ಬೆಳಗಾವಿ: ಎಎಸ್ಸೈ ಆತ್ಮಹತ್ಯೆ
ಬೆಳಗಾವಿ, ಡಿ.30: ಜಿಲ್ಲೆಯ ಅಥಣಿ ಪೊಲೀಸ್ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಎಎಸ್ಐ ರಾಮಲಿಂಗ ನಾಯಕ್ (49) ಅವರು ಆತ್ಮಹತ್ಯೆಗೆ ಮಾಡಿಕೊಂಡಿದ್ದಾರೆ.
ರಾಯಭಾಗ ತಾಲೂಕಿನ ಅಳಗವಾಡಿ ಗ್ರಾಮದ ಬೀರೇಶ್ವರ ದೇವಸ್ಥಾನದ ಪಕ್ಕ ಶೆಡ್ವೊಂದರಲ್ಲಿ ಕಂಬದಲ್ಲಿ ಶವವಾಗಿ ಎಎಸ್ಐ ಪತ್ತೆಯಾಗಿದ್ದಾರೆ ಎನ್ನಲಾಗಿದೆ.
ಕೆಲವು ದಿನಗಳಿಂದ ಪೊಲೀಸ್ ಅಧಿಕಾರಿ ಅನಾರೋಗ್ಯದಿಂದ ಬಳಲುತ್ತಿದ್ದರು ಎಂದು ತಿಳಿದು ಬಂದಿದೆ.
ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಈ ಸಂಬಂಧ ಹಾರೂಗೇರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Next Story