Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಕುವೈತ್ ನಲ್ಲಿ ಅತಂತ್ರ ಸ್ಥಿತಿಯಲ್ಲಿರುವ...

ಕುವೈತ್ ನಲ್ಲಿ ಅತಂತ್ರ ಸ್ಥಿತಿಯಲ್ಲಿರುವ ಮಹಿಳೆಯ ರಕ್ಷಣೆಗೆ ಮುಂದಾದ ಕೊಡಗು ಜಿಲ್ಲಾಡಳಿತ

16 Jan 2023 11:39 PM IST
share
ಕುವೈತ್ ನಲ್ಲಿ ಅತಂತ್ರ ಸ್ಥಿತಿಯಲ್ಲಿರುವ ಮಹಿಳೆಯ ರಕ್ಷಣೆಗೆ ಮುಂದಾದ ಕೊಡಗು ಜಿಲ್ಲಾಡಳಿತ

ಮಡಿಕೇರಿ ಜ.16 : ಏಜೆಂಟ್ ಒಬ್ಬ ಮಾಡಿದ ವಂಚನೆಯಿಂದ ಮೋಸಕ್ಕೊಳಗಾಗಿ ಕೆಲಸವಿಲ್ಲದೆ ಕುವೈತ್ ನಲ್ಲಿ ಅತಂತ್ರ ಸ್ಥಿತಿಯಲ್ಲಿರುವ ಸಿದ್ದಾಪುರದ ಕರಡಿಗೋಡು ಗ್ರಾಮದ ಮಹಿಳೆ ಪಾರ್ವತಿ ಎಂಬುವವರ ರಕ್ಷಣೆಗೆ ಕೊಡಗು ಜಿಲ್ಲಾಡಳಿತ ಮುಂದಾಗಿದೆ.

ವಿಸಿಟಿಂಗ್ ವೀಸಾದ ಅವಧಿ ಮೂರು ತಿಂಗಳಿಗೆ ಮುಕ್ತಾಯವಾದ ಹಿನ್ನೆಲೆ ಇದರ ಅರಿವಿಲ್ಲದ ಪಾರ್ವತಿ ಇದೀಗ ಕೆಲಸವಿಲ್ಲದೆ ಯಾವುದೋ ಒಂದು ಸ್ಥಳದಲ್ಲಿ ಅತಂತ್ರವಾಗಿರುವ ಬಗ್ಗೆ ಕಳೆದ ವಾರ ತನ್ನ ತಾಯಿ ಎಂ.ಚೆಕ್ಕಿ ಅವರಿಗೆ ಕರೆ ಮಾಡಿ ತಿಳಿಸಿದ್ದರು. 

ಇದರಿಂದ ಆತಂಕಗೊಂಡ ಚೆಕ್ಕಿ ಪುತ್ರಿಯನ್ನು ಮರಳಿ ಕರೆ ತರಲು ಸಹಾಯ ಮಾಡುವಂತೆ ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಿದ್ದರು. ಇದಕ್ಕೆ ಸ್ಪಂದಿಸಿರುವ ಜಿಲ್ಲಾಡಳಿತ ಪಾರ್ವತಿಯನ್ನು ಕರೆ ತರಲು ಅಗತ್ಯ ಕ್ರಮ ಕೈಗೊಂಡಿದೆ.  

ಜಿಲ್ಲಾಡಳಿತ ಹಾಗೂ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧಿಕಾರಿಗಳು ಸಂತ್ರಸ್ತೆಯೊಂದಿಗೆ ಸಂವಹನ ಸಾಧಿಸಿ, ಆಕೆಗೆ ಧೈರ್ಯ ತುಂಬಿ ಸಂಬಂಧಪಟ್ಟ ಇಲಾಖೆಗೆ ಮಾಹಿತಿ ನೀಡಿದ್ದಾರೆ. ಪಾರ್ವತಿಯನ್ನು ಕ್ಷೇಮವಾಗಿ ಕುಟುಂಬದೊಡನೆ ಸೇರಿಸುವ ನಿಟ್ಟಿನಲ್ಲಿ ಅಧಿಕಾರಿಗಳು ಕಾರ್ಯೋನ್ಮುಖರಾಗಿದ್ದಾರೆ ಎಂದು ಜಿಲ್ಲಾಡಳಿತ ತಿಳಿಸಿದೆ.

