VIDEO | ಬಾಗಲಕೋಟೆ: ವ್ಯಕ್ತಿಯ ಹೊಟ್ಟೆಯಿಂದ 187 ನಾಣ್ಯ ಹೊರತೆಗೆದ ವೈದ್ಯರು!
ಬಾಗಲಕೋಟೆ: ವ್ಯಕ್ತಿಯೊರ್ವನ ಹೊಟ್ಟೆಯಲ್ಲಿ 187 ಕಾಯಿನ್ ಪತ್ತೆ ಯಾಗಿದ್ದು, ವೈದ್ಯರು ಶಸ್ತ್ರಚಿಕಿತ್ಸೆ ಮೂಲಕ ಹೂರ ತೆಗೆದಿರುವ ಘಟನೆಯೊಂದು ಬಾಗಲಕೋಟೆಯಲ್ಲಿ (Bagalkote) ವರದಿಯಾಗಿದೆ.
187 ನಾಣ್ಯಗಳನ್ನು ನುಂಗಿದ್ದ 58 ವರ್ಷದ ದ್ಯಾಮಣ್ಣ ಎಂಬವರು, ತೀವ್ರ ಹೊಟ್ಟೆ ನೋವು ಹಾಗೂ ವಾಂತಿಯಿಂದಾಗಿ ಬಾಗಲಕೋಟೆಯ ಹಾನಗಲ್ ಶ್ರೀ ಕುಮಾರೇಶ್ವರ ಆಸ್ಪತ್ರೆ ಮತ್ತು ಸಂಶೋಧನಾ ಕೇಂದ್ರಕ್ಕೆ ದಾಖಲಾಗಿದ್ದರು.
ಬಳಿಕ ತಪಾಸಣೆ ನಡೆಸಿದ ವೈದ್ಯರಿಗೆ ಹೊಟ್ಟೆಯಲ್ಲಿ ನಾಣ್ಯಗಳಿರುವುದು ಕಂಡು ಬಂದಿತ್ತು. ನಂತರ ಎಂಡೋಸ್ಕೋಪಿ ಮೂಲಕ ವೈದ್ಯರು ಹೊಟ್ಟೆಯಿಂದ 187 ನಾಣ್ಯಗಳನ್ನು ಹೊರಕ್ಕೆ ತೆಗೆದಿದ್ದಾರೆ. ಬಸವೇಶ್ವರ ವಿದ್ಯಾವರ್ಧಕ ಸಂಘದ ಹಾನಗಲ್ ಶ್ರೀಕುಮಾರೇಶ್ವರ ಆಸ್ಪತ್ರೆಯಲ್ಲಿ ಚಿಕಿತ್ಸೆ ಮಾಡಲಾಗಿದೆ.
ರಾಯಚೂರು ಜಿಲ್ಲೆ ಲಿಂಗಸುಗೂರು ತಾಲೂಕಿನ ಸಂತೆಕೆಲ್ಲೂರು ಗ್ರಾಮದ ನಿವಾಸಿಯಾದ 58 ವರ್ಷದ ದ್ಯಾಮಣ್ಣ ಕಟ್ಟಿಮನಿಯವರ ಹೊಟ್ಟೆಯಿಂದ ವೈದ್ಯರು 5 ರೂಪಾಯಿಯ 56 ನಾಣ್ಯ, 2 ರೂಪಾಯಿಯ 51 ನಾಣ್ಯ ಹಾಗೂ 1 ರೂಪಾಯಿಯ 80 ನಾಣ್ಯಗಳು ಸೇರಿ ಒಟ್ಟು 187 ನಾಣ್ಯಗಳನ್ನು ಹೊರ ತೆಗೆದಿದ್ದಾರೆ.
ಸುಮಾರು ಒಂದು ಗಂಟೆ ಕಾಲ ಶಸ್ತ್ರಚಿಕಿತ್ಸೆ ನಡೆಸಿದ ವೈದ್ಯರಾದ ಡಾ.ಈಶ್ವರ ಕಲಬುರಗಿ, ಡಾ.ಪ್ರಕಾಶ ಕಟ್ಟಿಮನಿ, ಅರವಳಿಕೆ ತಜ್ಞರಾದ ಡಾ.ಅರ್ಚನಾ, ಡಾ.ರೂಪಾ ಹುಲಕುಂದೆ ಅವರು ಯಶಸ್ವಿ ಶಸ್ತ್ರಚಿಕಿತ್ಸೆ ಮೂಲಕ ಬಡ ವೃದ್ಧನ ಪಾಲಿಗೆ ದೇವರಾಗಿದ್ದು, ದ್ಯಾಮಪ್ಪ ಆರೋಗ್ಯ ಸ್ಥಿರವಾಗಿದೆ, ಆದಷ್ಟು ಬೇಗ ಆತ ಚೇತರಿಸಿಕೊಳ್ಳಿಲಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ.