Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಚಿಕ್ಕಮಗಳೂರು | ಪ್ರೀತಿಸಿ ವಂಚನೆ ಆರೋಪ:...

ಚಿಕ್ಕಮಗಳೂರು | ಪ್ರೀತಿಸಿ ವಂಚನೆ ಆರೋಪ: ಡೆತ್‍ನೋಟ್ ಬರೆದಿಟ್ಟು ವಿದ್ಯಾರ್ಥಿನಿ ಆತ್ಮಹತ್ಯೆ

► ಬಿಜೆಪಿ ಕಾರ್ಯಕರ್ತನ ವಿರುದ್ಧ ಪೊಕ್ಸೊ ಪ್ರಕರಣ ದಾಖಲು ► ಪ್ರಕರಣ ದಾಖಲಿಸಲು ಪೊಲೀಸರು ಸತಾಯಿಸಿದ್ದರು: ಪೋಷಕರ ಆರೋಪ

15 Jan 2023 11:02 AM IST
share
ಚಿಕ್ಕಮಗಳೂರು | ಪ್ರೀತಿಸಿ ವಂಚನೆ ಆರೋಪ: ಡೆತ್‍ನೋಟ್ ಬರೆದಿಟ್ಟು ವಿದ್ಯಾರ್ಥಿನಿ ಆತ್ಮಹತ್ಯೆ
► ಬಿಜೆಪಿ ಕಾರ್ಯಕರ್ತನ ವಿರುದ್ಧ ಪೊಕ್ಸೊ ಪ್ರಕರಣ ದಾಖಲು ► ಪ್ರಕರಣ ದಾಖಲಿಸಲು ಪೊಲೀಸರು ಸತಾಯಿಸಿದ್ದರು: ಪೋಷಕರ ಆರೋಪ

ಚಿಕ್ಕಮಗಳೂರು, ಜ.15: ಬಿಜೆಪಿ ಕಾರ್ಯಕರ್ತನೊಬ್ಬ ಕಾಲೇಜು ವಿದ್ಯಾರ್ಥಿನಿಯನ್ನು ಪ್ರೀತಿಸುವುದಾಗಿ ಹೇಳಿ ವಂಚನೆ ಮಾಡಿದ್ದರಿಂದ ನೊಂದ ವಿದ್ಯಾರ್ಥಿನಿ ಡೆತ್‍ನೋಟ್ ಬರೆದಿಟ್ಟು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಜಿಲ್ಲೆಯ ಕಳಸ ತಾಲೂಕಿನ ಜೋಗಿಕುಂಬ್ರಿ ಗ್ರಾಮದಲ್ಲಿ ವರದಿಯಾಗಿದೆ.

ಕಳಸ ಪಟ್ಟಣದ ಪದವಿ ಪೂರ್ವ ಕಾಲೇಜಿನಲ್ಲಿ ಪ್ರಥಮ ಪಿಯುಸಿ ವ್ಯಾಸಂಗ ಮಾಡುತ್ತಿದ್ದ ಕಳಸ ತಾಲೂಕಿನ ಸಂಸೆ ಗ್ರಾಪಂ ವ್ಯಾಪ್ತಿಯ ಜೋಗಿಕುಂಬ್ರಿ ಗ್ರಾಮದ ನಿವಾಸಿ ದೀಪ್ತಿ(17) ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ವಿದ್ಯಾರ್ಥಿನಿಯಾಗಿದ್ದಾಳೆ.

ಬಿಜೆಪಿ ಹಾಗೂ ಬಜರಂಗದಳದಲ್ಲಿ ಸಕ್ರೀಯ ಕಾರ್ಯಕರ್ತನಾಗಿದ್ದ ಕಾರಗದ್ದೆ ಗ್ರಾಮದ ನಿತೇಶ್ ಎಂಬಾತ ದೀಪ್ತಿಯನ್ನು ಪ್ರೀತಿಸಿ ನಂತರ ಪ್ರೀತಿಸಿ ನಂತರ ಮೋಸ ಮಾಡಿದ್ದರಿಂದ ನೊಂದ ವಿದ್ಯಾರ್ಥಿನಿ ಕಳೆನಾಶಕ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆಂದು ತಿಳಿದುಬಂದಿದೆ.

ದೀಪ್ತಿ ಹಾಗೂ ಆಕೆಯ ಪ್ರಿಯಕರ ನಿತೇಶ್ ಒಂದೇ ಸಮುದಾಯದವರಾಗಿದ್ದು, ಪರಸ್ಪರ ಪರಿಚಯಸ್ಥರಾಗಿದ್ದರು. ಪರಿಚಯ ಪ್ರೀತಿಗೆ ತಿರುಗಿದ್ದು, ಇಬ್ಬರು ಕೆಲ ವರ್ಷಗಳಿಂದ ಪ್ರೀತಿಸುತ್ತಿದ್ದರು. ಇತ್ತೀಚೆಗೆ ಇಬ್ಬರ ನಡುವೆ ಜಗಳ ಆಗಿದ್ದು, ಈ ವೇಳೆ ನಿತೇಶ್ ಪ್ರೀತಿಯನ್ನು ನಿರಾಕರಿಸಿದ್ದಾನೆ ಎನ್ನಲಾಗಿದೆ.

