ರಕ್ಷಣಾ ಇಲಾಖೆಯ 732.24 ಎಕರೆ ಹಸ್ತಾಂತರಿಸಲು ರಾಜನಾಥ್ ಸಿಂಗ್ ಗೆ ಸಿಎಂ ಬೊಮ್ಮಾಯಿ ಮನವಿ
ಹೊಸದಿಲ್ಲಿ, ನ.29: ಬೆಳಗಾವಿ ಜಿಲ್ಲೆಯ ತುಕಮಟ್ಟಿ ಗ್ರಾಮದ 732.24 ಎಕರೆ ಪ್ರದೇಶವು ರಕ್ಷಣಾ ಪ್ರಾಧಿಕಾರದ ವಶದಲ್ಲಿದ್ದು, ಯಾವುದೇ ಅಭಿವೃದ್ಧಿ ಕಾರ್ಯಗಳನ್ನು ಕೈಗೆತ್ತಿಕೊಳ್ಳಲು ಸಾಧ್ಯವಾಗುತ್ತಿಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
ಮಂಗಳವಾರ ಹೊಸದಿಲ್ಲಿಯಲ್ಲಿ ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರನ್ನು ಭೇಟಿಯಾದ ಮುಖ್ಯಮಂತ್ರಿ, ಅಭಿವೃದ್ಧಿಯ ದೃಷ್ಟಿಯಿಂದ ಈ ಭೂ ಪ್ರದೇಶವನ್ನು ಬೆಳಗಾವಿ ಜಿಲ್ಲಾಧಿಕಾರಿಗೆ ಹಸ್ತಾಂತರಿಸಲು ರಕ್ಷಣಾ ಪ್ರಾಧಿಕಾರಗಳಿಗೆ ಸೂಕ್ತ ನಿರ್ದೇಶನ ನೀಡುವಂತೆ ಕೋರಿದರು.
Next Story