ಏಜೆಂಟ್ ನಿಂದ ವಂಚನೆ; ಮಹಿಳೆಯ ಆರೋಪ

ಪತಿ ತೊರೆದು ಹೋದ ಹಿನ್ನೆಲೆಯಲ್ಲಿ ಇಬ್ಬರು ಪುಟ್ಟ ಮಕ್ಕಳು ಹಾಗೂ ತಾಯಿಯೊಂದಿಗೆ ಕರಡಿಗೋಡು ಗ್ರಾಮದ ಲೈನ್ ಮನೆಯೊಂದರಲ್ಲಿ ವಾಸವಿದ್ದ ಪಾರ್ವತಿ ಕೂಲಿ ಕೆಲಸ ಮಾಡಿ ಜೀವನ ಸಾಗಿಸುತ್ತಿದ್ದರು. ಮೂರು ವರ್ಷಗಳ ಹಿಂದೆ ಕೇರಳದ ತಲಚೇರಿಯ ಮನೆಯೊಂದರಲ್ಲಿ ಮನೆ ಕೆಲಸಕ್ಕಾಗಿ ಪಾರ್ವತಿ ನೇಮಕಗೊಂಡಿದ್ದರು. ತಾಯಿ ಚೆಕ್ಕಿಯೊಂದಿಗೆ ಇಬ್ಬರು ಮಕ್ಕಳನ್ನು ಬಿಟ್ಟು ತೆರಳಿದ್ದರು. 

ಇತ್ತೀಚೆಗೆ ಮಹಿಳೆಯೊಬ್ಬಳ ಮೂಲಕ ಊಟಿಯ ಏಜೆಂಟ್ ಒಬ್ಬನ ಪರಿಚಯವಾಗಿದ್ದು, ಕುವೈತ್ ನಲ್ಲಿ ಮನೆ ಕೆಲಸ ಕೊಡಿಸುವುದಾಗಿ ನಂಬಿಸಿದ್ದ. ಏಜೆಂಟ್ ನೀಡಿದ ಪಾಸ್ ಪೋರ್ಟ್ ಮತ್ತು ವೀಸಾದ ಮೂಲಕ ಕುವೈತ್ ನ ಮನೆಯೊಂದಕ್ಕೆ ಸೇರಿಕೊಂಡ ಪಾರ್ವತಿ ಮೂರು ತಿಂಗಳಿನಿಂದ ಮನೆ ಕೆಲಸದಾಕೆಯಾಗಿ ದುಡಿಯುತ್ತಿದ್ದರು. ಆದರೆ ವೀಸಾದ ಅವಧಿ ಮುಗಿಯುತ್ತಿದ್ದಂತೆ ಕೆಲಸ ಕಳೆದುಕೊಂಡ ಅವರು ಅತಂತ್ರರಾಗಿದ್ದಾರೆ ಎಂದು ಮಾಹಿತಿ ಲಭಿಸಿದೆ.

ವಿಸಿಟಿಂಗ್ ವೀಸಾದ ಅವಧಿಯ ಕುರಿತು ತಿಳಿಸದೆ ವಂಚಿಸಿರುವ ಏಜೆಂಟ್ ಪಾರ್ವತಿಯನ್ನು ಕೆಲಸಕ್ಕೆ ಸೇರಿಸಿದ ಮನೆಯ ಮಾಲೀಕರಿಂದ ಹಣ ಪಡೆದಿದ್ದಾನೆ ಎಂದು ತಿಳಿದು ಬಂದಿದೆ. 

share
Next Story
X