ಆಂಬ್ಯುಲೆನ್ಸ್ ಢಿಕ್ಕಿ: ಬೈಕ್ ಸವಾರ ಸ್ಥಳದಲ್ಲೇ ಮೃತ್ಯು
ಮಡಿಕೇರಿ ಫೆ.8 : ಬೈಕ್ ಗೆ ಆಂಬ್ಯುಲೆನ್ಸ್ ಢಿಕ್ಕಿಯಾದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಮಡಿಕೇರಿ- ಚೆಟ್ಟಳ್ಳಿ ರಸ್ತೆಯಲ್ಲಿ ನಡೆದಿದೆ.
ಮಡಿಕೇರಿಯಿಂದ ಚೆಟ್ಟಳ್ಳಿಗೆ ತೆರಳುತ್ತಿದ್ದ ಲೋಕೇಶ್ (44) ಎಂಬುವವರೇ ಮೃತ ದುರ್ದೈವಿ.
ತಲೆಯ ಭಾಗಕ್ಕೆ ತೀವ್ರ ಗಾಯವಾಗಿದ್ದ ಲೋಕೇಶ್ ಅವರನ್ನು ಸ್ಥಳೀಯರು ಆಸ್ಪತ್ರೆಗೆ ಸಾಗಿಸಲು ಮುಂದಾದಾಗ ಸ್ಥಳದಲ್ಲೇ ಮೃತಪಟ್ಟರು ಎಂದು ಹೇಳಲಾಗಿದೆ. ಈ ಸಂಬಂಧ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.
Next Story