ಸಿದ್ದರಾಮಯ್ಯರಿಗೆ ನೋವುಂಟಾಗಿದ್ದಾರೆ ವಿಷಾದಿಸುತ್ತೇನೆ ಎಂದ ಸಚಿವ ಅಶ್ವತ್ಥನಾರಾಯಣ
ಬೆಂಗಳೂರು: ನನ್ನ ಹತ್ಯೆಗೆ ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್.ಅಶ್ವತ್ಥನಾರಾಯಣ ಅವರು ಬಹಿರಂಗವಾಗಿ ಕರೆ ನೀಡಿದ್ದಾರೆಂದು ವಿಧಾನಸಭೆ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಆರೋಪಿಸಿದ್ದು, ಈ ಬಗ್ಗೆ ಸಚಿವ ಅಶ್ವತ್ಥನಾರಾಯಣ ಅವರು ಸ್ಪಷ್ಟನೆ ನೀಡಿದ್ದಾರೆ.
''ಮಂಡ್ಯದಲ್ಲಿ ಟಿಪ್ಪು -ಸಿದ್ದರಾಮಯ್ಯ ಅವರನ್ನು ಹೋಲಿಸಿ ಆಡಿರುವ ಮಾತುಗಳು ಸಾಂದರ್ಭಿಕ ಪ್ರಸ್ತಾಪವೇ ವಿನಃ ಯಾವುದೇ ದುರುದ್ದೇಶದ ಮಾತುಗಳಲ್ಲ. ರಾಜಕೀಯದಲ್ಲಿ ವಾಗ್ದಾಳಿ ಒಂದು ಅವಿಭಾಜ್ಯ ಅಂಗವಾಗಿದೆ. ನಾನು ಆಡಿರುವ ಮಾತುಗಳನ್ನು ಆ ಚೌಕಟ್ಟಿನಲ್ಲೇ ನೋಡಬೇಕು. ಇದು ಆರೋಗ್ಯಕರ ಪ್ರಜಾತಂತ್ರಕ್ಕೆ ಅಗತ್ಯವಾಗಿದೆ'' ಎಂದು ಅಭಿಪ್ರಾಯ ಪಟ್ಟಿದ್ದಾರೆ.
''ಸಾಂದರ್ಭಿಕವಾಗಿ ಆಡು ಭಾಷೆಯಲ್ಲಿ ಸೋಲಿಸಿ ಎಂಬ ಅರ್ಥದಲ್ಲಿ ಹೇಳಿರುವ ಮಾತನ್ನು ತಮಗೆ ಬೇಕಾದ ಹಾಗೆ ಅರ್ಥೈಸಿಕೊಂಡು, ಮಾತನಾಡುತ್ತಿರುವ ಸಿದ್ದರಾಮಯ್ಯ ಅವರ ಭಾಷಾ ಪ್ರಾವೀಣ್ಯತೆ, ಅವರು ಬಳಸುವ (ಗ್ರಾಮೀಣ!) ಪದಗಳು ಏನೆಂಬುದನ್ನು ರಾಜ್ಯದ ಜನತೆಯೇ ನೋಡಿದೆ. ಅಷ್ಟಕ್ಕೂ, ಟಿಪ್ಪುವಿನಲ್ಲಿರುವ ಕಟುಕತನದ ಮನಸ್ಥಿತಿ ನಮ್ಮ ಮಂಡ್ಯದ ಜನತೆಗೆ ಇಲ್ಲ'' ಎಂದು ಹೇಳಿದ್ದಾರೆ.
''ಪ್ರಧಾನಿಯವರನ್ನು ನರ ಹಂತಕ ಎನ್ನುವುದು, ಮುಖ್ಯಮಂತ್ರಿ ಅವರಿಗೆ ಮನೆ ಹಾಳಾಗ ಎನ್ನುವುದು ಸಿದ್ದರಾಮಯ್ಯ ಅವರ ಸಂಸ್ಕೃತಿ ಆಗಿರಬಹುದು. ಆದರೆ, ಈ ಬಾರಿಯ ಚುನಾವಣೆಯಲ್ಲಿ ಕಾಂಗ್ರೆಸ್ಸನ್ನು ಸೋಲಿಸಬೇಕು ಎನ್ನುವ ಅರ್ಥದಲ್ಲಷ್ಟೇ ನಾನು ಆ ಮಾತನ್ನಾಡಿದ್ದೇನೆ. ಅದರಿಂದ ಅವರಿಗೆ ನೋವುಂಟಾಗಿದ್ದಾರೆ ವಿಷಾದಿಸುತ್ತೇನೆ'' ಎಂದು ಸಚಿವ ಅಶ್ವತ್ಥನಾರಾಯಣ ಟ್ವಿಟರ್ ನಲ್ಲಿ ಬರೆದುಕೊಂಡಿದ್ದಾರೆ.
ಪ್ರಧಾನಿಯವರನ್ನು ನರ ಹಂತಕ ಎನ್ನುವುದು, ಮುಖ್ಯಮಂತ್ರಿ ಅವರಿಗೆ ಮನೆ ಹಾಳಾಗ ಎನ್ನುವುದು @siddaramaiah ಅವರ ಸಂಸ್ಕೃತಿ ಆಗಿರಬಹುದು.
— Dr. Ashwathnarayan C. N. (@drashwathcn) February 16, 2023
ಆದರೆ, ಈ ಬಾರಿಯ ಚುನಾವಣೆಯಲ್ಲಿ ಕಾಂಗ್ರೆಸ್ಸನ್ನು ಸೋಲಿಸಬೇಕು ಎನ್ನುವ ಅರ್ಥದಲ್ಲಷ್ಟೇ ನಾನು ಆ ಮಾತನ್ನಾಡಿದ್ದೇನೆ. ಅದರಿಂದ ಅವರಿಗೆ ನೋವುಂಟಾಗಿದ್ದಾರೆ ವಿಷಾದಿಸುತ್ತೇನೆ.
3/3