Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಮೀಸಲಾತಿ ಹೆಚ್ಚಳದ ರಾಜ್ಯ ಬಿಜೆಪಿ ನಾಯಕರ...

ಮೀಸಲಾತಿ ಹೆಚ್ಚಳದ ರಾಜ್ಯ ಬಿಜೆಪಿ ನಾಯಕರ ಪ್ರಚಾರದ ಬಲೂನ್ ಗೆ ಕೇಂದ್ರ ಸರ್ಕಾರವೇ ಸೂಜಿ ಚುಚ್ಚಿದೆ: ಸಿದ್ದರಾಮಯ್ಯ

10 Dec 2022 5:12 PM IST
share
ಮೀಸಲಾತಿ ಹೆಚ್ಚಳದ ರಾಜ್ಯ ಬಿಜೆಪಿ ನಾಯಕರ ಪ್ರಚಾರದ ಬಲೂನ್ ಗೆ ಕೇಂದ್ರ ಸರ್ಕಾರವೇ ಸೂಜಿ ಚುಚ್ಚಿದೆ: ಸಿದ್ದರಾಮಯ್ಯ

ಬೆಂಗಳೂರು, ಡಿ.10: 'ಮೀಸಲಾತಿ ಪ್ರಮಾಣವನ್ನು 50%ಕ್ಕಿಂತ ಹೆಚ್ಚಿಸುವ ಪ್ರಸ್ತಾಪ ಇಲ್ಲವೆಂದು ಲೋಕಸಭೆಯಲ್ಲಿ ಕೇಂದ್ರ ಸಚಿವರೇ ಹೇಳುವ ಮೂಲಕ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಮೀಸಲಾತಿ ಹೆಚ್ಚಳದ ರಾಜ್ಯ ಬಿಜೆಪಿ ನಾಯಕರ ಪ್ರಚಾರದ ಬಲೂನ್ ಗೆ ಕೇಂದ್ರ ಸರ್ಕಾರವೇ ಸೂಜಿ ಚುಚ್ಚಿದೆ' ಎಂದು ವಿಧಾನಸಭೆ ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ. 

ಈ ಸಂಬಂಧ ಸರಣಿ ಟ್ವೀಟ್ ಮಾಡಿರುವ ಅವರು,  ''ಪರಿಶಿಷ್ಟಜಾತಿ ಮತ್ತು ಪರಿಶಿಷ್ಟ ಪಂಗಡದ ಮೀಸಲಾತಿ ಹೆಚ್ಚಳದ ನಿರ್ಧಾರ ಹಿಂದೆ ಇದ್ದದ್ದು ಆ ಸಮುದಾಯದ ಬಗೆಗಿನ ಕಾಳಜಿ ಅಲ್ಲ, ಅದು ರಾಜಕೀಯ ಲಾಭದ ದುರುದ್ದೇಶ ಮಾತ್ರ ಎನ್ನುವುದನ್ನು ನಾವು ಹೇಳುತ್ತಲೇ ಬಂದಿದ್ದೇವೆ. ಈಗ ಕೇಂದ್ರ ಸರ್ಕಾರವೇ ರಾಜ್ಯ ಬಿಜೆಪಿಯ ಬಣ್ಣ ಬಯಲು ಮಾಡಿದೆ'' ಎಂದು ಲೇವಡಿ ಮಾಡಿದ್ದಾರೆ.  

''ಶೇಕಡಾ 50ರ ಒಟ್ಟು ಮೀಸಲಾತಿ ಪ್ರಮಾಣದ ಮಿತಿಯನ್ನು ಕಿತ್ತುಹಾಕದೆ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಮೀಸಲಾತಿ ಪ್ರಮಾಣವನ್ನು ಹೇಗೆ ಹೆಚ್ಚಿಸಲು ಸಾಧ್ಯ? ಕೆಲವರನ್ನು ಕೆಲವು ಕಾಲ ಮರುಳು ಮಾಡಬಹುದು, ಎಲ್ಲರನ್ನೂ ಎಲ್ಲ ಕಾಲದಲ್ಲಿಯೂ ಮರುಳು ಮಾಡಲು ಸಾಧ್ಯವಿಲ್ಲ'' ಎಂದು ಕಿಡಿಕಾರಿದ್ದಾರೆ. 

''ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಮೀಸಲಾತಿಯನ್ನು ಹೆಚ್ಚಿಸುವ ಮತ್ತು ಕಡಿಮೆ ಮಾಡುವ ಅಧಿಕಾರ ಕೇಂದ್ರ ಸರ್ಕಾರಕ್ಕೆ ಮಾತ್ರ ಇರುವುದರಿಂದ ರಾಜ್ಯದ ಸರ್ಕಾರ ಮೊದಲು ಇದನ್ನು ಕೇಂದ್ರ ಸಚಿವರಿಗೆ ಮನವರಿಕೆ ಮಾಡಿಕೊಟ್ಟು ಒಪ್ಪಿಸಬೇಕಿತ್ತು. ಈ ಕರ್ತವ್ಯದಲ್ಲಿ ರಾಜ್ಯ ಸರ್ಕಾರ ಸೋತಿದೆ'' ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. 

