Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಏಮ್ಸ್ ಹುದ್ದೆ, ಎನ್ ಎಂಸಿ ಸದಸ್ಯತ್ವಕ್ಕೆ...

ಏಮ್ಸ್ ಹುದ್ದೆ, ಎನ್ ಎಂಸಿ ಸದಸ್ಯತ್ವಕ್ಕೆ ಲಂಚ: ಪ್ರಹ್ಲಾದ್ ಜೋಶಿ ವಿರುದ್ಧ ಭೋಜೇಗೌಡ ಆರೋಪ

ಬ್ಯಾಂಕ್ ದಾಖಲೆ ಬಿಡುಗಡೆ ಮಾಡಿದ ಜೆಡಿಎಸ್ ಮುಖಂಡ

7 Feb 2023 7:24 PM IST
share
ಏಮ್ಸ್ ಹುದ್ದೆ, ಎನ್ ಎಂಸಿ ಸದಸ್ಯತ್ವಕ್ಕೆ ಲಂಚ: ಪ್ರಹ್ಲಾದ್ ಜೋಶಿ ವಿರುದ್ಧ ಭೋಜೇಗೌಡ ಆರೋಪ
ಬ್ಯಾಂಕ್ ದಾಖಲೆ ಬಿಡುಗಡೆ ಮಾಡಿದ ಜೆಡಿಎಸ್ ಮುಖಂಡ

ಬೆಂಗಳೂರು: ಕೇಂದ್ರ ಸರಕಾರದ ಅಧೀನದಲ್ಲಿರುವ ಅಖಿಲ ಭಾರತ ವೈದ್ಯಕೀಯ ಸಂಸ್ಥೆ (ಏಮ್ಸ್) ಯಲ್ಲಿ ಹುದ್ದೆ ಕೊಡಿಸಲು ಹಾಗೂ ರಾಷ್ಟ್ರೀಯ ವೈದ್ಯಕೀಯ ಮಂಡಳಿ (ಎನ್ ಎಂ ಸಿ)ಯ ಸದಸ್ಯತ್ವ ಕೊಡಿಸಲು ಕೇಂದ್ರ ಸಚಿವ ಪ್ರಹ್ಲಾದ್ ಜೋಷಿ ಅವರ ಕಚೇರಿ ಲಂಚದ ಹಣ ಪಡೆದಿದೆ ವಿಧಾನ ಪರಿಷತ್ ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಭೋಜೇಗೌಡರು ಗಂಭೀರ ಆರೋಪ ಮಾಡಿದರು.

ಪಕ್ಷದ ಕಚೇರಿ ಜೆಪಿ ಭವನದಲ್ಲಿ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರ ಸಮ್ಮುಖದಲ್ಲಿ  ಮಾಧ್ಯಮಗಳ ಜತೆ ಮಾತನಾಡಿದರು ಅವರು.

ಪ್ರಹ್ಲಾದ್ ಜೋಷಿಯವರು ನಮ್ಮ ಪಕ್ಷದ ಬಗ್ಗೆ ಹಾಗೂ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರ ಕುಟುಂಬದ ಕುರಿತು ಲಘುವಾಗಿ ಮಾತಾಡಿದ್ದಾರೆ. ಆದರೆ, ತಮ್ಮ ಕಚೇರಿಯಲ್ಲಿ ನಡೆದಿರುವ ಈ ಕಳ್ಳ ವ್ಯವಹಾರದ ಬಗ್ಗೆ ಕೇಂದ್ರ ಸಚಿವರು ಏನು ಹೇಳುತ್ತಾರೆ ಎಂದು ಅವರು ಪ್ರಶ್ನಿಸಿದರು.

ಪ್ರಹ್ಲಾದ್ ಜೋಷಿ ಅವರ ಕಚೇರಿಯಲ್ಲಿ ಏನು ನಡೆಯುತ್ತಿದೆ ಎನ್ನುವುದು ರಾಜ್ಯಕ್ಕೆ ಗೊತ್ತಾಗಬೇಕಿದೆ. ತಾವು ಶುದ್ಧರು, ಪರಿಶುದ್ಧರು ಎಂದು ಬೊಬ್ಬಿರಿದು ಹೇಳುವ ಅವರ ಕರ್ಮಕಾಂಡ ಇಲ್ಲಿದೆ ನೋಡಿ ಎಂದು ಹೇಳಿದ ಅವರು, ಪ್ರಹ್ಲಾದ್ ಜೋಷಿ ಅವರ ಕಚೇರಿಯಲ್ಲಿ ಕೇಂದ್ರದ ಸರಕಾರದ  ಹುದ್ದೆಗಳನ್ನು ಕಾಸಿಗಾಗಿ ಬಿಕರಿಗಿಟ್ಟಿದ್ದರೆನ್ನಲಾದ ಕೆಲ ದಾಖಲೆಗಳನ್ನು ಮಾಧ್ಯಮಗೋಷ್ಠಿಯಲ್ಲಿ ಬಿಡುಗಡೆ ಮಾಡಿದರು.

