Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಜನವರಿ ಅಂತ್ಯಕ್ಕೆ ಎಲ್ಲಾ 438 'ನಮ್ಮ...

ಜನವರಿ ಅಂತ್ಯಕ್ಕೆ ಎಲ್ಲಾ 438 'ನಮ್ಮ ಕ್ಲಿನಿಕ್‌'ಗಳು ಕಾರ್ಯಾರಂಭ: ಸಚಿವ ಡಾ.ಕೆ.ಸುಧಾಕರ್‌

ಹೊಸ ವರ್ಷಕ್ಕೆ ಮಹಿಳೆಯರಿಗೆ ಆಯುಷ್ಮತಿ ಕ್ಲಿನಿಕ್ ಆರಂಭ

14 Dec 2022 4:15 PM IST
share
ಜನವರಿ ಅಂತ್ಯಕ್ಕೆ ಎಲ್ಲಾ 438 ನಮ್ಮ ಕ್ಲಿನಿಕ್‌ಗಳು ಕಾರ್ಯಾರಂಭ: ಸಚಿವ ಡಾ.ಕೆ.ಸುಧಾಕರ್‌
ಹೊಸ ವರ್ಷಕ್ಕೆ ಮಹಿಳೆಯರಿಗೆ ಆಯುಷ್ಮತಿ ಕ್ಲಿನಿಕ್ ಆರಂಭ

ಹುಬ್ಬಳ್ಳಿ, ಡಿಸೆಂಬರ್‌ 14: ಹೊಸ ವರ್ಷದ ಜನವರಿ ಅಂತ್ಯಕ್ಕೆ ಎಲ್ಲಾ 438 ʼನಮ್ಮ ಕ್ಲಿನಿಕ್‌ʼಗಳು ಕಾರ್ಯಾರಂಭವಾಗಲಿವೆ. ಹಾಗೆಯೇ ಮಹಿಳೆಯರಿಗೆ ಮೀಸಲಾದ ʼಆಯುಷ್ಮತಿʼ ಕ್ಲಿನಿಕ್‌ಗಳನ್ನೂ ಜನವರಿಯಲ್ಲೇ ಉದ್ಘಾಟಿಸಲಾಗುವುದು ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್‌ ತಿಳಿಸಿದರು.

ಹುಬ್ಬಳ್ಳಿಯಲ್ಲಿ ಮೊದಲ ʼನಮ್ಮ ಕ್ಲಿನಿಕ್‌ʼಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಚಾಲನೆ ನೀಡಿದರು.

ಬಳಿಕ ಮಾತನಾಡಿದ ಸಚಿವರು, ನಮ್ಮ ಕ್ಲಿನಿಕ್‌ನಲ್ಲಿ ಲ್ಯಾಬ್‌ ಪರೀಕ್ಷೆ, ತಪಾಸಣೆ, ಔಷಧಿ ಸಂಪೂರ್ಣ ಉಚಿತವಾಗಿದ್ದು, ಇದು ಆರೋಗ್ಯ ವ್ಯವಸ್ಥೆಯಲ್ಲಿ ದೊಡ್ಡ ಬದಲಾವಣೆ ತರುವ ಹೆಜ್ಜೆಯಾಗಿದೆ. ಸದ್ಯ 114 ಕ್ಲಿನಿಕ್‌ಗಳನ್ನು ಉದ್ಘಾಟಿಸಲಾಗುತ್ತಿದೆ. ಇನ್ನು ಮುಂದೆ ಪ್ರತಿ ವಾರಕ್ಕೆ 100 ರಂತೆ ಕ್ಲಿನಿಕ್‌ಗಳನ್ನು ಉದ್ಘಾಟನೆ ಮಾಡಿ, ಜನವರಿ ಅಂತ್ಯಕ್ಕೆ ಎಲ್ಲಾ 438 ಕ್ಲಿನಿಕ್‌ಗಳನ್ನು ಆರಂಭಿಸಲಾಗುವುದು. ಹಾಗೆಯೇ, ಆಯುಷ್ಮತಿ ಕ್ಲಿನಿಕ್‌ ಕೂಡ ಆರಂಭವಾಗಲಿದೆ. ಇದು ಮಹಿಳೆಯರಿಗೆ ನಮ್ಮ ಸರ್ಕಾರ ನೀಡುತ್ತಿರುವ ಹೊಸ ವರ್ಷದ ಕೊಡುಗೆ ಎಂದು ತಿಳಿಸಿದರು.