ಇದರಿಂದ ತೀವ್ರವಾಗಿ ನೊಂದಿದ್ದ ದೀಪ್ತಿ ಕಳೆದ ಜ.10ರಂದು ಬೆಳಗ್ಗೆ ತನ್ನ ಮನೆಯಲ್ಲಿದ್ದ ಕಳೆನಾಶಕ ಔಷಧವನ್ನು ಸೇವಿಸಿದ್ದಾಳೆ. ನಂತರ ತೀವ್ರವಾಗಿ ಅಸ್ವಸ್ಥಳಾದ ದೀಪ್ತಿಯನ್ನು ಕುಟುಂಬಸ್ಥರು ಕಳಸ ಪಟ್ಟಣದ ಆಸ್ಪತ್ರೆಗೆ ದಾಖಲಿಸಿದ್ದಾರೆ. ಅಲ್ಲಿನ ವೈದ್ಯರು ಪ್ರಾಥಮಿಕ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗೆ ಮಂಗಳೂರು ಆಸ್ಪತ್ರೆಗೆ ದಾಖಲಿಸಲು ಸೂಚಿಸಿದ್ದಾರೆ ಎನ್ನಲಾಗಿದೆ.

ಕೂಡಲೇ ಕುಟುಂಬಸ್ಥರು ದೀಪ್ತಿಯನ್ನು ಮಂಗಳೂರು ನಗರದ ಎಜೆ ಆಸ್ಪತ್ರೆಗೆ ದಾಖಲಿಸಿದ್ದು, ಸಾವು ಬದುಕಿನ ನಡುವೆ ಹೋರಾಟ ಮಾಡುತ್ತಿದ್ದ ದೀಪ್ತಿಗೆ ಅಲ್ಲಿನ ವೈದ್ಯರು 4 ದಿನಗಳ ಕಾಲ ಚಿಕಿತ್ಸೆ ನೀಡಿದ್ದು, ಚಿಕಿತ್ಸೆ ಫಲಕಾರಿಯಾಗದೇ ವಿದ್ಯಾರ್ಥಿನಿ ದೀಪ್ತಿ ಜ.14ರಂದು ಮೃತಪಟ್ಟಿದ್ದಾಳೆಂದು ತಿಳಿದು ಬಂದಿದೆ.

ಘಟನೆ ಸಂಬಂಧ ದೀಪ್ತಿಯ ತಂದೆ ಚೆನ್ನೇಗೌಡ ಶನಿವಾರ ಕುದುರೆಮುಖ ಪೊಲೀಸ್ ಠಾಣೆಗೆ ದೂರು ನೀಡಿ, ನಿತೇಶ್ ಎಂಬ ಯುವಕ ತನ್ನ ಮಗಳನ್ನು ಪ್ರೀತಿ ಮಾಡುವುದಾಗಿ ಹೇಳಿ ನಂತರ ವಂಚನೆ ಮಾಡಿದ್ದು, ಇದರಿಂದ ಮನನೊಂದು ಮಗಳು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ದೀಪ್ತಿ ವಿಷ ಸೇವನೆಗೂ ಮುನ್ನ ತನ್ನ ಮನೆಯಲ್ಲಿ ಡೆತ್‍ನೋಟ್ ಬರೆದಿಟ್ಟಿರುವುದಾಗಿ ಕುಟುಂಬಸ್ಥರ ಬಳಿ ತಿಳಿಸಿದ್ದಾಳೆ, ತನ್ನ ಮಗಳ ಸಾವಿಗೆ ಕಾರಣನಾದ ನಿತೇಶ್‍ನನ್ನು ಬಂಧಿಸಿ ನ್ಯಾಯ ಒದಗಿಸಬೇಕೆಂದು ಒತ್ತಾಯಿಸಿದ್ದಾರೆ.

ಪ್ರಕರಣ ದಾಖಲಿಸಲು ಪೊಲೀಸರ ಹಿಂದೇಟು: ಆರೋಪ

 ಆರೋಪಿ ಬಿಜೆಪಿ ಹಾಗೂ ಬಜರಂಗದಳದ ಕಾರ್ಯಕರ್ತನಾಗಿದ್ದು, ಪ್ರಭಾವಿ ಎಂಬ ಕಾರಣಕ್ಕೆ ಕುದುರೆಮುಖ ಠಾಣಾಧಿಕಾರಿಗಳು ದೂರು ನೀಡಿ ಒಂದು ದಿನ ಕಳೆದರೂ ಎಫ್‍ಐಆರ್ ದಾಖಲಿಸಲು ಹಿಂದೇಟು ಹಾಕಿದ್ದಾರೆ. ಕುದುರೆಮುಖ ಪೊಲೀಸರ ನಿರ್ಲಕ್ಷ್ಯದ ಬಗ್ಗೆ ಮೃತಳ ಕುಟುಂಬಸ್ಥರು ಎಸ್ಪಿ ಬಳಿ ಅಳಲು ತೋಡಿಕೊಂಡಿದ್ದಾರೆ.

ಎಸ್ಪಿ ಕುದುರೆಮುಖ ಪೊಲೀಸರನ್ನು ತರಾಟೆಗೆ ತೆಗೆದುಕೊಂಡ ಬಳಿಕ ಪೊಲೀಸರು ಘಟನೆ ಸಂಬಂಧ ಬಿಜೆಪಿ ಕಾರ್ಯಕರ್ತ ನಿತೇಶ್ ವಿರುದ್ಧ ಪೊಕ್ಸೊ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಘಟನೆ ಬಳಿಕ ಆರೋಪಿ ತಲೆಮರೆಸಿಕೊಂಡಿದ್ದು, ಆರೋಪಿಯನ್ನು ಪೊಲೀಸರು ಇದುವರೆಗೂ ಬಂಧಿಸಿಲ್ಲ ಎಂದು ತಿಳಿದು ಬಂದಿದೆ.

share
Next Story
X