Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಪರೀಕ್ಷಾ ಕೇಂದ್ರಗಳಿಗೆ ಹಿಜಾಬ್ ಧರಿಸಿ...

ಪರೀಕ್ಷಾ ಕೇಂದ್ರಗಳಿಗೆ ಹಿಜಾಬ್ ಧರಿಸಿ ಬರುವಂತಿಲ್ಲ: ಸಚಿವ ನಾಗೇಶ್

3 March 2023 6:50 PM IST
share
ಪರೀಕ್ಷಾ ಕೇಂದ್ರಗಳಿಗೆ ಹಿಜಾಬ್ ಧರಿಸಿ ಬರುವಂತಿಲ್ಲ: ಸಚಿವ ನಾಗೇಶ್

ಬೆಂಗಳೂರು: ಖಾಸಗಿ ಶಾಲೆಗಳ ಆರಂಭಕ್ಕೆ ಅರ್ಜಿ ಸಲ್ಲಿಕೆ, ಮಾನ್ಯತೆ ನವೀಕರಣ, ನಿರಾಕ್ಷೇಪಣಾ ಪತ್ರ ನೀಡಿಕೆ ಸೇರಿದಂತೆ ಶಿಕ್ಷಣ ಇಲಾಖೆಯ ವಿವಿಧ ಸೇವೆಗಳಲ್ಲಿ ಸುಧಾರಣೆ, ಸರಳೀಕರಣಕ್ಕಾಗಿ ಹೊಸ ವೆಬ್‍ಸೈಟ್ ಅನ್ನು ಆರಂಭಿಸಲಾಗಿದೆ ಎಂದು ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ತಿಳಿಸಿದ್ದಾರೆ. 

ಶುಕ್ರವಾರ ನಗರದ ಖಾಸಗಿ ಹೋಟೆಲ್‍ನಲ್ಲಿ ಆಯೋಜಿಸಿದ್ದ ಪತ್ರಿಕಾಗೋಷ್ಟಿಯಲ್ಲಿ ಮಾತನಾಡಿದ ಅವರು, ಹೊಸ ಶಾಲಾ ನೋಂದಣಿ, ಮಾನ್ಯತೆ ನವೀಕರಣ, ಪಠ್ಯಕ್ರಮದ ಎನ್.ಓ.ಸಿ, ಶಾಲೆಗಳ ಮಾಹಿತಿ ದತ್ತಾಂಶ ಸಂಗ್ರಹಣೆ ಆನ್‍ಲೈನ್ ಮೂಲಕವೇ ನೀಡಲಾಗುತ್ತದೆ. https://sts.karnataka.gov.in/SATSNEWSCHOOL/ ವೆಬ್‍ಸೈಟ್‍ನ ಮೂಲಕವೇ ಎಲ್ಲ ಪ್ರಕ್ರಿಯೆಗಳನ್ನು ನಡೆಸಲು ಅವಕಾಶ ಕಲ್ಪಿಸಲಾಗಿದೆ ಎಂದು ಹೇಳಿದರು.

ಮಾ. 9ರಿಂದ ದ್ವಿತೀಯ ಪಿಯುಸಿ ಪರೀಕ್ಷೆ ಆರಂಭವಾಗಲಿದ್ದು, ಪರೀಕ್ಷಾ ಕೇಂದ್ರಗಳಿಗೆ ‘ಹಿಜಾಬ್’ (Hijab) ಧರಿಸಿ ಬರುವಂತಿಲ್ಲ. ಎಸೆಸೆಲ್ಸಿ ಪರೀಕ್ಷೆ ಸಮಯದಲ್ಲಿಯೂ ಹಿಜಾಬ್‍ಗೆ ಅನುಮತಿ ನೀಡುವ ಪ್ರಶ್ನೆಯೇ ಇಲ್ಲ. ಹಿಂದಿನ ವರ್ಷದಂತೆ ಈ ವರ್ಷವೂ ಉತ್ತಮವಾಗಿ ಪರೀಕ್ಷೆ ಆಯೋಜನೆ ಮಾಡುತ್ತೇವೆ. ಅರ್ಧಗಂಟೆ ಮುಂಚಿತವಾಗಿ ಈ ಬಾರಿ ಮಕ್ಕಳಿಗೆ ಪರೀಕ್ಷಾ ಕೇಂದ್ರದ ಒಳಗೆ ಹೋಗುವ ವ್ಯವಸ್ಥೆ ಮಾಡಲಾಗಿದೆ. ಮಕ್ಕಳ ಸ್ನೇಹಿಯಾಗಿ ಪರೀಕ್ಷೆ ಮಾಡುತ್ತೇವೆ ಎಂದು ಸಚಿವ ನಾಗೇಶ್ ಹೇಳಿದ್ದಾರೆ.

ಶಾಲೆಗೆ ಖುದ್ದು ತೆರಳುವ 3 ಜನರ ಸಮಿತಿಯೂ ಇನ್ನು ಮುಂದೆ ಶೇ.5ರಷ್ಟು ಶಾಲೆಗಳಿಗೆ ಮಾತ್ರ ಭೌತಿಕ ಪರಿಶೀಲನೆ ಮಾಡುತ್ತದೆ. ಉಳಿದ ಶಾಲೆಗಳಿಗೆ ಆನ್‍ಲೈನ್ ಮೂಲಕ ಮಾಹಿತಿ ಪಡೆಯುತ್ತೇವೆ. ಶಿಕ್ಷಣ ಇಲಾಖೆಯ ಉಪನಿರ್ದೇಶಕರಿಗೆ ವಿಶೇಷ ಅಧಿಕಾರ ಶಿಕ್ಷಣ ಇಲಾಖೆ ಕೊಡುತ್ತಿದೆ ಎಂದು ಅವರು ಹೇಳಿದರು. 

