ಕಲಬುರಗಿ: ಮಲ್ಲಿಕಾರ್ಜುನ ಖರ್ಗೆ ಫೋಟೋ ವಿರೂಪಗೊಳಿಸಿದ ಬಿಜೆಪಿ ಕಾರ್ಯಕರ್ತನ ವಿರುದ್ಧ FIR

ಕಲಬುರಗಿ: ಹಿರಿಯ ರಾಜಕಾರಣಿ ಎಐಸಿಸಿ ರಾಷ್ಟ್ರೀಯ ಅಧ್ಯಕ್ಷ ಡಾ. ಮಲ್ಲಿಕಾರ್ಜುನ ಖರ್ಗೆ ಅವರ ಭಾವ ಚಿತ್ರವನ್ನು ವಿರೋಪಗೊಳ್ಳಿಸಿದ ಚಿತ್ತಾಪುರ ತಾಲೂಕಿನ ಬಿಜಿಪಿ ಕಾರ್ಯಕರ್ತನ ವಿರುದ್ಧ ಸ್ಥಳೀಯ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಚಿತ್ತಾಪುರ ನಿವಾಸಿ ಅಶ್ವಥ್ ರಾಠೋಡ್ ಆರೋಪಿಯಾಗಿದ್ದು, ಈತ ಮಲ್ಲಿಕಾರ್ಜುನ ಖರ್ಗೆ ಅವರ ಭಾವಚಿತ್ರಕ್ಕೆ ಅವಮಾನ ಮಾಡಿ, ''ಮಲ್ಲಿಕಾರ್ಜುನ ಖರ್ಗೆ ಅವರೇ ನಿಮ್ಮ ಸೋಲಿಗೆ ನಿಮ್ಮ ಸುಪುತ್ರ ಕಾರಣ'' ಎಂದು ಬರೆದು ತನ್ನ ವಾಟ್ಸಪ್ ಸ್ಟೇಟಸ್ ನಲ್ಲಿ ಹಾಕಿದ್ದ ಎಂದು ಆರೋಪಿಸಲಾಗಿದೆ.
ಆರೋಪಿ ಸ್ಟೇಟಸ್ ಗಮನಿಸಿದ ಕಾಂಗ್ರೆಸ್ ಕಾರ್ಯಕರ್ತರು ಚಿತ್ತಾಪುರ ಪೊಲೀಸ್ ಠಾಣೆಯಲ್ಲಿ ದೂರು ನೀಡಿ ಪ್ರಕರಣ ದಾಖಲಿಸಿದ್ದಾರೆ.
Next Story





