ಮುಂದಿನ ದಿನಗಳಲ್ಲಿ ಸಿದ್ದರಾಮಯ್ಯ, ಡಿಕೆಶಿ, ಖರ್ಗೆ ಮಕ್ಕಳೂ ಬಿಜೆಪಿಗೆ: ನಳಿನ್ ಕುಮಾರ್ ಕಟೀಲ್
ಬೆಂಗಳೂರು: ಮುಂದಿನ ದಿನಗಳಲ್ಲಿ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಹಾಗೂ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಯವರ ಮನೆಯ ಮಕ್ಕಳೂ ಬಿಜೆಪಿಗೆ ಸೇರ್ಪಡೆಗೊಳ್ಳುತ್ತಾರೆಂದು ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ನಳಿನ್ ಕುಮಾರ್ ಹೇಳಿದ್ದಾರೆ.
ನಗರದ ಬಿಜೆಪಿ ಕಚೇರಿಯಲ್ಲಿ ಸೋಮವಾರ ನಡೆದ ಪಕ್ಷ ಸೇರ್ಪಡೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಇಂದು ಕಾಂಗ್ರೆಸ್ ಶಾಸಕರ ಮನೆಯಲ್ಲಿ ಒಬ್ಬ ಪುತ್ರ ಕವಿಶ್ ಗೌಡ ಬಿಜೆಪಿಗೆ ಬಂದಿದ್ದಾರೆ. ಇದೊಂದೇ ಅಲ್ಲ, ಮುಂದಿನ ದಿನಗಳಲ್ಲಿ ಸಿದ್ದರಾಮಯ್ಯ, ಡಿಕೆಶಿ, ಖರ್ಗೆಯವರ ಮನೆಯ ಮಕ್ಕಳೂ ಬಿಜೆಪಿಗೆ ಸೇರ್ಪಡೆಗೊಳ್ಳುತ್ತಾರೆಂದು ಹೇಳಿದರು.
''ಕಾಂಗ್ರೆಸ್ ಬಸ್ ಹೊರಟಿದೆ. ಹೋಗ್ತ ಹೋಗ್ತ ಬ್ರೇಕ್ಫೈಲ್ ಆಗುತ್ತಿದೆ. ಇನ್ನೊಂದು ಪಂಚರತ್ನ ಯಾತ್ರೆ ಆರಂಭವಾಗಿದೆ. ಬಿಜಾಪುರ ತಲುಪುವಾಗ ಹಾಸನದಲ್ಲಿ ಪಂಕ್ಚರ್ ಹಾಕುವ ಪ್ರಯತ್ನಗಳು ಪ್ರಾರಂಭವಾಗಿವೆ'' ಎಂದು ವ್ಯಂಗ್ಯವಾಡಿದರು.
ರಾಜ್ಯದಾದ್ಯಂತ ಬಿಜೆಪಿ ಪರವಾದ ಅಲೆ ಮೂಡುತ್ತಿದ್ದು, ಇಂದು ಕಾಂಗ್ರೆಸ್ ಹಾಗೂ ಜೆಡಿಎಸ್ ನ ಹಲವು ಮುಖಂಡರುಗಳು ನಮ್ಮ ಪಕ್ಷದ ಸಿದ್ಧಾಂತ ಮತ್ತು ಸರ್ಕಾರದ ಜನಪರ ಆಡಳಿತ ಮೆಚ್ಚಿ ನನ್ನ ಹಾಗೂ ರಾಜ್ಯ ಬಿಜೆಪಿ ಸಚಿವರು ಪಕ್ಷದ ಮುಖಂಡರ ಸಮ್ಮುಖದಲ್ಲಿ ನಮ್ಮ ಪಕ್ಷ ಸೇರ್ಪಡೆಗೊಂಡರು.
— Nalinkumar Kateel (@nalinkateel) January 30, 2023
1/2 pic.twitter.com/x52rFoxNX4