► ಮನೆ ಬಾಗಿಲಿಗೆ ಔಷಧಿ

ರಾಜ್ಯದಲ್ಲಿ 7 ಸಾವಿರಕ್ಕೂ ಅಧಿಕ ಆರೋಗ್ಯ ಮತ್ತು ಕ್ಷೇಮ ಕೇಂದ್ರಗಳನ್ನು ಈಗಾಗಲೇ ಆರಂಭಿಸಿದ್ದು, ಇಲ್ಲಿ 30 ವರ್ಷ ವಯಸ್ಸು ಮೇಲ್ಪಟ್ಟ ಎಲ್ಲರೂ ವರ್ಷಕ್ಕೆ ಒಮ್ಮೆ ಸಂಪೂರ್ಣ ಆರೋಗ್ಯ ತಪಾಸಣೆ ಮಾಡಿಸಿಕೊಳ್ಳಬೇಕು. ಭಾರತ ಈಗ ಮಧುಮೇಹದ ಕೇಂದ್ರವಾಗಿದ್ದು, ಇಂತಹ ಅಸಾಂಕ್ರಾಮಿಕ ರೋಗಗಳ ಪತ್ತೆ ಅಗತ್ಯವಿದೆ. ಇದಕ್ಕಾಗಿ ಕಳೆದ ಒಂದು ವರ್ಷದಲ್ಲಿ ಈ ಕೇಂದ್ರಗಳಲ್ಲಿ ಶೇ.60 ರಷ್ಟು ಜನರನ್ನು ತಪಾಸಣೆ ಮಾಡಿದ್ದು, ವಿವಿಧ ರೋಗಗಳಿಗೆ ಉಚಿತ ಔಷಧಿ ನೀಡಲಾಗುತ್ತಿದೆ. ಜನವರಿ ತಿಂಗಳಿಂದ ಮಧುಮೇಹ, ಬಿಪಿ, ಕ್ಷಯ ಮೊದಲಾದ ರೋಗಗಳಿಗೆ ಔಷಧಿಯನ್ನು ಅವರ ಮನೆ ಬಾಗಿಲಿಗೆ ತಲುಪಿಸುವ ಕಾರ್ಯಕ್ರಮ ಮಾಡಲಾಗುವುದು ಎಂದು ಮಾಹಿತಿ ನೀಡಿದರು.

ಇತಿಹಾಸದಲ್ಲಿ ಯಾವ ಸರ್ಕಾರವೂ ಒಂದೇ ಬಾರಿಗೆ 114 ಕ್ಲಿನಿಕ್‌ಗಳನ್ನು ಉದ್ಘಾಟನೆ ಮಾಡಿಲ್ಲ. ಇಂದು ನಮ್ಮ ಸರ್ಕಾರದ ಮೂಲಕ ಸಾರ್ವಕಾಲಿಕ ದಾಖಲೆಯಾಗಿದೆ. ಸಾಮಾನ್ಯ ಜನರ ಮುಖ್ಯಮಂತ್ರಿಯಾಗಿರುವ, ʼಕಾಮನ್‌ ಮ್ಯಾನ್‌ʼ ಬಸವರಾಜ ಬೊಮ್ಮಾಯಿ ಅವರಿಂದ ʼನಮ್ಮ ಕ್ಲಿನಿಕ್‌ʼಗಳು ಉದ್ಘಾಟನೆಯಾಗಿವೆ ಎಂದರು.

ನಗರಗಳೆಂದರೆ ಶ್ರೀಮಂತರೇ ಇರುವ ಪ್ರದೇಶ ಎಂಬ ತಪ್ಪು ಕಲ್ಪನೆ ಇದೆ. ನಗರಗಳಲ್ಲಿರುವ ಬಡವರು, ಕೂಲಿ ಕಾರ್ಮಿಕರು, ವಲಸೆ ಬಂದವರು, ಕೊಳೆಗೇರಿ ನಿವಾಸಿಗಳ ಆರೋಗ್ಯ ರಕ್ಷಣೆಗಾಗಿ ನಮ್ಮ ಕ್ಲಿನಿಕ್‌ ಆರಂಭಿಸಲಾಗಿದೆ. ಇಂದು ಮೊದಲ ನಮ್ಮ ಕ್ಲಿನಿಕ್‌ನ್ನು ವಾಣಿಜ್ಯ ನಗರಿ ಹುಬ್ಬಳ್ಳಿಯಲ್ಲಿ ಉದ್ಘಾಟಿಸುತ್ತಿರುವುದು ವಿಶೇಷವಾಗಿದೆ. ಒಟ್ಟು 114 ಕ್ಲಿನಿಕ್‌ಗಳನ್ನು ವಿವಿಧ ಜಿಲ್ಲೆಗಳಲ್ಲಿ ಏಕ ಕಾಲಕ್ಕೆ ಉದ್ಘಾಟಿಸಲಾಗುತ್ತಿದೆ ಎಂದು ತಿಳಿಸಿದರು.