ಹಣವನ್ನು ಎರಡು ಬಾರಿ ಬ್ಯಾಂಕ್ ಖಾತೆಗೆ ಹಾಕಿಸಿಕೊಳ್ಳಲಾಗಿದೆ ಎಂದು ಆರೋಪ ಮಾಡಿದ ಭೋಜೇಗೌಡರು, ಅದಕ್ಕೆ ಸಂಬಂಧಿತ ಬ್ಯಾಂಕ್ ಖಾತೆಯ ವಿವರಗಳನ್ನು ಹಾಗೂ ಅಂದಿನ ಕೇಂದ್ರದ ಆರೋಗ್ಯ ಸಚಿವ ಡಾ.ಹರ್ಷವರ್ಧನ್ ಅವರು ಪ್ರಹ್ಲಾದ್ ಜೋಶಿ ಅವರಿಗೆ ಬರೆದಿದ್ದ ಪತ್ರವೊಂದನ್ನು ಕೂಡ ಬಿಡುಗಡೆ ಮಾಡಿದರು.

ಕೇಂದ್ರದ ಆರೋಗ್ಯ ಸಚಿವರು ಮಾಡಿಕೊಟ್ಟ ಕೆಲಸಕ್ಕೆ ಪ್ರತಿಯಾಗಿ ಅವರ ಸಂಪುಟ ಸಹೋದ್ಯೋಗಿ ಆಗಿದ್ದ  ಪ್ರಹ್ಲಾದ್ ಜೋಶಿ ಅವರ ಕಚೇರಿಗೆ ಹಣ ತಲುಪಿಸಲಾಗಿದೆ. 

ಈ ಬಗ್ಗೆ ಉನ್ನತ ಮಟ್ಟದ ತನಿಖೆ ನಡೆಯಬೇಕು ಎಂದು ಒತ್ತಾಯ ಮಾಡಿದ ಅವರು, ಈ ಹಣವನ್ನು ಯಾರು ಯಾರಿಗೆ ಕೊಟ್ಟಿದ್ದಾರೆ. ಕಾಸಿಗಾಗಿ ಹುದ್ದೆ ಮಾರಾಟ ಮಾಡಿಕೊಂಡ ಈ ಬಹುಕೋಟಿ ಹಗರಣದ ನಿಜವಾದ ಕಿಂಗ್ ಪಿನ್ ಯಾರು? ಇದರಲ್ಲಿ ಪ್ರಹ್ಲಾದ್ ಜೋಷಿ ಅವರ ಪಾತ್ರ ಏನು ಎಂಬುದು ತನಿಖೆಯಿಂದ ಹೊರಬರಬೇಕಿದೆ ಎಂದು ಹೇಳಿದರು.

ಒಟ್ಟು ಎರಡೂವರೆ ಕೋಟಿ ರೂಪಾಯಿ ಹಣ ಸಂದಾಯ ಆಗಿದೆ. ಈ ಹಣವನ್ನು ಯಾರಿಗೋಸ್ಕರ, ಯಾರು, ಯಾರಿಂದ ಹಣ ತೆಗೆದುಕೊಳ್ಳಲಾಗಿದೆ ಎಂಬುದರ ಬಗ್ಗೆ ಪ್ರಹ್ಲಾದ್ ಜೋಶಿ ಉತ್ತರ ಕೊಡಬೇಕಿದೆ. ಅವರ ಕಚೇರಿಗೇ ಹಣ ಹೋಗಿದೆ ಎಂದು ಭೋಜೆಗೌಡರು ನೇರ ಆರೋಪ ಮಾಡಿದರು.

ನ್ಯಾಷನಲ್ ಮೆಡಿಕಲ್ ಕೌನ್ಸಿಲ್ ನಲ್ಲಿ ಮೆಂಬರ್ ಮಾಡ್ತೀವಿ ಅಂತ ಹಣ ಪಡೆದಿದ್ದಾರೆ. ಹಾಗೆಯೇ, ಏಮ್ಸ್ ಡೈರಕ್ಡರ್ ಮಾಡ್ತೀನಿ ಅಂತ ಹಣ ಪಡೆಯಲಾಗಿದೆ. ಅಂದಿನ ಕೇಂದ್ರದ ಆರೋಗ್ಯ ಸಚಿವರು ಪ್ರಹ್ಲಾದ್ ಜೋಶಿ ಅವರಿಗೆ ಬರೆದಿರುವ ಪತ್ರಕ್ಕೂ ಹಾಗೂ ಈ ಹಣ ಸಂದಾಯಕ್ಕೂ ಇರುವ ಲಿಂಕ್ ಬಗ್ಗೆ ತನಿಖೆ ನಡೆಯಬೇಕು ಎಂದು ಅವರು ಆಗ್ರಹಪಡಿಸಿದರು.

ಇದೇ ಪ್ರಕರಣದ ಬಗ್ಗೆ ಇನ್ನೂ ಹಲವಾರು ದಾಖಲೆಗಳು ಇವೆ. ಈ ದಾಖಲೆಗಳು ಕೇವಲ ಸ್ಯಾಂಪಲ್ ಮಾತ್ರ. ಇನ್ನೂ ಸ್ವಲ್ಪ ದಿನದಲ್ಲೇ ದಾಖಲೆ ಬಿಡುಗಡೆ ಮಾಡ್ತೀವಿ ಎಂದು ಅವರು ತಿಳಿಸಿದರು.

ಜೆಡಿಎಸ್ ರಾಜ್ಯಾಧ್ಯಕ್ಷ ಸಿಎಂ ಇಬ್ರಾಹಿಂ, ವಿಧಾನ ಪರಿಷತ್ ಸದಸ್ಯ ಹೆಚ್.ಎಂ.ರಮೇಶ್ ಗೌಡ ಈ ಸಂದರ್ಭದಲ್ಲಿ ಇದ್ದರು.

share
Next Story
X