ಸಂಸದೆ ಸುಮಲತಾ ಅಂಬರೀಶ್ ನಾಳೆಯೇ ಬಿಜೆಪಿ ಸೇರುತ್ತಾರೆ ಎಂದ ಜೆಡಿಎಸ್ ಶಾಸಕ

ಮೈಸೂರು: ಮಂಡ್ಯ ಸಂಸದೆ ಸುಮಲತಾ ಅಂಬರೀಶ್ ಅವರು ನಾಳೆಯೇ ಬಿಜೆಪಿ ಸೇರುತ್ತಾರೆ. ಈ ಬಗ್ಗೆ ನನಗೆ ಮಾಹಿತಿ ಬಂದಿದೆ ಎಂದು ಜೆಡಿಎಸ್ ಶಾಸಕ ಸಿ.ಎಸ್ ಪುಟ್ಟರಾಜು ಹೇಳಿದ್ದಾರೆ.
ಇಂದು ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 'ನನಗೆ ಬಂದಿರೋ ಮಾಹಿತಿ ಪ್ರಕಾರ ಸುಮಲತಾ ಅವರು ನಾಳೆಯೇ ಬಿಜೆಪಿ ಸೇರುತ್ತಾರೆ. ಮಾ. 12ರಂದು ಮೋದಿ ಕಾರ್ಯಕ್ರಮದಲ್ಲೇ ಪಕ್ಷ ಸೇರ್ಪಡೆಗೆ ತೀರ್ಮಾನ ಮಾಡಿದ್ದರು. ಆದರೆ, ಸರಕಾರಿ ಕಾರ್ಯಕ್ರಮ ಆಗಿದ್ದರಿಂದ ಅವಕಾಶ ಸಿಗಲಿಲ್ಲ' ಎಂದು ಹೇಳಿದರು.
''ಮಂಡ್ಯದಲ್ಲಿ ಬಿಜೆಪಿ ಬಲಿಷ್ಠ ಆದಷ್ಟು ಜೆಡಿಎಸ್ ಮತ್ತಷ್ಟು ಎತ್ತರಕ್ಕೆ ಹೋಗುತ್ತೆ. ಜಿಲ್ಲೆಯ 7ಕ್ಕೆ 7 ವಿಧಾನಸಭೆ ಕ್ಷೇತ್ರಗಳಲ್ಲಿಯೂ ಪ್ರಚಂಡ ಬಹುಮತದೊಂದಿಗೆ ಗೆಲ್ಲುತ್ತೆ'' ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಸಿ.ಎಸ್ ಪುಟ್ಟರಾಜು- ಜೆಡಿಎಸ್ ಶಾಸಕರು
ಈಗಾಗಲೇ ಸಂಸದೆ ಸುಮಲತಾ ಅಂಬರೀಶ್ ಅವರು ಮುಂಬರಲಿರುವ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸುವ ಮೂಲಕ ರಾಜ್ಯ ರಾಜಕಾರಣಕ್ಕೆ ಬರಬೇಕು ಎಂದು ಅವರ ಬೆಂಬಗರ ಸಭೆಯಲ್ಲಿ ನಿರ್ಣಯ ಕೈಗೊಳ್ಳಲಾಗಿದೆ. ಇನ್ನು ನಾಳೆ ಸುಮಲತಾ ಅಂಬರೀಶ್ ಅವರು ಸುದ್ದಿಗೋಷ್ಠಿ ಕರೆದಿದ್ದು, ಇನ್ನಷ್ಟು ಕುತೂಹಲ ಮೂಡಿಸಿದೆ.