ನಮ್ಮ ಶಿಕ್ಷಣ ವ್ಯವಸ್ಥೆಯಲ್ಲಿ ಹೊಸ ಶಾಲೆಗಳನ್ನು ತೆರೆಯಲು ಮತ್ತು ನವೀಕರಣಕ್ಕೆ ಸರಕಾರದಿಂದ ಎನ್‍ಒಸಿ ಕಡ್ಡಾಯವಾಗಿ ಪಡೆಯಬೇಕು. ಸರಕಾರದ ಪೋರ್ಟಲ್ ವ್ಯವಸ್ಥೆಯಲ್ಲಿ ಅರ್ಜಿ ಸಲ್ಲಿಕೆ ವಿಧಾನವನ್ನು ಸರಳಗೊಳಿಸಿ ಪಾರದರ್ಶಕವಾಗಿಸಲಾಗಿದೆ. ಎನ್‍ಒಸಿ ಪಡೆಯಲು ಸಚಿವರು, ಕಮಿಷನರ್, ಕಾರ್ಯದರ್ಶಿಗಳ ಬಳಿ ಬರಬೇಕಾಗಿಲ್ಲ. ಎನ್‍ಒಸಿ ತಕ್ಷಣವೇ ಸಿಗುವಂತೆ ಮಾಡಲಾಗಿದೆ. ಪ್ರತಿಯೊಂದು ಪ್ರಕ್ರಿಯೆ ಮೊದಲು 8 ಹಂತದಲ್ಲಿ ಇತ್ತು. ಈಗ 4 ಹಂತಕ್ಕೆ ಇಳಿಸಿದ್ದೇವೆ. ಮೊದಲು 27 ದಿನ ಸಮಯ ಆಗುತ್ತಿತ್ತು, ಈಗ 17 ದಿನಕ್ಕೆ ಪ್ರಕ್ರಿಯೆ ಮುಗಿಸುತ್ತಿದ್ದೇವೆ ಎಂದರು.

ಅಕ್ರಮ ಶಾಲೆಗಳ ಕುರಿತು ವೆಬ್‍ಸೈಟ್‍ನಲ್ಲಿ ಮಾಹಿತಿ: ರಾಜ್ಯದಲ್ಲಿನ ಅಕ್ರಮ ಶಾಲೆಗಳನ್ನು ಗುರುತಿಸಲಾಗಿದ್ದು, ನೊಟೀಸ್ ಅನ್ನು ಜಾರಿ ಮಾಡಲಾಗಿದೆ. ಪರೀಕ್ಷೆಗಳ ನಂತರ ಈ ಶಾಲೆಗಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುತ್ತದೆ. ಮಕ್ಕಳಿಗೆ ತೊಂದರೆ ಆಗಬಾರದು ಎಂದು ಕ್ರಮವನ್ನು ಸ್ವಲ್ಪ ತಡವಾಗಿದೆ ತೆಗೆದುಕೊಳ್ಳಲಾಗಿದೆ. ಮುಂದಿನ ವರ್ಷದಿಂದ ಅಕ್ರಮ ಶಾಲೆಗಳ ಕುರಿತು ವೆಬ್ ಸೈಟ್ ನಲ್ಲಿ ಮಾಹಿತಿ ಹಾಕುತ್ತೇವೆ. ಪೋಷಕರು ಅದನ್ನ ನೋಡಿಕೊಂಡು ಶಾಲೆಗೆ ಸೇರಿಸಬೇಕು ಎಂದು ಅವರು ಮಾಹಿತಿ ನೀಡಿದರು.

10 ಮತ್ತು 12 ನೆ ತರಗತಿಗೆ ಪರೀಕ್ಷೆ ಮುಂಚೆ ಗ್ರೇಸ್ ಮಾರ್ಕ್ಸ್ ಕೊಡುವ ಬಗ್ಗೆ ಯಾವುದೇ ನಿರ್ಧಾರವಾಗಿಲ್ಲ. ಹಿಂದೆ ಇದ್ದ ನಿಯಮದ ಪ್ರಕಾರವೇ ಗ್ರೇಸ್ ಮಾರ್ಕ್ಸ್ ಬಗ್ಗೆ ತೀರ್ಮಾನ ಆಗುತ್ತದೆ. ಈ ಬಾರಿ ವಿದ್ಯಾರ್ಥಿಗಳಿಗೆ ಅನುಕೂಲ ಆಗಲು ಬಹು ಆಯ್ಕೆ ಪ್ರಶ್ನೆಗಳನ್ನು ಮಾತ್ರ ನೀಡಲಾಗುತ್ತಿದೆ ಎಂದು ಅವರು ಸ್ಪಷ್ಟಪಡಿಸಿದರು.

ಇದನ್ನೂ ಓದಿ: ನಾನು ಮುಖ್ಯಮಂತ್ರಿ ಹುದ್ದೆಯ ಆಕಾಂಕ್ಷಿ: ಸಿದ್ದರಾಮಯ್ಯ

share
Next Story
X