ಒಂದು ಕ್ಲಿನಿಕ್‌ನಲ್ಲಿ ಒಬ್ಬ ವೈದ್ಯ, ಲ್ಯಾಬ್‌ ತಂತ್ರಜ್ಞ, ನರ್ಸ್‌, ಡಿ ಗ್ರೂಪ್‌ ನೌಕರ ಇರುತ್ತಾರೆ. ಜ್ವರ, ಕೆಮ್ಮು, ನೆಗಡಿ ಮೊದಲಾದ ಸಣ್ಣ ಸಮಸ್ಯೆಗಳಿಗೆ ಹಿಂದೆ ಜಿಲ್ಲಾಸ್ಪತ್ರೆಗೆ ಹೋಗಬೇಕಿತ್ತು. ಆದರೆ ಈಗ ನಮ್ಮ ಕ್ಲಿನಿಕ್‌ಗೆ ಹೋಗಿ ಉಚಿತವಾಗಿ ಸೇವೆ ಪಡೆಯಬಹುದು. ಬೇರೆ ಆಸ್ಪತ್ರೆಗಳಲ್ಲಿ 10 ರೂ. ಶುಲ್ಕ ಪಡೆಯಲಾಗುತ್ತಿತ್ತು. ಆದರೆ ನಮ್ಮ ಕ್ಲಿನಿಕ್‌ನಲ್ಲಿ ಬಿಡಿಗಾಸನ್ನೂ ನೀಡಬೇಕಿಲ್ಲ ಎಂದು ವಿವರಿಸಿದರು.

ಆಯುಷ್ಮಾನ್‌ ಕಾರ್ಡ್‌, ಪ್ರಧಾನಿಗಳಿಂದ ವಿತರಣೆ: ಆರೋಗ್ಯ ಕ್ಷೇತ್ರದಲ್ಲಿ ಉತ್ತಮ ಅಭಿವೃದ್ಧಿ ಇಲ್ಲದಿದ್ದರೆ ಸಂಪದ್ಭರಿತ ನಾಡನ್ನು ಸೃಷ್ಟಿಸಲು ಸಾಧ್ಯವಿಲ್ಲ. ಒಂದು ದೇಶ-ಒಂದು ಪಡಿತರ ಚೀಟಿ, ಒಂದು ದೇಶ-ಒಂದು ತೆರಿಗೆ ಎಂಬಂತೆ, ಒಂದು ದೇಶ-ಒಂದು ಹೆಲ್ತ್‌ ಕಾರ್ಡ್‌ ಎಂಬ ಘೋಷಣೆಯ ಆಯುಷ್ಮಾನ್‌ ಕಾರ್ಡ್‌ಗಳನ್ನು ನೀಡಲಾಗುತ್ತಿದೆ. 1.20 ಕೋಟಿ ಕಾರ್ಡ್‌ಗಳ ನೋಂದಣಿ ಪೂರ್ಣಗೊಂಡಿದ್ದು, ಈ ಕಾರ್ಯಕ್ರಮಕ್ಕೂ ಚಾಲನೆ ನೀಡಬೇಕಿತ್ತು. ಆದರೆ ಕೇಂದ್ರದ ಆರೋಗ್ಯ ಸಚಿವರು ಕರೆ ಮಾಡಿ ಶ್ಲಾಘಿಸಿ, ಪ್ರಧಾನಿ ನರೇಂದ್ರ ಮೋದಿಯವರಿಂದಲೇ ಈ ಕಾರ್ಡ್‌ ವಿತರಣೆ ಮಾಡಿಸಲಾಗುವುದು ಎಂದು ತಿಳಿಸಿದ್ದಾರೆ. ಆದ್ದರಿಂದ ಪ್ರಧಾನಿಗಳ ಕೈಯಿಂದಲೇ ಕಾರ್ಡ್‌ಗಳನ್ನು ಜನರಿಗೆ ಕೊಡಿಸಲಾಗುವುದು ಎಂದು ತಿಳಿಸಿದರು.

