರಾಗಿದ್ದಾರೆ. ಪೊಲೀಸರು ಅಮಾಯಕರನ್ನು ಬಿಡುಗಡೆ ಮಾಡಿ ಸಂಚು ಮಾಡಿ ದಾಂಧಲೆ ಸೃಷ್ಟಿಸಿದವರನ್ನು ಬಂಧಿಸಬೇಕು'' ಎಂದರು. 

ಸಿಪಿಐ ಪಕ್ಷದ ರಾಧಾ ಸುಂದರೇಶ್ ಮಾತನಾಡಿ, ''ಜಿಲ್ಲೆಯಲ್ಲಿ ಕಾಡು ಪ್ರಾಣಿಗಳು-ಮಾನವ ಸಂಘರ್ಷಕ್ಕೆ ಸರಕಾರ ಹಾಗೂ ಅರಣ್ಯ ಇಲಾಖೆ ಕಾರಣ, ಕಾಡಿನಲ್ಲಿ ಅರಣ್ಯ ಇಲಾಖೆ ಕಾಡು ಪ್ರಾಣಿಗಳಿಗೆ ಬೇಕಾದ ಬಿದಿರು, ಹಣ್ಣು ಹಂಪಲಿನ ಮರಗಿಡಗಳನ್ನು ಬೆಳೆಸದೇ ಅಕೇಶಿಯಾ, ನೀಲಗಿರಿಯಂತಹ ಮರಗಳನ್ನು ಬೆಳೆಸುತ್ತಿರುವುದರಿಂದ ಪ್ರಾಣಿಗಳಿಗೆ ಆಹಾರ ಸಿಗದೇ ಪ್ರಾಣಿಗಳು ನಾಡಿನತ್ತ ಆಹಾರಕ್ಕಾಗಿ ಬರುತ್ತಿವೆ. ಇದನ್ನು ಮರೆಮಾಚಲು ಸರಕಾರ ರೈತರ ಮೇಲೆ ಗೂಬೆ ಕೂರಿಸುತ್ತಾ ರೈತರು, ಬೆಳೆಗಾರರು ಅರಣ್ಯ ಒತ್ತುವರಿ ಮಾಡಿರುವುದರಿಂದ ಪ್ರಾಣಿಗಳು ನಾಡಿನತ್ತ ಬರುತ್ತಿವೆ ಎಂದು ಅಪಪ್ರಚಾರ ಮಾಡುತ್ತಿದೆ. ಸರಕಾರ ಉಪಯೋಗವಿಲ್ಲದ ಮರಗಳನ್ನು ಬೆಳೆಸುವ ನೀತಿ ಕೈಬಿಟ್ಟು ಕಾಡು ಪ್ರಾಣಿಗಳಿಗೆ ಆಹಾರ ನೀಡುವ ಮರಗಿಡಗಳನ್ನು ಬೆಳೆಸಲು ನೀತಿ ರೂಪಿಸಬೇಕು'' ಎಂದು ಆಗ್ರಹಿಸಿದರು. 

ಈ ಸಂದರ್ಭದಲ್ಲಿ ಜೆಡಿಎಸ್ ಮುಖಂಡ ಮಂಜಪ್ಪ ಸುದ್ದಿಗೋಷ್ಠಿಯಲ್ಲಿ ಉಪಸ್ಥಿತರಿದ್ದರು.

''ಮಲೆನಾಡು ಭಾಗದಲ್ಲಿ ಕಾಡಾನೆ ಹಾವಳಿ ಮಿತಿಮೀರಿದ್ದು, ಕಾಡಾನೆ ಹಾವಳಿಯಿಂದಾಗಿ ರೈತರು ಬೆಳೆ ಕಳೆದುಕೊಳ್ಳುತ್ತಿರುವುದಲ್ಲದೇ ಪ್ರಾಣವನ್ನೂ ಕಳೆದುಕೊಳ್ಳುತ್ತಿದ್ದಾರೆ. ಕಾಡಾನೆ ದಾಳಿಯಿಂದ ಒಂದೇ ವರ್ಷದಲ್ಲಿ 6ಕ್ಕೂ ಹೆಚ್ಚು ಮಂದಿ ಮೃತಪಟ್ಟಿದ್ದಾರೆ. ಸಾವು ನೋವುಗಳು ಸಂಭವಿಸುತ್ತಿದ್ದರೂ ರಾಜ್ಯ ಸರಕಾರ ಕಾಡಾನೆ ಹಾವಳಿ ನಿಯಂತ್ರಣಕ್ಕೆ ಸರಕಾರ ಇದುವರೆಗೂ ಶಾಶ್ವತ ಯೋಜನೆ ರೂಪಿಸುವಲ್ಲಿ ವಿಫಲವಾಗಿದೆ. ಇದಕ್ಕೆ ಬಿಜೆಪಿಯ ಶಾಸಕ ಸಿ.ಟಿ.ರವಿ. ಕೇಂದ್ರ ಮಂತ್ರಿ ಶೋಭಾ ಕರಂದ್ಲಾಜೆ ಸೇರಿದಂತೆ ಜಿಲ್ಲೆಯ ಜನಪ್ರತಿನಿಧಗಳ ನಿರ್ಲಕ್ಷ್ಯ ಕಾರಣ. ಸರಕರ ಇನ್ನಾದರೂ ಶಾಶ್ವತ ಯೋಜನೆ ಜಾರಿ ಮಾಡದಿದ್ದಲ್ಲಿ ಜನರ ಆಕ್ರೋಶಕ್ಕೆ ಸರಕಾರ ಗುರಿಯಾಗಲಿದೆ. ಹುಲ್ಲೇಮನೆ ಘಟನೆ ಸಂಬಂಧ ಮೃತ ಮಹಿಳೆಯ ಕುಟುಂಬಕ್ಕೆ ಸರಕಾರ 50 ಲಕ್ಷ ರೂ. ಪರಿಹಾರ ನೀಡಬೇಕು. ಮಹಿಳೆಯ ಮಗನಿಗೆ ಸರಕಾರಿ ಕೆಲಸ ನೀಡಬೇಕು''

- ಎಚ್.ಎಚ್.ದೇವರಾಜ್

share
Next Story
X