''ಪರಿಶಿಷ್ಟ ಜಾತಿ ಮತ್ತು ಪಂಗಡದ ಬಗ್ಗೆ ರಾಜ್ಯ ಸರ್ಕಾರಕ್ಕೆ ಪ್ರಾಮಾಣಿಕವಾದ ಕಾಳಜಿ ಇದ್ದಿದ್ದರೆ ತಕ್ಷಣ ಪ್ರಧಾನಮಂತ್ರಿಗಳನ್ನು ಭೇಟಿ ಮಾಡಿ ಮೀಸಲಾತಿ ಹೆಚ್ಚಳಕ್ಕೆ ಕೈಗೊಳ್ಳಬೇಕಾಗಿರುವ ಉಪಕ್ರಮಗಳ ಪ್ರಕ್ರಿಯೆಯನ್ನು ಕೇಂದ್ರ ಸರ್ಕಾರ ಶುರುಮಾಡುವಂತೆ ಮನವರಿಕೆ ಮಾಡಿಕೊಡಬೇಕು. ಮತ್ತೆ ಯಾವ ಕರ್ಮಕ್ಕೆ ಡಬಲ್ ಎಂಜಿನ್ ಸರ್ಕಾರ?'' ಎಂದು ಪ್ರಶ್ನೆ ಮಾಡಿದ್ದಾರೆ. 

''ಪ್ರಧಾನ ಮಂತ್ರಿಯವರ ಜೊತೆ ಮಾತನಾಡುವ ಧೈರ್ಯ ಇಲ್ಲದೇ ಇದ್ದರೆ ಸರ್ವಪಕ್ಷಗಳ ನಿಯೋಗವನ್ನು ಕರೆದೊಯ್ಯಲಿ, ಮೀಸಲಾತಿ ಹೆಚ್ಚಳದ ಅವಶ್ಯಕತೆ ಬಗ್ಗೆ ನಾವು ಪ್ರಧಾನಿಯವರಿಗೆ ಮನವರಿಕೆ ಮಾಡಿಕೊಡುತ್ತೇವೆ. ಇದನ್ನು ಬಿಟ್ಟು ಕೇವಲ ಸುಳ್ಳು ಭರವಸೆಗಳನ್ನು ನೀಡುತ್ತಾ  ಬಣ್ಣ ಬಯಲು ಮಾಡಿಕೊಳ್ಳಬೇಡಿ'' ಎಂದು ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ. 

ಪ್ರಧಾನಿ @narendramodi ಯವರ ಜೊತೆ ಮಾತನಾಡುವ ಧೈರ್ಯ ಇಲ್ಲದೆ ಇದ್ದರೆ ಸರ್ವಪಕ್ಷಗಳ ನಿಯೋಗವನ್ನು ಕರೆದೊಯ್ಯಲಿ, ಮೀಸಲಾತಿ ಹೆಚ್ಚಳದ ಅವಶ್ಯಕತೆ ಬಗ್ಗೆ ನಾವು ಪ್ರಧಾನಿಯವರಿಗೆ ಮನವರಿಕೆ ಮಾಡಿಕೊಡುತ್ತೇವೆ. ಇದನ್ನು ಬಿಟ್ಟು ಕೇವಲ ಸುಳ್ಳು ಭರವಸೆಗಳನ್ನು ನೀಡುತ್ತಾ ಬಣ್ಣ ಬಯಲು ಮಾಡಿಕೊಳ್ಳಬೇಡಿ @BJP4Karnataka.
6/6#SocialJustice

— Siddaramaiah (@siddaramaiah) December 10, 2022

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಮೀಸಲಾತಿ ಹೆಚ್ಚಳದ ನಿರ್ಧಾರ ಹಿಂದೆ ಇದ್ದದ್ದು ಆ ಸಮುದಾಯದ ಬಗೆಗಿನ ಕಾಳಜಿ ಅಲ್ಲ, ಅದು ರಾಜಕೀಯ ಲಾಭದ ದುರುದ್ದೇಶ ಮಾತ್ರ ಎನ್ನುವುದನ್ನು ನಾವು ಹೇಳುತ್ತಲೇ ಬಂದಿದ್ದೇವೆ. ಈಗ ಕೇಂದ್ರ @BJP4India ಸರ್ಕಾರವೇ ರಾಜ್ಯ @BJP4Karnataka ಅವರ ಬಣ್ಣ ಬಯಲು ಮಾಡಿದೆ.
2/6#SocialJustice pic.twitter.com/Z7yDPyMFVi

— Siddaramaiah (@siddaramaiah) December 10, 2022
share
Next Story
X