Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಮೈಸೂರು-ಬೆಂಗಳೂರು ದಶಪಥ ರಸ್ತೆಯಲ್ಲಿ...

ಮೈಸೂರು-ಬೆಂಗಳೂರು ದಶಪಥ ರಸ್ತೆಯಲ್ಲಿ ದ್ವಿಚಕ್ರ, ತ್ರಿಚಕ್ರ ವಾಹನಗಳಿಗಿಲ್ಲ ಅವಕಾಶ: ಕಾರಣ ಏನು ಗೊತ್ತೇ?

6 Jan 2023 2:48 PM IST
share
ಮೈಸೂರು-ಬೆಂಗಳೂರು ದಶಪಥ ರಸ್ತೆಯಲ್ಲಿ ದ್ವಿಚಕ್ರ, ತ್ರಿಚಕ್ರ ವಾಹನಗಳಿಗಿಲ್ಲ ಅವಕಾಶ: ಕಾರಣ ಏನು ಗೊತ್ತೇ?

ಮೈಸೂರು, ಜ.6: ಮೈಸೂರು-ಬೆಂಗಳೂರು ದಶಪಥ ರಸ್ತೆಯಲ್ಲಿ  ಸಂಚರಿಸಲು ದ್ವಿಚಕ್ರ ಹಾಗೂ ತ್ರಿಚಕ್ರ  ವಾಹನಗಳಿಗೆ ಅವಕಾಶ ಇಲ್ಲ ಎಂದು ಮೈಸೂರು- ಕೊಡಗು ಸಂಸದ ಪ್ರತಾಪ್ ಸಿಂಹ ತಿಳಿಸಿದ್ದಾರೆ. 

ನಗರದ ಜಲದರ್ಶಿನಿ ಅತಿಥಿಗೃಹದಲ್ಲಿ ಶುಕ್ರವಾರ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಅವರು, ನಿನ್ನೆ ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರು ಮೈಸೂರು-ಬೆಂಗಳೂರು ದಶಪಥ ಕಾಮಗಾರಿಯನ್ನು ವೀಕ್ಷಿಸಿ ಉತ್ತಮವಾಗಿದೆ ಎಂದು ಹೇಳಿದ್ದಾರೆ. ಫೆಬ್ರವರಿ ಅಥವಾ ಮಾಚ್೯ ಗೆ ಈ ರಸ್ತೆಯನ್ನು ಪ್ರಧಾನಿ ನರೇಂದ್ರ ಮೋದಿ ಅವರ ಕೈಯಲ್ಲಿ ಉದ್ಘಾಟನೆಗೊಳಿಸಲಾಗುವುದು ಎಂದು ಹೇಳಿದರು.

ಸರ್ವಿಸ್ ರಸ್ತೆ ನಿರ್ಮಾಣವಾದ ಬಳಿಕ ಈ ರಸ್ತೆಯಲ್ಲಿ ದ್ವಿಚಕ್ರ ಮತ್ತು ಮೂರು ಚಕ್ರದ ವಾಹನಗಳ ಸಂಚಾರಕ್ಕೆ ಅವಕಾಶ ಇಲ್ಲ. ಯಾಕೆಂದರೆ ಇದು ಎಕ್ಸ್ ಪ್ರೆಸ್ ಹೈವೇ ಆಗಿರುವುದರಿಂದ ಬಹಳಷ್ಟು ಮಂದಿ ಮೈಸೂರು-ಬೆಂಗಳೂರು ನಡುವೆ ವೇಗವಾಗಿ ಸಂಚರಿಸುತ್ತಿರುತ್ತಾರೆ. ಈ ಮಧ್ಯೆ ದ್ವಚಕ್ರವಾಹನಗಳಿಗೆ ಅವಕಾಶ ನೀಡಿದರೆ ಅವರ ವೇಗದ ಮಿತಿ ಕಡಿಮೆಯಾಗಬಹುದು ಎಂದು ತಿಳಿಸಿದರು.

ಎಕ್ಸ್ ಪ್ರೆಸ್ ಹೈವೆಯಲ್ಲಿ ಸಂಚರಿಸುವ ವಾಹನಗಳಿಗೆ ಟೋಲ್ ಸಂಗ್ರಹ ಮಾಡಲಾಗುತ್ತದೆ.  1.30 ಗಂಟೆಯಲ್ಲಿ ಬೆಂಗಳೂರಿನಿಂದ ಮೈಸೂರು ತಲುಪಬಹುದು. ಹಾಗಂತ ಈ ರಸ್ತೆ ಬರಿ ಶ್ರೀಮಂತರಿಗಾಗಿ ಎಂದು ಭಾವಿಸಬಾರದು ಎಂದರು.

ಇದನ್ನೂ ಓದಿ: ಫೆಬ್ರವರಿ ಅಂತ್ಯದಲ್ಲಿ ಬೆಂಗಳೂರು-ಮೈಸೂರು ಹೆದ್ದಾರಿ ಲೋಕಾರ್ಪಣೆ: ನಿತಿನ್ ಗಡ್ಕರಿ

ದ್ವಿಚಕ್ರವಾಹನಗಳು ಮತ್ತು ಇತರೆ ವಾಹನಗಳು ಸಂಚರಿಸಲು ಸರ್ವೀಸ್ ರಸ್ತೆಗಳಿರುತ್ತದೆ. ಆ ಮೂಲಕ ಸಂಚತಿಸಬಹುದು ಎಂದು ಹೇಳಿದರು.

ಎಕ್ಸ್ ಪ್ರೆಸ್ ಹೈವೆ ಹೆಸರಿಡುವ ಕುರಿತು ಹಲವಾರು ಅಭಿಪ್ರಾಯಗಳು ವ್ಯಕ್ತವಾಗುತ್ತಿವೆ. ಕೆಲವರು ನಾಲ್ವಡಿ ಕೃಷ್ಣರಾಜ ಒಡೆಯರ್, ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರ ಹೆಸರಿಡುವಂತೆ ಪ್ರಸ್ತಾಪಿಸಿದ್ದಾರೆ. ಆದರೆ ಯಾವುದೇ ಎಕ್ಸ್ ಪ್ರೆಸ್ ಹೈವೆಗೆ ವ್ಯಕ್ತಿಗಳ ಹೆಸರಿಟ್ಟ ಉದಾಹರಣೆ ಇಲ್ಲ. ಹಾಗಾಗಿ ಕಾವೇರಿ ಎಕ್ಸ್ ಪ್ರೆಸ್ ವೇ ಎಂದು ನಾಮಕರಣ ಮಾಡಬೇಕು ಎಂದು ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರಲ್ಲಿ ಮನವಿ ಮಾಡಿದ್ದೇನೆ ಎಂದು ಹೇಳಿದರು.

share
Next Story
X