Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಮುಂದಿನ 10 ವರ್ಷಗಳು ‘ನೀರಾವರಿ ದಶಕ':...

ಮುಂದಿನ 10 ವರ್ಷಗಳು ‘ನೀರಾವರಿ ದಶಕ': ಮುಖ್ಯಮಂತ್ರಿ ಬೊಮ್ಮಾಯಿ ಘೋಷಣೆ

19 Jan 2023 11:10 PM IST
share
ಮುಂದಿನ 10 ವರ್ಷಗಳು ‘ನೀರಾವರಿ ದಶಕ: ಮುಖ್ಯಮಂತ್ರಿ ಬೊಮ್ಮಾಯಿ ಘೋಷಣೆ

ಕೋಡೆಕಲ್(ಯಾದಗಿರಿ), ಜ.19: ಮುಂದಿನ ಹತ್ತು ವರ್ಷಗಳನ್ನು ನೀರಾವರಿ ದಶಕವೆಂದು ಘೋಷಿಸಲಾಗುವುದು. ಈ ಮೂಲಕ 10 ವರ್ಷಗಳಲ್ಲಿ ರಾಜ್ಯದ ನೀರಾವರಿ ಯೋಜನೆಗಳಿಗೆ ಆದ್ಯತೆ ನೀಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.

ಗುರುವಾರ ಯಾದಗಿರಿ ಜಿಲ್ಲೆಯ ಕೋಡೆಕಲ್ ಹೊರವಲಯದಲ್ಲಿ ಏರ್ಪಡಿಸಿದ್ದ 10,863 ಕೋಟಿ ರೂ.ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಚಾಲನೆ ನೀಡಿದ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.

ರಾಜ್ಯದಲ್ಲಿ 40.66ಲಕ್ಷ ಹೆಕ್ಟೇರ್ ನೀರಾವರಿ ಪ್ರದೇಶದ ಗುರಿ ಇದ್ದು, ಇದುವರೆಗೆ 30 ಲಕ್ಷ ಹೆಕ್ಟೇರ್ ಭೂಮಿಗೆ ನೀರುಣಿಸಲಾಗುತ್ತಿದ್ದು, ಬಾಕಿ ಉಳಿದ 10.66ಲಕ್ಷ ಹೆಕ್ಟೇರ್ ಭೂಮಿಯನ್ನು ನೀರಾವರಿಗೆ ಒಳಪಡಿಸಲು ಕ್ರಮಕೈಗೊಳ್ಳಲಾಗುವುದು ಎಂದು ಅವರು ತಿಳಿಸಿದರು.

ನಾರಾಯಣಪುರ ಎಡದಂಡೆ ಕಾಲುವೆಯ ವಿಸ್ತರಣೆ, ಪುನಃಶ್ಚೇತನ ಹಾಗೂ ಆಧುನೀಕರಣ ಯೋಜನೆ ಮತ್ತು ಸ್ಕಾಡಾ ತಂತ್ರಜ್ಞಾನದ ಅಳವಡಿಕೆಯಿಂದಾಗಿ ಅಚ್ಚುಕಟ್ಟು ಪ್ರದೇಶದ ಎಲ್ಲ ರೈತರ ಜಮೀನುಗಳಿಗೆ ನೀರು ಒದಗಿಸಲಾಗುತ್ತಿದೆ ಎಂದು ಮುಖ್ಯಮಂತ್ರಿ ಹೇಳಿದರು.

ಈ ಸ್ಕಾಡಾ ತಂತ್ರಜ್ಞಾನದಿಂದಾಗಿ ಉತ್ತರ ಕರ್ನಾಟಕದ ಬರಪೀಡಿತ ವಿಜಯಪುರ, ಕಲಬುರಗಿ ಹಾಗೂ ಯಾದಗಿರಿ ಜಿಲ್ಲೆಗಳ 4.50 ಲಕ್ಷ ಹೆಕ್ಟರ್ ಪ್ರದೇಶದಲ್ಲಿ 1 ಲಕ್ಷ ಹೆಕ್ಟೇರ್ ಪ್ರದೇಶದ ರೈತರ ಜಮೀನುಗಳಿಗೆ ಸಮ ಪ್ರಮಾಣದಲ್ಲಿ ನೀರು ಲಭ್ಯವಾಗಲಿದೆ ಎಂದ ಅವರು, ಈ ತಂತ್ರಜ್ಞಾನದಿಂದ ನೀರಿನ ಬಳಕೆಯ ದಕ್ಷತೆ ಶೇ.20ರಷ್ಟು ಹೆಚ್ಚಾಗಲಿದೆ ಎಂದರು.

ಈ ಯೋಜನೆಯು ಇಡೀ ಏಷ್ಯಾ ಖಂಡದಲ್ಲಿಯೇ ದೊಡ್ಡ ಯೋಜನೆಯಾಗಿದೆ. ಈ ರೀತಿಯ ಯೋಜನೆಗಳನ್ನು ಇನ್ನು ಮುಂದೆಯೂ ಕರ್ನಾಟದಲ್ಲಿ ಅನುಷ್ಠಾನಗೊಳಿಸಲಾಗುವುದು ಎಂದು ಅವರು ಹೇಳಿದರು. ಜಲಸಂಪನ್ಮೂಲ ಸಚಿವ ಗೋವಿಂದ ಕಾರಜೋಳ ಸ್ವಾಗತಿಸಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಸ್ಥಳೀಯ ಶಾಸಕರು ಆಗಿರುವ ಸುರಪುರದ ರಾಜುಗೌಡ (ನರಸಿಂಹನಾಯಕ್) ಅಧ್ಯಕ್ಷತೆ ವಹಿಸಿದ್ದರು.

ಈ ಸಂದರ್ಭದಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್, ಕೇಂದ್ರ ಸಚಿವ ಭಗವಂತ ಖೂಬಾ, ಸಂಸದ ರಾಜಾ ಅಮರೇಶ್ವರ ನಾಯಕ್, ಶಾಸಕರಾದ ವೆಂಕಟರೆಡ್ಡಿ ಮುದ್ನಾಳ್, ಎ.ಎಸ್.ಪಾಟೀಲ್ ನಡಹಳ್ಳಿ, ರಮೇಶ ಸಿಂದಗಿ, ಸೋಮನಗೌಡ ಹಿಪ್ಪರಗಿ ಉಪಸ್ಥಿತರಿದ್ದರು.

share
Next Story
X