ಕಪೋಲ ಕಲ್ಪಿತ ಪಾತ್ರಗಳಾದ 'ಉರಿಗೌಡ-ನಂಜೇಗೌಡ' ಹೆಸರಿನ ಕಮಾನು ಕಿತ್ತು ಹಾಕಿ: ಸಿದ್ದರಾಮಯ್ಯ ಕಿಡಿ
''ಮಂಡ್ಯಕ್ಕಷ್ಟೇ ಅಲ್ಲ, ಇಡೀ ಕರ್ನಾಟಕದ ಜನತೆಗೆ ಮಾಡಿರುವ ಅವಮಾನ''

ಮಂಡ್ಯ: ಮಾರ್ಚ್ 12 ರಂದು ಮಂಡ್ಯಕ್ಕೆ ಭೇಟಿ ನೀಡುತ್ತಿರುವ ಪ್ರಧಾನಿ ನರೇಂದ್ರ ಮೋದಿ ಅವರನ್ನು ಸ್ವಾಗತಿಸಿ ನಗರದಲ್ಲಿ ವಿವಾದಿತ 'ಉರಿಗೌಡ & ನಂಜೇಗೌಡ' ಹೆಸರಿನ ಸ್ವಾಗತ ದ್ವಾರ ಭಾರೀ ವಿರೋಧಕ್ಕೆ ಕಾರಣವಾಗಿದ್ದು, ಇದನ್ನು ತಕ್ಷಣ ತೆರವುಗೊಳಿಸುವಂತೆ ವಿಪಕ್ಷ ನಾಯಕ ಸಿದ್ದರಾಮಯ್ಯ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಒತ್ತಾಯಿಸಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಅವರು ''ಪ್ರಧಾನಿ ಮೋದಿ ಸ್ವಾಗತಕ್ಕಾಗಿ ಕಪೋಲ ಕಲ್ಪಿತ ಪಾತ್ರಗಳಾದ ಉರಿಗೌಡ-ನಂಜೇಗೌಡ ಹೆಸರಿನ ಕಮಾನು ಹಾಕಿರುವುದು ಅಪ್ರತಿಮ ಸ್ವಾತಂತ್ರ್ಯ ಹೋರಾಟಗಾರರನ್ನು ನೀಡಿದ ಮಂಡ್ಯಕ್ಕೆ ಮಾತ್ರವಲ್ಲ ಇಡೀ ಕರ್ನಾಟಕದ ಜನತೆಗೆ ಮಾಡಿರುವ ಅವಮಾನ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಕ್ಷಣ ಮಧ್ಯೆ ಪ್ರವೇಶಿಸಿ ಈ ಸ್ವಾಗತ ಕಮಾನನ್ನು ಕಿತ್ತು ಹಾಕಿಸಬೇಕು'' ಎಂದು ಒತ್ತಾಯಿಸಿದ್ದಾರೆ.
ಮಾರ್ಚ್ 12 ರಂದು (ರವಿವಾರ) ಪ್ರಧಾನಿ ಮೋದಿ ಅವರು ಮಂಡ್ಯದ ಗೆಜ್ಜಲಗೆರೆಯಲ್ಲಿ ಮೈಸೂರು-ಬೆಂಗಳೂರು ಎಕ್ಸ್‌ಪ್ರೆಸ್‌ವೇಯನ್ನು ಉದ್ಘಾಟಿಸಲಿದ್ದು, ಅದೇ ದಿನ ಬೃಹತ್ ರೋಡ್‌ಶೋ ನಡೆಸಲಿದ್ದಾರೆ. ಈ ಹಿನ್ನೆಲೆಯಲ್ಲಿ ಅವರನ್ನು ಸ್ವಾಗತಿಸಿ 'ಉರಿಗೌಡ ಮತ್ತು ನಂಜೇಗೌಡ' ಹೆಸರಿನಲ್ಲಿ ಸ್ವಾಗತ ದ್ವಾರ ಅಳವಡಿಸಲಾಗಿದೆ.
ಇದನ್ನೂ ಓದಿ: ಪ್ರಧಾನಿ ಮೋದಿ ಸ್ವಾಗತಿಸಿ ಮಂಡ್ಯದಲ್ಲಿ ವಿವಾದಿತ 'ಉರಿಗೌಡ & ನಂಜೇಗೌಡ' ಹೆಸರಿನ ಫ್ಲೆಕ್ಸ್ ಪ್ರತ್ಯಕ್ಷ: ತೀವ್ರ ಆಕ್ಷೇಪ
.@PMOIndia ಸ್ವಾಗತಕ್ಕಾಗಿ ಕಪೋಲ ಕಲ್ಪಿತ ಪಾತ್ರಗಳಾದ ಉರಿಗೌಡ-ನಂಜೇಗೌಡ ಹೆಸರಿನ ಕಮಾನು ಹಾಕಿರುವುದು
— Siddaramaiah (@siddaramaiah) March 11, 2023
ಅಪ್ರತಿಮ ಸ್ವಾತಂತ್ರ್ಯ
ಹೋರಾಟಗಾರರನ್ನು ನೀಡಿದ ಮಂಡ್ಯಕ್ಕೆ ಮಾತ್ರವಲ್ಲ ಇಡೀ ಕರ್ನಾಟಕದ ಜನತೆಗೆ ಮಾಡಿರುವ ಅವಮಾನ.@CMofKarnataka ತಕ್ಷಣ ಮಧ್ಯೆ ಪ್ರವೇಶಿಸಿ ಈ ಸ್ವಾಗತ ಕಮಾನನ್ನು ಕಿತ್ತು ಹಾಕಿಸಬೇಕು. pic.twitter.com/M2yeKqgcrR