42 ಲಕ್ಷ ಜನರಿಗೆ ಉಚಿತ ಚಿಕಿತ್ಸೆ

ಕೆಲವರು ಸರ್ಕಾರಿ ಆಸ್ಪತ್ರೆಗಳ ಬಗ್ಗೆ ಟೀಕೆ ಮಾಡುತ್ತಾರೆ. ಆದರೆ ನಾಲ್ಕು ವರ್ಷಗಳಲ್ಲಿ 42 ಲಕ್ಷ ಜನರಿಗೆ ಆಯುಷ್ಮಾನ್‌ ಭಾರತ್‌-ಆರೋಗ್ಯ ಕರ್ನಾಟಕ ಯೋಜನೆಯಡಿ ಉಚಿತ ಸೇವೆ ನೀಡಿದ್ದು, ಅದಕ್ಕಾಗಿ 5 ಸಾವಿರ ಕೋಟಿ ರೂ. ಖರ್ಚು ಮಾಡಲಾಗಿದೆ. ಈ ಪೈಕಿ ಶೇ.70 ರಷ್ಟು ರೋಗಿಗಳು ಸರ್ಕಾರಿ ಆಸ್ಪತ್ರೆಯಲ್ಲೇ ಚಿಕಿತ್ಸೆ ಪಡೆದಿದ್ದಾರೆ. ಸರ್ಕಾರಿ ಆರೋಗ್ಯ ವ್ಯವಸ್ಥೆ ಸರಿ ಇಲ್ಲ ಎಂದು ದೂರುವುದು ಸುಲಭ. ಆದರೆ ಉಚಿತ ಸೇವೆಯ ಪರಂಪರೆಯನ್ನು ನೋಡಬೇಕು. ನಮ್ಮ ಅವಧಿಯಲ್ಲಿ ಆಸ್ಪತ್ರೆಗಳ ಮೂಲಸೌಕರ್ಯದಲ್ಲಿ 5-6 ಪಟ್ಟು ಪ್ರಗತಿ, ಉಚಿತ ಔಷಧಿ ವಿತರಣೆ, ಡಯಾಲಿಸಿಸ್‌ ಸಂಖ್ಯೆಯನ್ನು 30 ಸಾವಿರದಿಂದ 60 ಸಾವಿರಕ್ಕೆ ಹೆಚ್ಚಳ ಸೇರಿದಂತೆ ಅನೇಕ ಸುಧಾರಣೆ ಮಾಡಲಾಗಿದೆ ಎಂದರು.

► ಇತರೆ ಅಂಶಗಳು

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಹುಬ್ಬಳ್ಳಿಗೆ ಜಯದೇವ ಹೃದ್ರೋಗ ಸಂಸ್ಥೆಯ ಪ್ರಾದೇಶಿಕ ಕೇಂದ್ರ ಮಂಜೂರು ಮಾಡಿದ್ದು, ಜನವರಿಯಲ್ಲಿ ಶಂಕುಸ್ಥಾಪನೆ ನೆರವೇರಲಿದೆ. 

ಹಿಂದೆ ಅನುದಾನ ಕೆಲವೇ ಭಾಗಗಳಿಗೆ ಹೋಗುತ್ತಿತ್ತು. ಮುಖ್ಯಮಂತ್ರಿಗಳು ಪ್ರತಿ ತಾಲೂಕು ಮಟ್ಟದಲ್ಲಿ ಹಿಂದುಳಿದ ಆರೋಗ್ಯ ವ್ಯವಸ್ಥೆಯನ್ನು ಬಲಪಡಿಸುತ್ತಿದ್ದಾರೆ.

14 ಬಗೆಯ ತಪಾಸಣೆಗಳು ನಮ್ಮ ಕ್ಲಿನಿಕ್‌ನಲ್ಲಿ ಲಭ್ಯ. ಔಷಧಿ, ಪರೀಕ್ಷೆ ಎಲ್ಲವೂ ಉಚಿತ.

share
Next Story
X