Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಮಾಜಿ ರೌಡಿ 'ಸೈಲೆಂಟ್' ಸುನೀಲ್‍ಗೆ...

ಮಾಜಿ ರೌಡಿ 'ಸೈಲೆಂಟ್' ಸುನೀಲ್‍ಗೆ ಬಿಜೆಪಿ ಟಿಕೆಟ್?

27 Nov 2022 10:23 PM IST
share
ಮಾಜಿ ರೌಡಿ ಸೈಲೆಂಟ್ ಸುನೀಲ್‍ಗೆ ಬಿಜೆಪಿ ಟಿಕೆಟ್?

ಬೆಂಗಳೂರು: ಬೆಂಗಳೂರಿನ ಚಾಮರಾಜಪೇಟೆ ವಿಧಾನಸಭಾ ಕ್ಷೇತ್ರದಿಂದ ಮಾಜಿ ರೌಡಿ ಸೈಲೆಂಟ್ ಸುನೀಲ್ ಯಾನೆ ಸುನೀಲ್ ಕುಮಾರ್ ಗೆ ಬಿಜೆಪಿ ಟಿಕೆಟ್ ನೀಡಲು ಮುಂದಾಗಿದೆ ಎಂದು ವರದಿಯಾಗಿದೆ.

ಇದಕ್ಕೆ ಪುಷ್ಟಿ ನೀಡುವಂತೆ ರವಿವಾರ ಇಲ್ಲಿನ ವೆಂಕಟರಾವ್ ಕಲಾಭವನದಲ್ಲಿ  ಸೈಲೆಂಟ್ ಸುನೀಲ್ ನೇತೃತ್ವದಲ್ಲಿ ಹಮ್ಮಿಕೊಂಡಿದ್ದ ರಕ್ತದಾನ ಶಿಬಿರದಲ್ಲಿ ಬಿಜೆಪಿ ನಾಯಕರು ಮಾತ್ರ ಭಾಗಿಯಾಗಿದ್ದು, ಚಾಮರಾಜಪೇಟೆ ವಿಧಾನಸಭಾ ಕ್ಷೇತ್ರದ ಆಕಾಂಕ್ಷಿ ಎಂದು ಬಿಂಬಿಸಲಾಯಿತು.

(ಸೈಲೆಂಟ್ ಸುನೀಲ್ Photo:jansatta.com)

ಇನ್ನು, ಈ ಕುರಿತು ಪ್ರತಿಕ್ರಿಯಿಸಿದ್ದ ಸೈಲೆಂಟ್ ಸುನೀಲ್, ಮುಂದಿನ ದಿನಗಳಲ್ಲಿ ಸೂಕ್ತ ಅವಕಾಶ ಸಿಕ್ಕರೆ ಖಂಡಿತವಾಗಿ ರಾಜಕೀಯಕ್ಕೆ ಬರುತ್ತೇನೆ. ಪ್ರಾಮಾಣಿಕವಾಗಿ ಜನ ಸೇವೆ ಮಾಡಲು ಆರಂಭಿಸಿದ್ದೇನೆ. ಗುರುಹಿರಿಯರ ಮಾರ್ಗದರ್ಶನದಂತೆ ಸಮಾಜ ಸೇವೆ ಮಾಡುತ್ತೇನೆ ಎಂದರು.

ಬಿಜೆಪಿ ಸಂಸದ ಪಿ.ಸಿ.ಮೋಹನ್ ಮಾತನಾಡಿ, ಸುನೀಲ್ ಕುಮಾರ್ ಸಾಮಾಜಿಕ ಸೇವೆ ಮೂಲಕ ರಕ್ತದಾನ ಶಿಬಿರಕ್ಕೆ ಹೊಸ ಮುನ್ನುಡಿ ಬರೆಯಲು ಹೊರಟಿದ್ದಾರೆ. ಸುನೀಲ್ ಕುಮಾರ್ ಸೇವೆ ಕಾರ್ಯ ರಾಜಕೀಯ ಕ್ಷೇತ್ರಕ್ಕೂ ವಿಸ್ತರಿಸಲಿ. ಅದಕ್ಕೆ ನಮ್ಮ ಬೆಂಬಲ ಮತ್ತು ಸಹಕಾರ ಇರುತ್ತದೆ ಎಂದು ತಿಳಿಸಿದರು.

ಬೆಂಗಳೂರು ದಕ್ಷಿಣ ಜಿಲ್ಲೆ ಬಿಜೆಪಿ ಅಧ್ಯಕ್ಷ  ಎನ್.ಆರ್.ರಮೇಶ್ ಮಾತನಾಡಿ, ಸಾರ್ವಜನಿಕ ಜೀವನದಲ್ಲಿ ಪ್ರಾರಂಭ ಮಾಡುತ್ತಿರುವ ಸುನೀಲ್ ಕುಮಾರ್ ಅವರಿಗೆ ಶುಭಾಶಯಗಳು. ಈ ಒಂದು ಕ್ಷೇತ್ರದಲ್ಲಿ ನಡೆದಿರುವ ನೂರಾರು ಕೋಟಿ ಹಗರಣ ಬಗ್ಗೆ ದಾಖಲೆ ಬಿಡುಗಡೆ ಮಾಡುತ್ತೇನೆ. ಈ ಒಂದು ಕ್ಷೇತ್ರದಲ್ಲಿ ಭಯ ವಾತಾವರಣ ಇದೆ ಎಂದು ದೂರಿದರು.

ಈ ಸಂದರ್ಭದಲ್ಲಿ ಬಿಜೆಪಿ ಶಾಸಕ ಉದಯ್ ಬಿ.ಗರುಡಾಚಾರ್, ವಿಶ್ವ ಒಕ್ಕಲಿಗರ ಮಠದ ಚಂದ್ರಶೇಖರನಾಥ ಸ್ವಾಮೀಜಿ ಸೇರಿದಂತೆ ಪ್ರಮುಖರಿದ್ದರು.

ಸಿಸಿಬಿ ದಾಳಿ ನಡೆಸಿತ್ತು..!
ಈ ಹಿಂದೆ ಅಕ್ರಮವಾಗಿ ಶಸ್ತ್ರಾಸ್ತ್ರ ಸಂಗ್ರಹಿಸಿದ ಆರೋಪದಡಿ ನ್ಯಾಯಾಂಗ ಬಂಧಿತನಾಗಿದ್ದ ಸೈಲೆಂಟ್ ಸುನೀಲ್ ಸದ್ಯ ಜಮೀನಿನ ಮೇಲೆ ಹೊರಗಡೆ ಇದ್ದಾರೆ. 2021ನೆ ಸಾಲಿನಲ್ಲಿ ಇವರ ನಿವಾಸದ ಮೇಲೆ ಕಳೆದ ವರ್ಷ ಸಿಸಿಬಿ ಪೊಲೀಸರು ದಾಳಿ ನಡೆಸಿದ್ದರು.

share
Next Story
X