ಮಲೆನಾಡಿನಲ್ಲಿ ಮತ್ತೆ ಮಂಗನ ಕಾಯಿಲೆ ಪ್ರಕರಣ ಪತ್ತೆ

ಚಿಕ್ಕಮಗಳೂರು: ಮಲೆನಾಡಿನಲ್ಲಿ ಇದೀಗ ಮತ್ತೆ ಮಂಗನ ಕಾಯಿಲೆ ಪ್ರಕರಣ ಪತ್ತೆಯಾಗಿರುವುದು ಜನರ ಆತಂಕಕ್ಕೆ ಕಾರಣವಾಗಿದೆ.
ಕೊಪ್ಪದಲ್ಲಿದ್ದ ಕೆಲಸ ಮಾಡುತ್ತಿದ್ದ ಬಾಳೆಹೊನ್ನೂರು ಮೂಲದ ವ್ಯಕ್ತಿಯೊಬ್ಬರಿಗೆ ಕೆಎಫ್ ಡಿ (ಮಂಗನಕಾಯಿಲೆ) ಪತ್ತೆಯಾಗಿರುವುದಾಗಿ ವರದಿಯಾಗಿದೆ.
ಜ್ವರದಿಂದ ಬಳಲುತ್ತಿದ್ದ ಬಾಳೆಹೊನ್ನೂರು ಮೂಲದ ವ್ಯಕ್ತಿಯನ್ನು ಆರೋಗ್ಯ ಇಲಾಖೆ ಟೆಸ್ಟ್ ಗೆ ಕಳುಹಿಸಲಾಗಿತ್ತು.. ಈ ವೇಳೆ ಕೆಎಫ್ ಡಿ ಪ್ರಕರಣ ದೃಢಪಟ್ಟಿದೆ. ಪ್ರಕರಣ ಪತ್ತೆಯಾದ ವ್ಯಕ್ತಿಯಿದ್ದ ಸ್ಥಳ ಹಾಗೂ ಸುತ್ತಮುತ್ತ ಪ್ರತಿ ವ್ಯಕ್ತಿಗಳ ಬಗ್ಗೆ ನಿಗಾ ಇಡಲಾಗಿದೆ. ಆರೋಗ್ಯ ಇಲಾಖೆಯಿಂದ ಹೈ ಅಲರ್ಟ್ ಘೋಷಿಸಲಾಗಿದೆ.
Next Story





